ಬೆಂಗಳೂರು, ಏ.12- ನಟಿ ಹಾಗೂ ಬಿಜೆಪಿ ಸ್ಟಾರ್ ಪ್ರಚಾರಕಿ ಶೃತಿ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ವಾರ ನಟಿ ಶೃತಿ ಹಿರೇಕೆರೂರಿನಲ್ಲಿ ಸಚಿವ ಬಿ.ಸಿ.ಪಾಟೀಲ್ ಪರ ಪ್ರಚಾರ ನಡೆಸಿ ಪಕ್ಷದ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಪಾಲ್ಗೊಂಡು ಜೆಡಿಎಸ್ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಪಕ್ಷ ಪಕ್ಷಗಳ ನಡುವೆ ವೈರತ್ವ, ದ್ವೇಷ, ಹಾಗೂ ಭಯ ಭೀತಿಯನ್ನುಂಟು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಲಂ 505 ರಡಿ ಹಿರೆಕೇರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರೇಕೆರೂರು ನೋಡಲ್ ಅಧಿಕಾರಿ ಪಂಪಾಪತಿ ಎಂಬವರು ನಟಿ ಶೃತಿ ವಿರುದ್ಧ ದೂರು ದಾಖಲಿಸಿದ್ದರು. ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.
ಮೇಜರ್ ಆಗಿ ರಾಜ್ಯದಲ್ಲಿ ಮೂರು ಪಕ್ಷಗಳಿವೆ. ಯಾವುದೇ ಬೇರೆ ಪಕ್ಷದ ಬಗ್ಗೆ ನಾನು ಜಾಸ್ತಿ ಮಾತನಾಡಲ್ಲ. ಆದರೆ ಒಂದೆ ಮಾತಿನಲ್ಲಿ ಹೇಳಿ ಮುಗಿಸಿ ಬಿಡುತ್ತೇನೆ ಎಂದಿದ್ದರು.
ನಿಮ್ಮ ವಂಶ ಬಿಟ್ಟು ಬೇರೆಯವರ ವಂಶ ಅಭಿವೃದ್ದಿ ಆಗಬೇಕಾದರೆ ಜೆಡಿಎಸ್ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಹೊರದೇಶದ ವಂಶ ಅಭಿವೃದ್ಧಿ ಆಗಬೇಕಾದರೆ ಕಾಂಗ್ರೆಸ್ಗೆ ಮತ ಹಾಕಿ. ನಿಮ್ಮ ವಂಶದ ಜೊತೆಗೆ ದೇಶದ ಅಭಿವೃದ್ಧಿ ಆಗಬೇಕಾದರೆ ಬಿಜೆಪಿಗೆ ಮತ ಹಾಕಿ ಎಂದು ಹೇಳಿದ್ದರು.
ಸಮಾವೇಶದಲ್ಲಿ ಕೈ- ದಳ ಪಕ್ಷದ ಕುಟುಂಬ ರಾಜಕಾರಣ ಕುರಿತು ಅಪಹಾಸ್ಯ ಮಾಡಿ ವ್ಯಂಗ್ಯವಾಡಿದ್ದರು. ಶೃತಿ ಅವರ ಮಾತಿನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.
Previous ArticleElectionಗಾಗಿ ಒಂದು 1000 ಕೋಟಿ ರೂಪಾಯಿ ಕೈ ಬದಲು
Next Article ಬಂಡಾಯದ ಧಗೆಯಲ್ಲಿ ಬಸವಳಿದ BJP

