Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುತ್ತಿಗೆದಾರರ ಬಂಡಾಯ – ಜಗ್ಗೋಲ್ಲಾ ಎಂದ ಡಿಸಿಎಂ | DK Shivakumar
    ರಾಜಕೀಯ

    ಗುತ್ತಿಗೆದಾರರ ಬಂಡಾಯ – ಜಗ್ಗೋಲ್ಲಾ ಎಂದ ಡಿಸಿಎಂ | DK Shivakumar

    vartha chakraBy vartha chakraಆಗಷ್ಟ್ 8, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ. 08 – ಸರ್ಕಾರದ ವಿವಿಧ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರರ ಬಿಲ್ ಬಾಕಿ ಬಿಡುಗಡೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಣಕ್ಕೆ ಬೇಡಿಕೆ‌ಯಿಡುತ್ತಿದ್ದಾರೆ ಎಂದು ಗುತ್ತಿಗೆದಾರರು ಬಹಿರಂಗವಾಗಿ ಆರೋಪಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಯಾಗಿದೆ.
    ಆದರೆ, ಡಿಸಿಎಂ‌ ಶಿವಕುಮಾರ್ ಈ ಆರೋಪವನ್ನು ಅಲ್ಲಗಳೆದಿದ್ದಾರೆ, ಇದಕ್ಕೆ ತಿರುಗೇಟು ನೀಡಿರುವ ಗುತ್ತಿಗೆದಾರರು ಶಿವಕುಮಾರ್ ಅವರು, ಹಣ ಕೇಳಿಲ್ಲ ಎಂದರೆ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದಾರೆ.
    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಗುತ್ತಿಗೆದಾರರು ಸಂಘದ ಪದಾಧಿಕಾರಿಗಳು ನಿನ್ನೆ ಸುದ್ದಿಗೋಷ್ಠಿ ನಡೆಸಿ,ಬಿಲ್ ಬಾಕಿ ಬಿಡುಗಡೆಗೆ ಆಗ್ರಹಿಸಿದ್ದರು.

    ಈ ವೇಳೆ ಗುತ್ತಿಗೆದಾರರ ಸಂಘದ ಸಭೆ ನಡೆಯುತ್ತಿತ್ತು ಇಲ್ಲಿ ಗುತ್ತಿಗೆದಾರ ಹೇಮಂತ್ ಎಂಬುವವರು ಮಾತನಾಡಿ, ಉಪ ಮುಖ್ಯಮಂತ್ರಿ ಅವರು ಬಾಕಿ ಬಿಲ್ ಪಾವತಿಗೆ ಹಣ ಕೇಳಿದ್ದಾರೆ. ಹಣ ಕೇಳಿಲ್ಲ ಎನ್ನುವುದಾದರೆ ಅವರು ನಂಬುವ ಅಜ್ಜಯ್ಯನ ಮಠಕ್ಕೆ ಬಂದು‌ ಪ್ರಮಾಣ ಮಾಡಲಿ. ಹಣ ಕೇಳಿದ್ದಾರೆ ಎಂದು ನಾನು‌‌ ಪ್ರಮಾಣ ಮಾಡುತ್ತೇನೆ ಎಂದು ಹೇಳಿದ್ದರು. ಇದು‌ ಇದೀಗ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    ಈ ವಿಡಿಯೋದಲ್ಲಿರುವ ಗುತ್ತಿಗೆದಾರ ಮಾತನಾಡಿ, ನಾವು ನ್ಯಾಯಯುತವಾಗಿ ಕೆಲಸ ಮಾಡಿದ್ದೇವೆ. ಕಮಿಷನರ್ ಮೇಲೆ ಯಾಕೆ ಆರೋಪ ಮಾಡ್ತಿರಾ, ಇಷ್ಟು ದಿನ ಅವರೇ ಅಲ್ವಾ ಬಿಲ್ ಪಾವತಿ ಮಾಡ್ತಿರೋದು, ಈಗ ಯಾಕೆ ಅವರು ಬಿಲ್ ತಡೆಯುತ್ತಾರೆ, ಅವರಿಗೆ ಬಿಲ್ ತಡೆ ಹಿಡಿಯುವಂತೆ ಹೇಳಿರೋದು ಯಾರು ಅವರ ಬಗ್ಗೆ ಮಾತನಾಡಿ. ಈಗ ಸಮಿತಿ ಮಾಡಿದ್ದಾರೆ, ಬಿಲ್ ಸ್ಯಾಂಕ್ಷನ್ ಮಾಡಿಸಿಕೊಳ್ಳುತ್ತೀರಾ?, ನಾವೇನು ಕಳ್ಳತನ ಮಾಡಿಲ್ಲ, ಕೋರ್ಟ್ ಗೆ ಹೋಗೋಣ.

    ನಾನು ಕೂಡ ಕಾಂಗ್ರೆಸ್ ಗೆ ಓಟ್ ಹಾಕಿದವನು, 94 ಕೋಟಿ ಬಿಲ್ ಬಾಕಿ ಬಿಲ್ ಬರಬೇಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಬೆದರಿಕೆಗೆ ಹೆದರೋಲ್ಲಾ:
    ಈ ಎಲ್ಲಾ ಬೆಳವಣಿಗೆಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್,ಸರಿಯಾಗಿ ಕೆಲಸ ಮಾಡಿದ ಗುತ್ತಿಗೆದಾರರಿಗೆ ಬಿಲ್ ಪಾವತಿ ಆಗಲಿದೆ. ಯಾವ ಗುತ್ತಿಗೆದಾರರ ಹಿಂದೆ ಯಾರಿದ್ದಾರೆ ಎಂದೂ ನನಗೆ ಗೊತ್ತಿದೆ,ಇಂತಹ ಆಣೆ,ಪ್ರಮಾಣದ ರಾಜಕಾರಣ ಸಾಕಷ್ಟು ನೋಡಿದ್ದೇನೆ ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಹೇಳಿದರು.
    ನಾನು ಯಾವುದೇ ಗುತ್ತಿಗೆದಾರರಿಗೆ ಉತ್ತರ ಕೊಡಲು ಹೋಗುವುದಿಲ್ಲ. ನಾನು ಯಾರ ಬಳಿಯೂ ಮಾತನಾಡಿಲ್ಲ. ನನಗೂ ಪ್ರಜ್ಞೆ ಇದೆ, ರಾಜಕೀಯ ಗೊತ್ತಿದೆ. ಗುತ್ತಿಗೆದಾರರೂ ಗೊತ್ತಿದ್ದಾರೆ. ಅವರ ಹಿಂದೆ ಯಾರಿದ್ದಾರೆ, ಯಾರು ಇದನ್ನು ಹೇಳಿಸುತ್ತಿದ್ದಾರೆ ಎಂದೂ ಗೊತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಗುತ್ತಿಗೆದಾರರು ಏನು ಬೇಕಾದರೂ ಮಾಡಿಕೊಳ್ಳಲಿ. ನಾವು ಕಾನೂನು ಪ್ರಕಾರ ಕೆಲಸ ಮಾಡುತ್ತಿದ್ದೇವೆ. ಈ ರೀತಿಯ ಬೆದರಿಕೆ, ಬ್ಲ್ಯಾಕ್‌ಮೇಲ್‌ಗೆ ಜಗ್ಗುವುದಿಲ್ಲ. ರಾಜ್ಯಪಾಲರಿಗೆ ಪತ್ರ ಕೊಡುವುದು, ರಾಷ್ಟ್ರಪತಿಗೆ ಪತ್ರ ಕೊಡುವುದು, ಪ್ರಧಾನಿಯವರನ್ನು ಭೇಟಿ ಆಗುವುದು ಏನು ಬೇಕಾದರೂ ಮಾಡಿಕೊಳ್ಳಲಿ ಎಂದರು.
    ಯಾವುದೇ ಒತ್ತಡ ಬರಲಿ, ಅದನ್ನು ತಡೆದುಕೊಳ್ಳುವ ಶಕ್ತಿ ನನಗಿದೆ. ಈ ಗುತ್ತಿಗೆದಾರರ ವಿಚಾರಕ್ಕೆಲ್ಲ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ ಗುತ್ತಿಗೆದಾರರು ನನ್ನ ಬಳಿ ಬಂದಿದ್ದರು, ಕೆಲಸ ಮಾಡಿದ್ದರೆ ನಿಮಗೆ ಹಣ ಸಿಗುತ್ತದೆ ಎಂದು ಅವರಿಗೆ ಹೇಳಿದೆ. ಬಿಲ್‌ ಕೊಡುವುದಕ್ಕೂ ಒಂದು ಪ್ರಕ್ರಿಯೆ ಇದೆ. ಎರಡು, ಮೂರು ವರ್ಷ ಕಾದಿಲ್ಲವೇ ಅವರು ಎಂದು ಪ್ರಶ್ನಿಸಿದರು.
    ನಾನು ಯಾರಿಗೂ ಪ್ರಮಾಣ ಮಾಡಬೇಕಾಗಿಲ್ಲ. ಕಾನೂನು ಏನು ಹೇಳಿದೆಯೋ ಅದೇ ಉತ್ತರ. ಕೆಲಸ ಮಾಡಿದ್ದರೆ ಬಿಲ್‌ ಕೊಡುತ್ತೇವೆ, ಕೆಲಸ ಮಾಡಲಿಲ್ಲವೆಂದರೆ ಬಿಲ್‌ ಕೊಡುವುದಿಲ್ಲ. ಇವತ್ತು ಅರ್ಜಿ ಕೊಟ್ಟರು, ನಾಳೆ ಟೆಂಡರ್‌ ಆಯಿತು, ಒಂದು ತಿಂಗಳಲ್ಲಿ ₹ 1 ಸಾವಿರ ಕೋಟಿ ಕೆಲಸ ಮಾಡಲು ಆಗುತ್ತಾ ನೀವೇ ಹೇಳಿ. ಅಧಿಕಾರಿಗಳಿಗೆ ಹೇಳಿದ್ದೇವೆ, ಮೌಲ್ಯಮಾಪನ ಮಾಡಿ, ಕೆಲಸ ಆಗಿದ್ದರೆ ಬಿಲ್‌ ಮಾಡಿ ಎಂದು. ಅವರು ಆ ಕೆಲಸ ನೋಡಿಕೊಳ್ಳುತ್ತಾರೆ. ಸರ್ಕಾರ ಇರುವುದು ನೀತಿ ರೂಪಿಸಲು. ಹೀಗಾಗಿ ನಾವು ಬಿಲ್ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ’ ಎಂದರು.

    ಸಿ.ಎಂ.ಭೇಟಿ:
    ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಗುತ್ತಿಗೆದಾರರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಇದ್ದು, ಚುನಾವಣೆ, ಹೊಸ ಸರ್ಕಾರ ರಚನೆ ಹೀಗೆ 8 ತಿಂಗಳಿನಿಂದ ಬಾಕಿ ಮೊತ್ತ ಬಿಡುಗಡೆ ಆಗಿರುವದಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಹೀಗಾಗಿ ಬಾಕಿ ಬಿಲ್ ಪಾವತಿ ಮಾಡುವಂತೆ ಮನವಿ ಮಾಡಿದರು.

     

    Latest Kannada News – ALSO READ

    ತುರ್ತು ಕಾಮಗಾರಿಗೆ ಮಾತ್ರ ಹಣ – ಸಿ.ಎಂ.ಸಿದ್ದರಾಮಯ್ಯ ಭರವಸೆ | Siddaramiah

    #kannada art dcm dk shivakumar kannada news Karnataka m News shiva Varthachakra Work ಕಳ್ಳತನ ಕಾಂಗ್ರೆಸ್ ಕಾನೂನು ಚುನಾವಣೆ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನನ್ನನ್ನು ‌Target ಮಾಡಲಾಗಿದೆ – ಚಲುವರಾಯಸ್ವಾಮಿ | Chaluvarayaswamy
    Next Article ಲೋಕಸಭೆಗೆ ಅಭ್ಯರ್ಥಿಗಳನ್ನು ಹುಡುಕಿ | Lok Sabha Elections 2024
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025

    ಜನಾರ್ದನ ರೆಡ್ಡಿ ಮತ್ತೆ ಜೈಲು ಪಾಲು

    ಮೇ 6, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarrySquag ರಲ್ಲಿ ಶಿವಕುಮಾರ್ ಅವರಿಗೆ ಕಿರುಕುಳ? | DK Shivakumar
    • Martinboorn ರಲ್ಲಿ ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    • LarrySquag ರಲ್ಲಿ ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇತಿಹಾಸದಲ್ಲೇ ಮೊದಲಬಾರಿಗೆ ಕಗ್ಗತ್ತಲಲ್ಲಿ ಮುಳುಗಿದ ಸ್ವರ್ಣ ಮಂದಿರ#goldentemple #news #facts #historyinshorts
    Subscribe