Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಂಕಿತ ಉಗ್ರರ ಜಾಲದ ಕುರಿತು ಆಳವಾದ ತನಿಖೆ | Bengaluru
    ಬೆಂಗಳೂರು

    ಶಂಕಿತ ಉಗ್ರರ ಜಾಲದ ಕುರಿತು ಆಳವಾದ ತನಿಖೆ | Bengaluru

    vartha chakraBy vartha chakraಜುಲೈ 30, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.29- ರಾಜ್ಯದ ಹಲವೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಬಂಧಿತರಾಗಿರುವ ಐವರು ಶಂಕಿತ ಉಗ್ರರು ಹಾಗೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಶಂಕಿತ ಉಗ್ರ ಕೇರಳ ಮೂಲದ ಟಿ. ನಾಸೀರ್‌ನನ್ನು ಮುಖಾಮುಖಿಯಾಗಿಸಿ ಸಿಸಿಬಿ ಅಧಿಕಾರಿಗಳು ವಿಚಾರಣೆ ಕೈಗೊಂಡಿದ್ದಾರೆ.
    2008ರ ಬೆಂಗಳೂರಿನ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ನಾಸಿರ್‌ನನ್ನು ಎಂಟು ದಿನಗಳ ಕಸ್ಟಡಿಗೆ ಪಡೆದಿರುವ ಸಿಸಿಬಿ ಅಧಿಕಾರಿಗಳು ನಿನ್ನೆ ಜೈಲಿನಿಂದ ಆತನನ್ನು ಕರೆತಂದು ಮಡಿವಾಳದ ವಿಚಾರಣಾ ಕೇಂದ್ರದಲ್ಲಿಟ್ಟು ತೀವ್ರ ವಿಚಾರಣೆ ನಡೆಸಿದ್ದಾರೆ.
    ವಿಧ್ವಂಸಕ ಕೃತ್ಯಕ್ಕೆ ಸಿದ್ಧತೆ ನಡೆಸಿದ್ದಾಗ ಬಂಧಿತರಾಗಿದ್ದ ಐವರು ಆರೋಪಿಗಳು ವಿಚಾರಣೆ ವೇಳೆ ತಮ್ಮ ಪಾತ್ರಗಳ ಕುರಿತು ಬಾಯ್ಬಿಟ್ಟಿದ್ದಾರೆ. ಈ ಎಲ್ಲ ಮಾಹಿತಿಯನ್ನು ಕ್ರೋಡೀಕರಿಸಿ ನಸೀರ್‌ನನ್ನು ಪ್ರಶ್ನಿಸಲಾಗುತ್ತಿದೆ. ಮೊದಲ ದಿನ ಆತ ವಿಚಾರಣೆಗೆ ತಡವರಿಸಿದ್ದು, ಮುಂದಿನ ಹಂತದಲ್ಲಿ ಆತ ನೀಡುವ ಹೇಳಿಕೆ ಆಧರಿಸಿ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಪ್ರಕರಣ ಸಂಬಂಧ ನಸೀರ್‌ನನ್ನು 8 ದಿನಗಳು ಕಸ್ಟಡಿಗೆ ಪಡೆಯಲಾಗಿದ್ದು, ಇನ್ನುಳಿದ ಐವರ ಕಸ್ಟಡಿ ಅವಧಿಯನ್ನು ಮತ್ತೆ 10 ದಿನಗಳಿಗೆ ನ್ಯಾಯಾಲಯವು ಮುಂದುವರೆಸಿರುವುದರಿಂದ ಹೆಚ್ಚಿನ ಹೀಗಾಗಿ ಸಮಯಾವಕಾಶ ದೊರೆತಿದ್ದು, ಹಂತ ಹಂತವಾಗಿ ಪ್ರಶ್ನಿಸಲಾಗುತ್ತದೆ. ವಿಚಾರಣೆ ವೇಳೆ ನಸೀರ್‌ ಹಾಗೂ ಆತನ ಐವರು ಸಹಚರರನ್ನು ಮುಖಾಮುಖಿಯಾಗಿಸಿ ಕೂಡಾ ಪ್ರಶ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
    ವಿಧ್ವಂಸಕ ಕೃತ್ಯಕ್ಕೆ ಸಂಚು ನಡೆಸಿದ್ದ ಜು.19 ರಂದು ಹೆಬ್ಬಾಳ ಸಮೀಪದ ಸುಲ್ತಾನ್‌ ಪಾಳ್ಯದಲ್ಲಿ ಸೈಯದ್‌ ಸುಹೇಲ್‌ಖಾನ್‌, ಪುಲಿಕೇಶಿ ನಗರದ ಮೊಹಮದ್‌ ಫೈಜಲ್‌ ರಬ್ಬಾನಿ, ಕೊಡಿಗೇಹಳ್ಳಿಯ ಮಹಮದ್‌ ಉಮರ್‌, ಜಾಹೀದ್‌ ತಬ್ರೇಜ್‌ ಹಾಗೂ ಆರ್‌.ಟಿ.ನಗರದ ಸೈಯದ್‌ ಮುದಾಸೀರ್‌ ಪಾಷರನ್ನು ಸಿಸಿಬಿ ಬಂಧಿಸಿತ್ತು.
    ವಿಚಾರಣೆ ವೇಳೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಈ ಐವರನ್ನು ಎಲ್‌ಇಟಿ ಸಂಘಟನೆಗೆ ಕೇರಳ ಮೂಲದ ನಸೀರ್‌ ನೇಮಕಗೊಳಿಸಿದ್ದ ಸಂಗತಿ ಬೆಳಕಿಗೆ ಬಂದಿತ್ತು. ಅಲ್ಲದೆ ವಿಧ್ವಂಸಕ ಕೃತ್ಯದ ಸಂಚಿನ ರೂವಾರಿ ಸಹ ನಸೀರ್‌ ಆಗಿದ್ದಾನೆ ಎಂಬುದು ಗೊತ್ತಾಗಿತ್ತು. ಹೀಗಾಗಿ ತನಿಖೆಗೆ ಆತನನ್ನು ವಶಕ್ಕೆ ಪಡೆದು ಸಿಸಿಬಿ ವಿಚಾರಣೆ ನಡೆಸುತ್ತಿದೆ.

    ಬ್ಯಾಂಕ್‌ ಖಾತೆಗಳ ವಿವರ:
    ವಿಧ್ವಂಸಕ ಕೃತ್ಯ ನಡೆಸಲು ಬಂಧಿತ ಐವರು ಶಂಕಿತ ಉಗ್ರರಿಗೆ ವಿದೇಶದಲ್ಲಿರುವ ಮಹಮ್ಮದ್‌ ಜುನೈದ್‌ ಆರ್ಥಿಕ ನೆರವು ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದ ಹಿನ್ನಲೆಯಲ್ಲಿ ಆರೋಪಿಗಳ ಬ್ಯಾಂಕ್‌ ಖಾತೆಗಳಲ್ಲಿ ಹಣಕಾಸು ವಹಿವಾಟಿನ ಬಗ್ಗೆ ಅಧಿಕೃತ ಸಂಬಂಧಿಸಿದ ಬ್ಯಾಂಕ್‌ಗಳಿಗೆ ಪತ್ರ ಬರೆದು ಮಾಹಿತಿ ಪಡೆಯಲಾಗಿದೆ.
    ಎಲ್ಲಾ ಆರೋಪಿಗಳು ಒಂದೊಂದೇ ಬ್ಯಾಂಕ್‌ ಖಾತೆಯನ್ನು ಹೊಂದಿದ್ದಾರೆ. ಇದುವರೆಗೆ ಆರೋಪಿಗಳಿಗೆ ವಿದೇಶದಿಂದ ಎಷ್ಟುಹಣ ಬಂದಿದೆ ಎಂಬುದು ಖಚಿತವಾಗಿಲ್ಲ.
    ಕೆಲವರು 25 ಲಕ್ಷ ರೂ,15 ಲಕ್ಷ ರೂ. ಹೀಗೆ ಒಂದೊಂದು ರೀತಿ ಮಾತುಗಳು ಕೇಳಿ ಬಂದಿವೆ. ಆದರೆ ನಿಖರವಾಗಿ ಬ್ಯಾಂಕ್‌ ಖಾತೆಗಳ ಪರಿಶೀಲನೆ ಬಳಿಕ ಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

    Verbattle
    Verbattle
    Verbattle
    Bangalore Bengaluru terror plot ಉಗ್ರ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿ.ಟಿ.ರವಿಗೆ ಬಿಜೆಪಿ ಹೈಕಮಾಂಡ್ ಗಿಫ್ಟ್ | CT Ravi
    Next Article ಪರಮೇಶ್ವರ್ ನೇತೃತ್ವದಲ್ಲಿ ಸಮನ್ವಯ ಸಮಿತಿ | G Parameshwar
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JoshuaAborn ರಲ್ಲಿ BJP-JDS ಮೈತ್ರಿ – ತುಮಕೂರಿನಲ್ಲಿ ಇವರೆಲ್ಲರೂ ಪಕ್ಷಕ್ಕೆ ಗುಡ್ ಬೈ
    • LinwoodGah ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • Uqhpef ರಲ್ಲಿ ಬಾಂಗ್ಲಾದೇಶಿಯರ ಅಡಗುದಾಣವಾದ ಕರ್ನಾಟಕ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.