Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಕಾರ್ಯಕರ್ತರ ಗತಿ ಅಧೋಗತಿ | Karnataka Congress
    ಸುದ್ದಿ

    ಕಾಂಗ್ರೆಸ್ ಕಾರ್ಯಕರ್ತರ ಗತಿ ಅಧೋಗತಿ | Karnataka Congress

    vartha chakraBy vartha chakraಆಗಷ್ಟ್ 6, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.6- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಅಸ್ತಿತ್ವಕ್ಕೆ ಬಂದ ನಂತರ ಕಾರ್ಯಕರ್ತರನ್ನು ಕೇಳುವವರಿಲ್ಲ. ಕೆಲ ಸಚಿವರು ಹಿರಿಯ ಶಾಸಕರನ್ನು ಗೌರವಿಸುತ್ತಿಲ್ಲ, ವರ್ಗಾವಣೆ, ಅನುದಾನ ಬಿಡುಗಡೆ ಸರಿದಂತೆ ಇತರ ವಿಷಯಗಳಲ್ಲಿ ಶಾಸಕರ ಮಾತುಗಳಿಗೆ ಬೆಲೆ ನೀಡದೆ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಅಸಮಾಧಾನಗಳು ವ್ಯಾಪಕವಾಗಿವೆ.

    ಕಾರ್ಯಕರ್ತರನ್ನು ಪಕ್ಷದ ಕಚೇರಿ ಮತ್ತು ಬಿಜೆಪಿ ವಿರುದ್ಧದ ಹೋರಾಟಕ್ಕೆ ಸೀಮಿತಗೊಳಿಸಲಾಗಿದೆ. ಕೆಲವು ಮಂತ್ರಿಗಳಂತೂ ಕಾರ್ಯಕರ್ತರತ್ತ ತಿರುಗಿಯೂ ನೋಡುವುದಿಲ್ಲ. ಶಾಸಕರಿಗೆ ಮನ್ನಣೆ ನೀಡದವರು ಕಾರ್ಯಕರ್ತರನ್ನು ಹೇಗೆ ಪರಿಗಣಿಸುತ್ತಾರೆ ಎಂದು ಕಾರ್ಯಕರ್ತರ ಬಹು ದೊಡ್ಡ ವರ್ಗ ಅಸಮಧಾನ ವ್ಯಕ್ತಪಡಿಸಿದೆ.

    ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಕೆಲವು ಶಾಸಕರು, ಹಿರಿಯ ಕಾರ್ಯಕರ್ತರು ತಮ್ಮ ಅಸಮಧಾನ ತೋಡಿಕೊಂಡಿದ್ದಾರೆ.

    ಇದನ್ನು ಗಂಭೀರವಾಗಿ ಪರಿಗಣಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನ ಕಳೆಯುವ ಮೊದಲೆ ಇಂತಹ ಆರೋಪ ಕೇಳಿ ಬಂದಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದು,ತಕ್ಷಣವೇ ಈ ಅಸಮಧಾನಕ್ಕೆ ಮದ್ದು ನೀಡುವಂತೆ ಸಲಹೆ ಮಾಡಿದ್ದಾರೆ ಎನ್ನಲಾಗಿದೆ.

    ಈ ಹಿನ್ನೆಲೆಯಲ್ಲಿ,ಶಾಸಕರ ಅಸಮಾಧಾನಗಳನ್ನು ತಣಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆಯಿಂದ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಸಭೆ ನಡೆಸಲು ಮುಂದಾಗಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲಾವಾರು ಸಭೆಗಳು ಹಂತ ಹಂತವಾಗಿ ನಡೆಯಲಿವೆ.ಈ ಸಭೆಯಲ್ಲಿ ಶಾಸಕರ ಅಹವಾಲಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಜೊತೆಗೆ ಕಾರ್ಯಕರ್ತರ ಅಹವಾಲು ಆಲಿಸಲು ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ.

    ನಾಳೆ ಮೊದಲ ಹಂತದಲ್ಲಿ ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಹಾಗೂ ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಸಭೆಗಳು ನಡೆಯಲಿವೆ.

    ಈ‌‌ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾಳೆಯಿಂದ ಮುಖ್ಯಮಂತ್ರಿ ನೇತೃತ್ವದಲ್ಲಿ ಜಿಲ್ಲಾ ಸಚಿವರ, ಶಾಸಕರ ಸಭೆ ನಡೆಯಲಿದೆ. ಜೊತೆಗೆ ಸಮಾಜಗಳ ಮುಖಂಡರ ಜೊತೆಯೂ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

    ಈ ಸಭೆಯಲ್ಲಿ ಜಿಲ್ಲಾ ಸಚಿವರು ಹಾಗೂ ವಿವಿಧ ಇಲಾಖೆಗಳ ಸಚಿವರ ಬಗ್ಗೆ ಶಾಸಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಬಳಿ ತಮ್ಮ ಅಭಿಪ್ರಾಯ ತಿಳಿಸಲು ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

    Congress Congress workers Karnataka Karnataka Congress ಕಾಂಗ್ರೆಸ್ ತುಮಕೂರು ಧಾರವಾಡ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಲ್ಪಸಂಖ್ಯಾತರಿಗೆ ಇದೆಲ್ಲಾ ಬೇಕಂತೆ.. | Minorities
    Next Article ಅತಿಯಾದ ಅಮಲು ತಂದ ಆಪತ್ತು | Drunken Driving
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ನಮಾಜ್ ಮಾಡಿ ಸಸ್ಪೆಂಡ್ ಆದ.

    ಮೇ 2, 2025

    ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!

    ಏಪ್ರಿಲ್ 30, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShaneJetty ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • LarrySquag ರಲ್ಲಿ ಪ್ರಧಾನಿಗೆ ಪತ್ರ ಬರೆದ ಯತ್ನಾಳ್.
    • MarvinPraft ರಲ್ಲಿ ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇತಿಹಾಸದಲ್ಲೇ ಮೊದಲಬಾರಿಗೆ ಕಗ್ಗತ್ತಲಲ್ಲಿ ಮುಳುಗಿದ ಸ್ವರ್ಣ ಮಂದಿರ#goldentemple #news #facts #historyinshorts
    Subscribe