ಬೆಂಗಳೂರು ಅ.19 – ಅಗ್ನಿ ದುರಂತ ಸಂಭವಿಸಿದ ಕೊರಮಂಗಲದ ಫೋರಂ ಮಾಲ್ ಮುಂಭಾಗದ ಪೈಪ್ ಆರನೇ ಮಹಡಿಯಲ್ಲಿ ಅಗ್ನಿ ದುರಂತ ಸಂಭವಿಸಿದ ಮಡ್ಪೈಪ್ ಗೆ ಹೋಟೆಲ್ (Mudpipe Cafe) ನಡೆಸಲು ಮಾತ್ರ ಅವಕಾಶ ನೀಡಿದ್ದನ್ನು ಉಲ್ಲಂಘಿಸಿ ಅಕ್ರಮವಾಗಿ ಹುಕ್ಕಬಾರ್ ಕೂಡ ನಡೆಸುತ್ತಿರುವುದು ಪತ್ತೆಯಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು .ಮಡ್ಪೈಪ್ ಮಾಲಿಕರಿಗೆ ಹೋಟೆಲ್ ನಡೆಸಲು ಮಾತ್ರ ಅವಕಾಶವಿದೆ. ಅದಕ್ಕೆ ಮಾತ್ರ ಪರವಾನಗಿ ನೀಡಲಾಗಿತ್ತು. ಆದರೆ ಅವರು ಇಲ್ಲಿ ಅಕ್ರಮವಾಗಿ ಹುಕ್ಕಾಬಾರ್ ನಡೆಸುತ್ತಿದ್ದರು ಎಂದರು.
ಮಡ್ಪೈಪ್ (Mudpipe Cafe) ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಬಿಬಿಎಂಪಿ ಕೊಟ್ಟಿರುವ ಅನುಮತಿಯೇ ಬೇರೆ, ಇಲ್ಲಿ ನಡೆಯುತ್ತಿರುವುದೇ ಬೇರೆ. ಅನುಮತಿ ಕೊಟ್ಟ ನಂತರ ಬಿಬಿಎಂಪಿ ಪರಿಶೀಲನೆ ಮಾಡಬೇಕಿತ್ತು.
ಅವರು ಪಾಲನೆ ಮಾಡಿಲ್ಲ ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಯಾವ ರೀತಿ ಸಿಲಿಂಡರ್ ಇಲ್ಲಿ ಬಳಸಲಾಗುತ್ತಿತ್ತು ಊಟಕ್ಕೆ ನಿಜವಾದ ಕಾರಣವೇನು ಎಂಬುವುದು ಗೊತ್ತಿಲ್ಲ. ಒಂದರ ನಂತರ ಒಂದು ಸಿಲಿಂಡರ್ ಸ್ಪೋಟಗೊಂಡಿವೆ. ಎಲ್ಲರೂ ತಪ್ಪಿಸಿಕೊಂಡಿದ್ದಾರೆ. ಒಬ್ಬ ಕಟ್ಟಡದಿಂದ ಜಿಗಿದಿದ್ದು, ಅಪಾಯದಿಂದ ಪಾರಾಗಿದ್ದಾನೆ. ಅತ್ತಿಬೆಲೆ ಪಟಾಕಿ ದುರಂತ, ಹೋಟೆಲ್ ದುರಂತ ನಂತರ ಕಠಿಣ ಕ್ರಮಕ್ಕೆ ಮುಂದಾಗುತ್ತಿದ್ದೇವೆ.ನಗರದ ಎಲ್ಲ ರೆಸ್ಟೊರೆಂಟ್ಗಳಲ್ಲೂ ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಯಾರದ್ದೋ ಆಕ್ರಮದಿಂದ ಅಮಾಯಕರು ಬಲಿಯಾಗುತ್ತಿದ್ದಾರೆ. ನಗರದಲ್ಲಿ ಪಟಾಕಿ ವಿಚಾರಕ್ಕೆ ಕೆಲ ಕಟ್ಟನಿಟ್ಟಿನ ನಿಯಮಗಳನ್ನು ಜಾರಿ ಮಾಡುತ್ತೇವೆ. ಎಂದು ತಿಳಿಸಿದರು.