ಬೆಂಗಳೂರು – ಅಡುಗೆ ಅನಿಲ ಪೆಟ್ರೋಲ್ ಡೀಸೆಲ್ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರು ಇದೀಗ ಮತ್ತೊಂದು ಹೊರೆಯನ್ನು ಎದುರಿಸಬೇಕಾದ ಅನಿವಾರ್ಯ ಪರಿಸ್ಥಿತಿ ಉಂಟಾಗಿದೆ. ಆದರೆ ಇದು ಎಲ್ಲ ನಾಗರಿಕರಿಗೂ ಅನ್ವಯವಾಗುವುದಿಲ್ಲ ಯಾರು ತಮ್ಮ ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಲಿಯಲು ಕಳುಹಿಸುತ್ತಿದ್ದಾರೋ ಅಂತವರು ಈ ಒರೆಯನ್ನು ಹೊರಬೇಕಾಗಿದೆ.
ಕೋವಿಡ್ ಸಾಂಕ್ರಾಮಿಕ ದ ಕಾರಣದಿಂದಾಗಿ ಆರ್ಥಿಕ ಚಟುವಟಿಕೆಗಳು ಕುಸಿತ ಕಂಡ ಹಿನ್ನೆಲೆಯಲ್ಲಿ ಅನೇಕರು ನಿರುದ್ಯೋಗಿಗಳಾಗಿದ್ದರು ಈ ಹಿನ್ನೆಲೆಯಲ್ಲಿ ಜನಸಾಮಾನ್ಯರ ಸಂಕಷ್ಟವನ್ನು ಗಮನಿಸಿದ್ದೇವೆ ಎಂದು ಹೇಳಿದ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಳೆದ ಎರಡು ವರ್ಷ ವಿದ್ಯಾರ್ಥಿಗಳ ಶಾಲಾ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡಿರಲಿಲ್ಲ ಆದರೆ ಇದೀಗ ಕೋವಿಡ್ ಸಾಂಕ್ರಾಮಿಕದ ಪ್ರಾಬಲ್ಯ ಕಡಿಮೆಯಾಗಿದೆ ಜೊತೆಗೆ ಆರ್ಥಿಕ ಚಟುವಟಿಕೆಗಳು ಸಹಜ ಸ್ಥಿತಿಗೆ ತಲುಪಿವೆ ಉದ್ಯೋಗ ಸೃಷ್ಟಿ ಕೂಡ ಸಾಮಾನ್ಯವಾಗಿದೆ.
ಇದಕ್ಕೆ ಪ್ರತಿಯಾಗಿ ಶಿಕ್ಷಣ ಸಂಸ್ಥೆಗಳ ಆಡಳಿತಾತ್ಮಕ ವೆಚ್ಚ ಹೆಚ್ಚಳವಾಗಿದೆ ಶಿಕ್ಷಕರು ಮತ್ತು ಸಿಬ್ಬಂದಿಯ ವೇತನ ಹೆಚ್ಚಳ ಮಾಡಲಾಗಿದೆ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಸೃಷ್ಟಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿ ಈ ವರ್ಷ ವಿದ್ಯಾರ್ಥಿಗಳ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಿವೆ.
ಕೆಲವು ಶಿಕ್ಷಣ ಸಂಸ್ಥೆಗಳು ಶೇಕಡ 10 ರಿಂದ 20 ರಷ್ಟು ಹೆಚ್ಚಳ ಮಾಡಿ ಪೋಷಕರನ್ನ ಸಮಾಧಾನಪಡಿಸಲು ಯತ್ನಿಸಿದರೆ ಮತ್ತೆ ಕೆಲವು ಶಿಕ್ಷಣ ಸಂಸ್ಥೆಗಳು 30 ರಿಂದ 40 ರಷ್ಟು ಶುಲ್ಕವನ್ನು ಹೆಚ್ಚಳ ಮಾಡಿವೆ. ಶುಲ್ಕ ಹೆಚ್ಚಳದ ಕುರಿತಂತೆ ತಮ್ಮ ಮಕ್ಕಳ ಮೂಲಕ ಪೋಷಕರಿಗೆ ಶಿಕ್ಷಣ ಸಂಸ್ಥೆಗಳು ಸುತ್ತೋಲೆಯನ್ನು ರವಾನಿಸಿದೆ ಈ ಸುತ್ತೋಲೆಗಳನ್ನು ಗಮನಿಸಿದ ಪೋಷಕರು ಹೆಚ್ಚಳಗೊಂಡಿರುವ ಶುಲ್ಕದ ಪ್ರಮಾಣವನ್ನು ಕಂಡು ಹೌಹಾರಿದ್ದಾರೆ.
ಈ ಬಗ್ಗೆ ಹಲವರು ಶಿಕ್ಷಣ ಸಂಸ್ಥೆಗಳಿಗೆ ಕರೆ ಮಾಡಿ ಇಷ್ಟೊಂದು ಶುಲ್ಕದ ಹೊರೆ ಕೊರಲು ಸಾಧ್ಯವಿಲ್ಲ ಎಂದು ಹೇಳಿದರೆ ಅನೇಕರು ಡಿಡಿಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಡಿಪಿಐ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆದಿದ್ದು ನಿಗದಿತ ಮಿತಿಯೊಳಗೆ ಶುಲ್ಕ ಹೆಚ್ಚಳ ಮಾಡಬೇಕು ಅದನ್ನು ಮೀರಿ ಹೆಚ್ಚಳ ಮಾಡಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಪೋಷಕರಿಂದ ಹೆಚ್ಚಳಗೊಂಡಿರುವ ಶುಲ್ಕದ ಬಗ್ಗೆ ಪ್ರತಿರೋಧ ವ್ಯಕ್ತವಾಗುತ್ತಿದ್ದಂತೆ ಸಭೆ ಸೇರಿದ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಒಕ್ಕೂಟ ಈ ವರ್ಷ ಶೇಕಡ 10 ರಿಂದ 15 ರಷ್ಟು ಮಾತ್ರ ಶುಲ್ಕ ಹೆಚ್ಚಳ ಮಾಡಬೇಕು ಎಂದು ತನ್ನ ಎಲ್ಲಾ ಸಂಸ್ಥೆಗಳಿಗೆ ಸಲಹೆ ಮಾಡಿದೆ ಶೇಕಡ 10 ರಿಂದ 15 ರಷ್ಟು ಶುಲ್ಕ ಹೆಚ್ಚಳವನ್ನು ಮೀರಿ ಯಾರಾದರೂ ಅತ್ಯಧಿಕ ಶುಲ್ಕಕ್ಕೆ ಬೇಡಿಕೆ ಇಟ್ಟಲ್ಲಿ ಒಕ್ಕೂಟಕ್ಕೆ ದೂರು ಸಲ್ಲಿಸಬಹುದಾಗಿದೆ ಎಂದು ಪೋಷಕರಿಗೆ ಹೇಳಿದೆ ಅಲ್ಲದೆ ಒಕ್ಕೂಟ ತೆಗೆದುಕೊಂಡ ಅಲ್ಲದೆ ತೀರ್ಮಾನವನ್ನು ಧಿಕ್ಕರಿಸಿ ಶುಲ್ಕ ಹೆಚ್ಚಳ ಮಾಡಿದಲ್ಲಿ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ.