Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವನ್ಯಜೀವಿ ಉತ್ಪನ್ನ ಅಕ್ರಮವಾಗಿಟ್ಟುಕೊಂಡರೆ ಅಪರಾಧ | Forest Department
    Trending

    ವನ್ಯಜೀವಿ ಉತ್ಪನ್ನ ಅಕ್ರಮವಾಗಿಟ್ಟುಕೊಂಡರೆ ಅಪರಾಧ | Forest Department

    vartha chakraBy vartha chakraಅಕ್ಟೋಬರ್ 26, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.26- ವನ್ಯಜೀವಿ ಉತ್ಪನ್ನಗಳನ್ನು ತಮ್ಮ ಮನೆಯಲ್ಲಿ ಇಟ್ಟುಕೊಳ್ಳುವುದು. ಆಭರಣಗಳಾಗಿ ಬಳಸುವುದು ಅಕ್ಷಮ್ಯ ಅಪರಾಧ ಹಾಗೂ ವನ್ಯಜೀವಿ ಕಾಯಿದೆ ಉಲ್ಲಂಘನೆ ಈ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿ ಕೊರತೆಯಿದೆ. ಹೀಗಾಗಿ, ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

    ಅರಣ್ಯ ಇಲಾಖೆಯ (Forest Department) ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪೂರ್ವಜರು ಹೊಂದಿದ್ದ ವನ್ಯಜೀವಿ ಅಂಗಾಂಗದಿಂದ ಮಾಡಿದ ಟ್ರೋಫಿ, ಫಲಕ, ಪೆಂಡೆಂಟ್ ಸೇರಿದಂತೆ ಯಾವುದೇ ಉತ್ಪನ್ನಗಳನ್ನು ಅರಣ್ಯ ಇಲಾಖೆಯಿಂದ ದೃಢೀಕರಿಸಿಕೊಂಡು ಮಾಲೀಕತ್ವದ ಹಕ್ಕು ಪಡೆದುಕೊಳ್ಳಲು 2003ರವರೆಗೆ ಹಲವು ಅವಕಾಶ ನೀಡಲಾಗಿತ್ತು. ಹಲವರು ತಮ್ಮ ಬಳಿ ಇದ್ದ ವನ್ಯಜೀವಿ ಉತ್ಪನ್ನಗಳಿಗೆ ಮಾಲೀಕತ್ವದ ಹಕ್ಕು ಪಡೆದಿದ್ದಾರೆ. ಇನ್ನೂ ಅನೇಕರು ದೃಢೀಕರಣ ಮತ್ತು ಪ್ರಮಾಣ ಪತ್ರ ಪಡೆದಿಲ್ಲ ಎಂದು ಹೇಳಿದರು.
    ಹುಲಿ ಉಗುರಿನ ಲಾಕೆಟ್ ಇರುವ ಸರ ಧರಿಸಿರುವವರ ವಿರುದ್ಧ ನಿತ್ಯ ದೂರುಗಳು ಬರುತ್ತಿದ್ದು, ಬಹುತೇಕರಿಗೆ ಇದು ಅಪರಾಧ ಎಂಬ ಅರಿವೇ ಇಲ್ಲ ಎಂಬುದು ಗೋಚರವಾಗುತ್ತಿದೆ. ಗ್ರಾಮೀಣ ಪ್ರದೇಶದ ಕೆಲವರ ಮನೆಗಳಲ್ಲಿ ಜಿಂಕೆ ಚರ್ಮ, ಆನೆ ದಂತದಿಂದ ಮಾಡಿದ ಕಲಾಕೃತಿಗಳು, ಜಿಂಕೆ ಮತ್ತು ಸಾರಂಗದ ಕೊಂಬು ಇತ್ಯಾದಿಗಳನ್ನು ಇಟ್ಟುಕೊಂಡಿರುತ್ತಾರೆ. ಇದು ಅಪರಾಧ ಎಂಬುದೂ ಅವರಿಗೆ ತಿಳಿದಿಲ್ಲ ಎಂದು ವಿವರಿಸಿದರು.

    ಬಿಗ್ ಬಾಸ್ ಸ್ಪರ್ಧಿವರ್ತೂರು ಸಂತೋಷ ಪ್ರಕರಣ ವರದಿಯಾದ ಬಳಿಕ, ವನ್ಯಜೀವಿ ಉತ್ಪನ್ನಗಳ ಅಕ್ರಮ ದಾಸ್ತಾನಿನ ಬಗ್ಗೆ ಹೆಚ್ಚಾಗಿ ದೂರುಗಳು ಬರುತ್ತಿವೆ. ಕಾನೂನಿನ ಅರಿವಿಲ್ಲದ ಶ್ರೀಸಾಮಾನ್ಯರಿಗೆ ಆಗುವ ತೊಂದರೆ ತಪ್ಪಿಸಲು ಒಂದು ಬಾರಿ ಕೊನೆಯದಾಗಿ ಇಂತಹ ಅಕ್ರಮ ಸಂಗ್ರಹಣೆ, ದಾಸ್ತಾನಿನ ಬಗ್ಗೆ ಘೋಷಣೆ ಮಾಡಿಕೊಳ್ಳಲು ಮತ್ತು ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡುವ ಬಗ್ಗೆ ಪರಾಮರ್ಶಿಸಿ, ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.
    ಅಳಿವಿನಂಚಿನಲ್ಲಿರುವ, ಅಮೂಲ್ಯ ಮತ್ತು ಅಪರೂಪದ ವನ್ಯ ಜೀವಿಗಳಾದ ಹುಲಿ, ಚಿರತೆ, ಚಿಂಕಾರ, ಕೃಷ್ಣಮೃಗ, ಸಾಂಬಾರ್, ಕರಡಿ ಸೇರಿದಂತೆ ಹಲವು ಕಾಡು ಪ್ರಾಣಿಗಳನ್ನು ಪರಿಶಿಷ್ಟ 1ರಲ್ಲಿ ಪಟ್ಟಿ ಮಾಡಲಾಗಿದ್ದು, ಇಂತಹ ಪ್ರಾಣಿಗಳನ್ನು ಕೊಲ್ಲುವುದು, ಬೇಟೆ ಆಡುವುದು, ಅಂತಹ ಪ್ರಾಣಿಗಳ ದೇಹದ ಯಾವುದೇ ಭಾಗದಿಂದ ತಯಾರಿಸಿದ ವಸ್ತುವನ್ನು ಅಲಂಕಾರಿಕವಾಗಿ ಮನೆಯಲ್ಲಿಡುವುದು, ಧರಿಸುವುದು ಕೂಡ ಅಪರಾಧವಾಗಿರುತ್ತದೆ ಎಂದು ತಿಳಿಸಿದರು.
    ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರಿಗೂ ಕಾನೂನು ಸಮಾನವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗಣ್ಯರೂ ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿದೆ. ಅಧಿಕಾರಿಗಳು ಕಾನೂನು ರೀತ್ಯ ಮತ್ತು ಆಯಾ ಸಂದರ್ಭಕ್ಕೆ ಅನುಗುಣವಾಗಿ ತಮ್ಮ ವಿವೇಚನಾಧಿಕಾರ ಬಳಸಿ ಕ್ರಮ ಜರುಗಿಸಲಿದ್ದಾರೆ ಎಂದರು.

    ಅಳಿವಿನಂಚಿನಲ್ಲಿರುವ, ಅಮೂಲ್ಯ ಮತ್ತು ಅಪರೂಪದ ವನ್ಯ ಜೀವಿಗಳಾದ ಹುಲಿ, ಚಿರತೆ, ಚಿಂಕಾರ, ಕೃಷ್ಣಮೃಗ, ಸಾಂಬಾರ್, ಕರಡಿ ಸೇರಿದಂತೆ ಹಲವು ಕಾಡು ಪ್ರಾಣಿಗಳನ್ನು ಪರಿಶಿಷ್ಟ 1ರಲ್ಲಿ ಪಟ್ಟಿ ಮಾಡಲಾಗಿದ್ದು, ಇಂತಹ ಪ್ರಾಣಿಗಳನ್ನು ಕೊಲ್ಲುವುದು, ಬೇಟೆ ಆಡುವುದು, ಅಂತಹ ಪ್ರಾಣಿಗಳ ದೇಹದ ಯಾವುದೇ ಭಾಗದಿಂದ ತಯಾರಿಸಿದ ವಸ್ತುವನ್ನು ಅಲಂಕಾರಿಕವಾಗಿ ಮನೆಯಲ್ಲಿಡುವುದು, ಧರಿಸುವುದು ಕೂಡ ಅಪರಾಧವಾಗಿರುತ್ತದೆ ಎಂದು ತಿಳಿಸಿದರು.
    ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರಿಗೂ ಕಾನೂನು ಸಮಾನವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗಣ್ಯರೂ ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿದೆ. ಅಧಿಕಾರಿಗಳು ಕಾನೂನು ರೀತ್ಯ ಮತ್ತು ಆಯಾ ಸಂದರ್ಭಕ್ಕೆ ಅನುಗುಣವಾಗಿ ತಮ್ಮ ವಿವೇಚನಾಧಿಕಾರ ಬಳಸಿ ಕ್ರಮ ಜರುಗಿಸಲಿದ್ದಾರೆ ಎಂದರು.
    ಇತ್ತೀಚೆಗೆ ಬೆಳಗಾವಿ ವಿಭಾಗದಲ್ಲಿ ಖಾನಾಪುರ ಬಳಿಯ ಜಳಗಾ ಅರಣ್ಯದ ವ್ಯಾಪ್ತಿಯಲ್ಲಿ ಮಧ್ಯಪ್ರದೇಶದ ಚಿಕ್ಕಾಅಲಿಯಾಸ್ ಕೃಷ್ಣಾ ಪಾಟ್ಲೆ ಪವಾರ್ ಎಂಬುವನನ್ನು ಬಂಧಿಸಲಾಗಿದ್ದು, ಆತ ಹುಲಿ ಕಳ್ಳಬೇಟೆಗಾರನಾಗಿದ್ದು, ಆತನ ವಿರುದ್ಧ ಹಲವು ರಾಜ್ಯಗಳಲ್ಲಿ ದೂರು ದಾಖಲಾಗಿದೆ. ಅರಣ್ಯ ಇಲಾಖೆ ಕಳ್ಳಬೇಟೆ ನಿಗ್ರಹಕ್ಕೂ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

    art forest forest department Government Karnataka m News Politics Trending Varthachakra ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    Next Article 27 ಇಂಜಿನಿಯರ್ ಗಳು ಸೇವೆಯಿಂದ ಅಮಾನತು | Engineers
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    1 ಟಿಪ್ಪಣಿ

    1. ThomasLIP on ನವೆಂಬರ್ 13, 2025 5:22 ಫೂರ್ವಾಹ್ನ

      ?Brindemos por cada leyenda de las apuestas !
      El sitio casinosinverificacion publica entrevistas con grandes ganadores. Aprendes estrategias de jugadores exitosos en casinos sin kyc. El conocimiento compartido eleva toda la comunidad.
      Los casinos sin verificaciГіn implementan sistemas de reputaciГіn multi-dimensional. Tu perfil refleja mГєltiples aspectos de juego. En casino crypto sin kyc la reputaciГіn es matizada.
      Prueba casinos sin verificacion con blackjack y ruleta – п»їhttps://casinosinverificacion.org/
      ?Que la fortuna te sonria con que disfrutes increibles pagos espectaculares !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • car title loan in toronto ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Gordondarce ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Bouclier Apextrail Review ರಲ್ಲಿ ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe