Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು IT Raid ಗೆ ರಾಜಸ್ಥಾನ ಚುನಾವಣೆ ನಂಟು
    ಚುನಾವಣೆ

    ಬೆಂಗಳೂರು IT Raid ಗೆ ರಾಜಸ್ಥಾನ ಚುನಾವಣೆ ನಂಟು

    vartha chakraBy vartha chakraಅಕ್ಟೋಬರ್ 13, 202344 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.13- ಮಹಾನಗರಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಐ.ಟಿ.ದಾಳಿಗೂ (IT Raid) ರಾಜಸ್ಥಾನ ಸೇರಿ ಪಂಚ ರಾಜ್ಯಗಳ‌ ವಿಧಾನಸಭ ಚುನಾವಣೆಗೆ ನಂಟಿರುವುದು ಪತ್ತೆಯಾಗಿದೆ.
    ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ರಾಜ್ಯದಿಂದ ಹಣವನ್ನು ಫಂಡಿಂಗ್ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿಯ ಆಧರಿಸಿ ಆದಾಯ ತೆರಿಗೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎಂಬ ಅಂಶ ಬಹಿರಂಗವಾಗಿದೆ.
    ರಾಜ್ಯದಲ್ಲಿ ನಡೆದ ಐ.ಟಿ.ದಾಳಿಗಳ  ಇತಿಹಾಸದಲ್ಲಿಯೇ ಅತೀ ದೊಡ್ಡ ಪ್ರಮಾಣದ ನಗದು ಪತ್ತೆಯಾಗಿದೆ ಐಟಿ ಅಧಿಕಾರಿಗಳು ಯಾವುದೇ ದಾಖಲೆಗಳಿಲ್ಲದ ಬರೋಬ್ಬರಿ 42 ಕೋಟಿ ರೂಪಾಯಿ ವಶಕ್ಕೆ ತೆಗೆದುಕೊಂಡರು.

    ದಾಳಿಯ ವೇಳೆ ಫ್ಲ್ಯಾಟ್‌ ಒಂದರ ಲಾಕ್‌ ಮಾಡಿದ್ದ ರೂಮಿನಲ್ಲಿದ್ದ ಮಂಚದ ಅಡಿಯಲ್ಲಿ 42 ಕೋಟಿ ರೂಪಾಯಿ ಪತ್ತೆಯಾಗಿದ್ದು, ಇದನ್ನು ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಬಳಸಲು ಇಡಲಾಗಿತ್ತು ಎಂಬ ಸಂಶಯ ವ್ಯಕ್ತವಾಗಿದೆ.
    ಮಂಚದ ಅಡಿಯಲ್ಲಿ 23 ರಟ್ಟಿನ ಬಾಕ್ಸ್‌ಗಳಲ್ಲಿ ಕಂತೆ ಕಂತೆ ಹಣ ಲಭ್ಯವಾಗಿತ್ತು. ಎಲ್ಲವೂ ಐನೂರು ಮುಖಬೆಲೆಯ ನೋಟಿನ ಕಂತೆಗಳಾಗಿದ್ದು, ಕಾರಿನಲ್ಲಿ ಇದನ್ನು ಸಾಗಿಸಲು ಸಿದ್ದಪಡಿಸಲಾಗಿತ್ತು.

    ಖಾಲಿಯಿದ್ದ ಫ್ಲ್ಯಾಟ್‌:
    ಕೋಟಿಗಟ್ಟಲೇ ಹಣ ದೊರೆತ ಖಾಲಿಯಿದ್ದ ಫ್ಲ್ಯಾಟ್‌ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರಾಗಿರುವ ಅಂಬಿಕಾಪತಿ ಅವರ ಪತ್ನಿ, ಮಾಜಿ ಕಾರ್ಪೊರೇಟರ್ ಅಶ್ವಥಮ್ಮ ಅವರ ಸಂಬಂಧಿಯೊಬ್ಬರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು,ಈ ಸಂಬಂಧಿಸಿದಂತೆ ಹಲವರ ವಿಚಾರಣೆ ನಡೆಸಲಾಗಿದೆ.

    ಕೀ ಕೊಡದೆ ಆಟ:
    ಹಣ ಇದ್ದ ಈ ಮನೆಯ ಬಿಲ್ಡರ್‌ ಮನೆಯ ಕೀ ಕೊಡದೆ ಅಧಿಕಾರಿಗಳಿಗೆ ಆಟವಾಡಿಸಿದ್ದ. ಡ್ರೈವರ್ ಬಳಿಯಲ್ಲಿ ಕೀ ಕೊಟ್ಟು ಬೆಂಗಳೂರು ಬಿಡಲು ಹೇಳಿದ್ದ. ಕೊನೆಗೆ ಬಿಲ್ಡರ್ ಡ್ರೈವರ್ ಅನ್ನು ವಶಕ್ಕೆ ಪಡೆದು ಅಧಿಕಾರಿಗಳು ಕೀ ತೆಗೆದುಕೊಂಡಿದ್ದಾರೆ. ಸಂಜೆ 7 ಗಂಟೆಗೆ ಮನೆಯ ಬೀಗ ತೆಗೆದು ಹಣವನ್ನು ಜಪ್ತಿ ಮಾಡಿದ್ದಾರೆ. 42 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ ಐಟಿ ಅಧಿಕಾರಿಗಳು ಹಣದ ದೃಶ್ಯಾವಳಿಯನ್ನು ಚಿತ್ರೀಕರಣ ಮಾಡಿಸಿ ಈಗಾಗಲೇ ಇಡಿ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ.
    ಅಕ್ರಮ ಹಣದ ವರ್ಗಾವಣೆ ಕೇಸ್‌ನಲ್ಲಿ ಪ್ರಕರಣ ದಾಖಲು ಮಾಡಲು ಇಡಿ ತಯಾರಿ ಮಾಡಿಕೊಳ್ಳುತ್ತಿದೆ. ಇದು ಯಾರಿಗೆ ಸೇರಿದ ಮನೆ ಎಂಬ ವಿವರ ಅಧಿಕಾರಿಗಳು ನೀಡಿಲ್ಲ. ಆದರೆ ಅನುಮಾನಗಳು ಅಧಿಕಾರದಲ್ಲಿರುವವರ ಆಪ್ತರ, ಗುತ್ತಿಗೆದಾರರ ಕಡೆಗೆ ಬೊಟ್ಟು ಮಾಡಿವೆ.

