ಬೆಂಗಳೂರು – ಬೆಂಗಳೂರಿನ ಅತ್ಯಂತ ಪ್ರತಿಷ್ಠಿತ ಕ್ಷೇತ್ರವೆಂದು ಹೆಸರು ಪಡೆದಿರುವ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಆಯ್ಕೆ ಬಯಸಿ ಹಿರಿಯ ನಾಯಕ ಕೆ ಜೆ ಜಾರ್ಜ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಕೆ.ಜೆ. ಚಾರ್ಜ್ ತಮ್ಮ ಬೆಂಬಲಿಗರು ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ರೋಡ್ ಶೋ ನಡೆಸುವ ಮೂಲಕ ಗಮನ ಸೆಳೆದರು.
ಬೆಳಿಗ್ಗೆ ಬಾಣಸವಾಡಿಯ ಶ್ರೀನಿಧಿ ಹೋಟೆಲ್ ಸಮೀಪ ಸಮಾವೇಶಗೊಂಡ ಸಾವಿರಾರು ಸಂಖ್ಯೆಯ ಪಕ್ಷದ ಕಾರ್ಯಕರ್ತರು ತೆರೆದ ವಾಹನದಲ್ಲಿ ಜಾರ್ಜ್ ಅವರನ್ನು ಕುಳ್ಳರಿಸಿಕೊಂಡು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಪಕ್ಷ ಮತ್ತು ಜಾರ್ಜ್ ಅವರ ಪರ ಜಯ ಘೋಶ ಮುಗಿಲು ಮುಟ್ಟಿತು.
ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಜಾರ್ಜ್ ಅವರ ರೋಡ್ ಶೋ ಒಂದು ರೀತಿಯಲ್ಲಿ ಬೃಹತ್ ಶಕ್ತಿ ಪ್ರದರ್ಶನವನ್ನು ನೆನಪಿಸಿತು.ಈ ಮೂಲಕ ಇದು ಪ್ರತಿಪಕ್ಷಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿತು.