ಬೆಂಗಳೂರು : ತಾಯಿ, ಮಗು ಬಲಿ ಪಡೆದ ವಿದ್ಯುತ್ ಅವಘಡ ಪ್ರಕರಣದ ಬಗ್ಗೆ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ನೈತಿಕ ಹೊಣೆ ಹೊತ್ತು ಇಂಧನ ಸಚಿವ ಕೆ.ಜೆ. ಜಾಜ್೯ (KJ George) ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
ವೈರ್ ಗಳಿಗೆ ಇಲಿ ಕಚ್ಚಿ ಘಟನೆ ಸಂಭವಿಸಿದೆ ಎಂಬ ನೆಪ ಹೇಳಿ ತಿಪ್ಪೆ ಸಾರಿಸುವ ಮಟ್ಟಕ್ಕೆ ಸಚಿವರು ಇಳಿದಿರುವುದು ನೀಚತನದ ಪರಮಾವಧಿ ಎಂದು ಅವರು ಕಿಡಿ ಕಾರಿದ್ದಾರೆ.
ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಕೊರತೆಯೇ ದುರಂತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದರೂ, ಹೊಣೆಗಾರಿಕೆಯಿಂದ ನುಣುಚಿಕೊಂಡು ಸಂವೇದನಾ ರಹಿತರಾಗಿ ಸಚಿವ ಜಾಜ್೯ (KJ George) ವರ್ತಿಸುತ್ತಿರುವುದು ಸರಕಾರಕ್ಕೆ ಶೋಭೆ ತರುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ.
ತನಿಖೆಗೆ ನಾಲ್ಕು ಸಮಿತಿ ರಚಿಸಿರುವುದಾಗಿ ಜಾರ್ಜ್ ಅವರೇ ಹೇಳಿದ್ದಾರೆ. ತನಿಖೆ ಮುಗಿದು ವರದಿ ಕೈ ಸೇರುವ ಮೊದಲೇ ಇಲಿ ಮೇಲೆ ಎತ್ತಿಹಾಕುತ್ತಿರುವ ಹಿಂದಿನ ಉದ್ದೇಶವಾದರೂ ಏನು? ತನಿಖೆಯ ಹಾದಿ ತಪ್ಪಿಸುವ ಯತ್ನ ನಡೆಸುತ್ತಿರುವುದು ಇದರಿಂದ ಸ್ಪಷ್ಟವಾಗಿದೆ. ಹೀಗೆಯೇ ವರದಿ ನೀಡಲಿ ಎಂದು ಪರೋಕ್ಷವಾಗಿ ತನಿಖಾ ಸಮಿತಿಗಳ ಮೇಲೆ ಒತ್ತಡ ಹೇರಿದಂತೆ ಅಗುವುದಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
ಸಿಎಂ ಮಧ್ಯ ಪ್ರವೇಶಕ್ಕೆ ಆಗ್ರಹ –
ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಅವರು ಮೌನ ವಹಿಸುವುದು ಸರಿಯಲ್ಲ. ತಕ್ಷಣವೇ ಮಧ್ಯ ಪ್ರವೇಶಿಸಿ ಸಚಿವ ಜಾಜ್೯ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಬ್ರಾಂಡ್ ಬೆಂಗಳೂರು ಹಣೆಪಟ್ಟಿಗೆ ಕಪ್ಪು ಚುಕ್ಕೆಯಾಗಿರುವ ಈ ಪ್ರಕರಣದಲ್ಲಿ ತಾಯಿ ಮಗುವಿನ ಸಾವಿಗೆ ನ್ಯಾಯ ಸಿಗಬೇಕು ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕಿದ್ದರೆ ಸಚಿವ ಸ್ಥಾನದಲ್ಲಿ ಜಾಜ್೯ ಅವರು ಮುಂದುವರಿಯಬಾರದು ಎಂದು ಹೇಳಿಕೆಯಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.
ಬ್ರಾಂಡ್ ಬೆಂಗಳೂರು ಮಾಡ್ತೀವಿ, ಜಾಗತಿಕ ಮಟ್ಟದಲ್ಲಿ ನಗರದಲ್ಲಿ ಸೌಲಭ್ಯಗಳನ್ನು ಕೊಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಡಾಯಿ ಕೊಚ್ಚಿಕೊಳ್ಳುತ್ತಾರೆ. ಇದೇನಾ ನಿಮ್ಮ ಬ್ರಾಂಡ್ ಬೆಂಗಳೂರು? ಇದೇನಾ ನಿಮ್ಮ ಗ್ಲೋಬಲ್ ಡೆವಲಪ್ಮೆಂಟ್ ಎಂದು ವ್ಯಂಗ್ಯ ಮಾಡಿದ್ದಾರೆ.
ನ್ಯಾಯ ಸಿಗುವ ತನಕ ಹೋರಾಟ –
ಈ ಘಟನೆಯನ್ನು ಭೀರವಾಗಿ ಪರಿಗಣಿಸಿದ್ದು ಕೊಲೆಗಡುಕ ಸರಕಾರದ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಹೋರಾಟ ನಡೆಸಲಾಗುವುದು. ಇಂಧನ ಸಚಿವರ ರಾಜೀನಾಮೆ ಪಡೆದು, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಮೃತರ ಕುಟುಂಬಕ್ಕೆ ಇಪ್ಪತ್ತೈದು ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸುವ ತನಕ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಾಗುವುದು ಎಂದು ಅಶೋಕ್ ಎಚ್ಚರಿಸಿದ್ದಾರೆ.
31 ಪ್ರತಿಕ್ರಿಯೆಗಳು
купить аккаунт с прокачкой услуги по продаже аккаунтов
маркетплейс аккаунтов площадка для продажи аккаунтов
Account Store Gaming account marketplace
Account Sale Account Selling Service
Account Trading Service Sell Account
Sell Account Buy accounts
Sell Account Account Catalog
Online Account Store https://socialaccountsstore.com/
Account Store Website for Selling Accounts
Account trading platform Secure Account Purchasing Platform
Social media account marketplace Account Trading Service
Sell accounts Account trading platform
Buy Account Secure Account Purchasing Platform
account selling platform verified accounts for sale
buy pre-made account online account store
social media account marketplace ready-made accounts for sale
social media account marketplace buy and sell accounts
website for buying accounts account exchange
marketplace for ready-made accounts account exchange service
website for buying accounts purchase ready-made accounts
account purchase ready-made accounts for sale
account selling platform account selling service
purchase ready-made accounts account trading service
account store verified accounts for sale
find accounts for sale social media account marketplace
buy and sell accounts accounts for sale
account buying service secure account purchasing platform
accounts for sale verified accounts for sale
accounts marketplace profitable account sales
website for buying accounts accounts market
database of accounts for sale https://social-accounts-marketplaces.live/