    ಆರ್‌ಟಿ ನಗರದಲ್ಲಿ ಪತ್ತೆ:
    ನಿನ್ನೆ ಸಂಜೆ 6 ಗಂಟೆಗೆ ಪೊಲೀಸ್ ಸಿಬ್ಬಂದಿಗಳ ಭದ್ರತೆಯಲ್ಲಿ ಐಟಿ ಅಧಿಕಾರಿಗಳು ಏಕಕಾಲದಲ್ಲಿ ಆರ್‌ಟಿ ನಗರದ ಎರಡು ಸ್ಥಳಗಳಲ್ಲಿ ಹಾಗೂ ಆತ್ಮಾನಂದ ಕಾಲೋನಿಯ ಒಂದು ಫ್ಲ್ಯಾಟ್ ಮೇಲೆ ದಾಳಿ ಮಾಡಿದ್ದರು.
    ದಾಳಿಯ ವೇಳೆ ದೊರೆತ ಹಣ ಹಾಗೂ ಕೆಲವರ ವಿಚಾರಣೆ ನಡೆಸುತ್ತಿರುವ ದೃಶ್ಯಾವಳಿಗಳನ್ನು ಅಧಿಕಾರಿಗಳು ಇಂಚಿಂಚೂ ರೆಕಾರ್ಡ್ ಮಾಡಿಕೊಂಡಿದ್ದಾರೆ. ಇದೇ ವೇಳೆ ವಾರ್ಡ್ ನಂ 95ರ ಮಾಜಿ ಕಾರ್ಪೊರೇಟರ್ ನಿವಾಸದ ಮೇಲೂ ಐಟಿ ದಾಳಿ ನಡೆದಿದೆ. ಗಣೇಶ ಬ್ಲಾಕ್‌ನ ಅಶ್ವತಮ್ಮ ಹಾಗೂ ಆರ್.ಅಂಬಿಕಾಪತಿ ದಂಪತಿಗಳ ನಿವಾಸದ ಮೇಲೂ ದಾಳಿಯಾಗಿದೆ.

    ಸಿಎಂ ಆಪ್ತ:
    ಅಂಬಿಕಾಪತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಎನ್ನಲಾಗಿದೆಹಿಂದೆ ಆರ್‌ಆರ್‌ ನಗರ ಶಾಸಕ ಮುನಿರತ್ನ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದು ಕಳೆದ ಆ. 8ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಅಂಬಿಕಾಪತಿ, ಗುತ್ತಿಗೆ ಕೆಲಸದ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.
    ಅಂಬಿಕಾಪತಿ ವಿರುದ್ಧ ಆರ್‌ಆರ್‌ ನಗರ ಶಾಸಕ ಮುನಿರತ್ನ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಅಂಬಿಕಾಪತಿ, ಕೆಂಪಣ್ಣ ತಂಡದಲ್ಲಿದ್ದು, ಇಬ್ಬರ ಮೇಲೂ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು.

    ಹೇಮಂತ್ ಗೂ ಶಾಕ್ :
    ನಿನ್ನೆ ಬಿಬಿಎಂಪಿ ಗುತ್ತಿಗೆದಾರ ಹೇಮಂತ್ ಮನೆ ಮೇಲೂ ಐಟಿ ದಾಳಿ ನಡೆದಿದೆ. ಬಿಲ್‌ ಪಾವತಿಗೆ ಸರ್ಕಾರ ಪರ್ಸೆಂಟೇಜ್ ಪಡೆಯುತ್ತಿದೆ ಎಂದು ಹೇಮಂತ್ ಆರೋಪ ಮಾಡಿದ್ದರು. ಇಂದು ಅಂಬಿಕಾಪತಿ ಮನೆ ಮೇಲೆ ಐಟಿ ದಾಳಿ ನಡೆದಿದೆ. ಅಂಬಿಕಾಪತಿ ಹಾಗೂ ಗುತ್ತಿಗೆದಾರರ ಹೇಮಂತ್ ಒಂದೇ ತಂಡದವರಾಗಿದ್ದಾರೆ‌.

    #rajasthan AI IT raid rajasthan elections ಇಡಿ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಸರ್ಕಾರ ಪತನಕ್ಕೆ ಸಿನಿಮೀಯ ರೀತಿಯಲ್ಲಿ ಸಂಚು | Congress
    Next Article Cab ಚಾಲಕನ ಅತಿರೇಕದ ವರ್ತನೆ | Cab Driver
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canadian pharmacy no prescription required ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • https://chipandchair.cz/registratsiya-v-melbet-2025/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • narkologiyakrasnodarvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe