Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನರ್ಸ್ ಮಾಡುತ್ತಿದ್ದ ಪಾಪದ ಕೆಲಸ ಹೇಗಿತ್ತು ಗೊತ್ತಾ | Female Feticide
    Viral

    ನರ್ಸ್ ಮಾಡುತ್ತಿದ್ದ ಪಾಪದ ಕೆಲಸ ಹೇಗಿತ್ತು ಗೊತ್ತಾ | Female Feticide

    vartha chakraBy vartha chakraಡಿಸೆಂಬರ್ 2, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.2- ರಾಜ್ಯದೆಲ್ಲೆಡೆ ಸಂಚಲನ ಮೂಡಿಸಿರುವ ಭ್ರೂಣ ಹತ್ಯೆ(Female Feticide ) ಪ್ರಕರಣದ ಬೆನ್ನು ಹತ್ತಿರುವ ಪೊಲೀಸರಿಗೆ ಆಘಾತಕಾರಿ ವಿದ್ಯಮಾನವೊಂದು ಗೊತ್ತಾಗಿದೆ ಈ ಕೃತ್ಯದಲ್ಲಿ‌ ನಿರತರಾಗಿದ್ದ ಆರೋಪದಲ್ಲಿ ಬಂಧಿತ ನರ್ಸ್, ಪ್ರತಿ ತಿಂಗಳಲ್ಲಿ ಸರಾಸರಿ 70 ಮಕ್ಕಳ ಗರ್ಭಪಾತ ಮಾಡಲಾಗುತಿತ್ತು. ಕನಿಷ್ಠವೆಂದರೆ ತಿಂಗಳಲ್ಲಿ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ ಎನ್ನುವ ಭಯಾನಕ ಕೃತ್ಯವನ್ನು ವಿಚಾರಣೆಯಲ್ಲಿ ಬಾಯ್ ಬಿಟ್ಟಿದ್ದಾರೆ.

    ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಬಂಧಿತ ಆರೋಪಿಯಾಗಿದ್ದು,  ವಿಚಾರಣೆಯಲ್ಲಿ ಇವರು ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆಯುತ್ತಿದ್ದು,ಆ ಮಕ್ಕಳಿಗೆ ಜೀವ ಇರುತ್ತಿತ್ತು ಎನ್ನುವ ಆತಂಕಕಾರಿ ಸಂಗತಿಯನ್ನು ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
    ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಆಗಿದ್ದ ಮಂಜುಳಾ  ಭ್ರೂಣ ಹತ್ಯೆಯ ಕುರಿತು ಸ್ಫೋಟಕ ಮಾಹಿತಿಯ ಇಂಚಿಚೂ ವಿವರಿಸಿದ್ದಾರೆ, 6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5 ರಿಂದ 10 ನಿಮಿಷದಲ್ಲಿ ಸಾಯುತ್ತಿದ್ದವು. ಅದನ್ನು ಪೇಪರ್‌ನಲ್ಲಿ ಸುತ್ತಿ ನಿಸಾರ್‌ಗೆ ಕೊಡುತ್ತಿದ್ದೆ. ನಿಸಾರ್ ಆ ಮಗುವನ್ನು ತೆಗೆದುಕೊಂಡು ಹೋಗಿ ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದ ಎಂದು ಹೇಳಿದ್ದಾರೆ 12 ವಾರ ಕಳೆದ ಮಕ್ಕಳನ್ನು ಅಬಾರ್ಟ್ ಮಾಡಿ ಮೆಡಿಕಲ್ ವೇಸ್ಟ್‌ಗೆ ಹಾಕುತ್ತಿದ್ದೆವು. 4 ದಿನಕ್ಕೆ ಮೆಡಿಕಲ್ ವೇಸ್ಟ್ ಅಲ್ಲಿ ಮಗು ಕೊಳೆತು ಹೋಗುತ್ತಿತ್ತು ಎಂಬ ಭಯಾನಕ ವಿಚಾರ ಪೊಲೀಸರ ಮುಂದೆ ತೆರೆದಿಟ್ಟಿದ್ದಾರೆ.

    ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವ ಮಂಜುಳಾ, ಕಳೆದೊಂದು ವರ್ಷದಿಂದ ನಾನು ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದೆ. ತಿಂಗಳಿಗೆ 70 ಮಕ್ಕಳನ್ನು ಗರ್ಭಪಾತ ಮಾಡಿದ್ದೇನೆ. ಈ ಮೊದಲು ನರ್ಸ್ ರೀಸ್ಮಾ ಅವರು ಗರ್ಭಪಾತ ಮಾಡುವ ಕೆಲಸವನ್ನು ಮಾಡುತ್ತಿದ್ದರು. ಅವಳಾದ ಬಳಿಕ ನಾನು ಮಗುವನ್ನು ಗರ್ಭಪಾತ ಮಾಡುವುದಕ್ಕೆ ಸೇರಿಕೊಂಡಿದ್ದೆ. 6 ತಿಂಗಳ ಮಗುವನ್ನು ನಾನು ಗರ್ಭಪಾತ ಮಾಡಿದ್ದೇನೆ ಎಂದಿದ್ದಾರೆ.
    ನಿಸಾರ್ ಮಗುವನ್ನು ನದಿಗೆ ಎಸೆದು ಬರುತ್ತಿದ್ದು ಯಾವ ಜಾಗದಲ್ಲಿ ಆ ಮಗುವನ್ನು ಬಿಸಾಕುತ್ತಿದ್ದ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ನದಿಯನ್ನು ಬಿಟ್ಟು ಬೇರೆ ಜಾಗದಲ್ಲಿ ಬಿಸಾಕಿದರೆ ಅವಷೇಶಗಳು ಸಿಕ್ಕಿಬಿಡುತ್ತದೆ. ಅದಕ್ಕೆ ನಿಸಾರ್ ಮಗುವನ್ನು ನದಿಗೆ ಎಸೆಯುತ್ತಿದ್ದ ಎಂದು ಹೇಳಿದ್ದಾರೆ.

    ಭ್ರೂಣ ಹತ್ಯೆ ಮಾಡಿದ ಬಳಿಕ ತೀರಾ ರಕ್ತಸ್ರಾವ ಆಗುತ್ತಿತ್ತು. ಆಗ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳಲು ಆಗುತ್ತಿರಲಿಲ್ಲ. ಆರು ತಿಂಗಳ ಮಗುವನ್ನು ಗರ್ಭಪಾತ ಮಾಡುವುದಕ್ಕೆ ಬೇರೆಯೇ ಕಾರಣ ಇತ್ತು. ನಮ್ಮ ಬಳಿ ಅಡ್ವಾನ್ಸ್ ಸ್ಕ್ಯಾನಿಂಗ್ ಯಂತ್ರ ಇರಲಿಲ್ಲ. ಕೆಲವೊಮ್ಮೆ ಹೆಣ್ಣು ಭ್ರೂಣನಾ? ಗಂಡು ಭ್ರೂಣನಾ ಎಂದು ಗೊತ್ತಾಗುತ್ತಿರಲಿಲ್ಲ. ಲಿಂಗ ಪತ್ತೆಯಾಗದೇ ಇದ್ದಾಗ ತಿಂಗಳು ಬಿಟ್ಟು ಬರುವುದಕ್ಕೆ ಹೇಳುತ್ತಿದ್ದೆವು. ಹೀಗಾಗಿ ಮಗುವನ್ನು ಕಂಡು ಹಿಡಿಯಲು ತಡ ಆದಾಗ 6 ತಿಂಗಳ ಮಗುವನ್ನು ಗರ್ಭಪಾತ ಮಾಡಲಾಗುತ್ತಿತ್ತು ಎಂದು ಹೇಳಿಕೆ ನೀಡಿದ್ದಾರೆ.
    ಇದಷ್ಟೇ ಅಲ್ಲದೆ,6 ತಿಂಗಳ ಮಗು ಗರ್ಭಪಾತ ಮಾಡಲು ನಮ್ಮದೇ ಕಾರಣ ಇದೆ. 6 ತಿಂಗಳ ಮಗುವನ್ನು ಸಿಸೇರಿಯನ್ ಮೂಲಕ ಹೆರಿಗೆ ರೀತಿಯಲ್ಲಿ ಮಾಡುತ್ತಿದ್ದೆವು. ಸಿ ಸೆಕ್ಷನ್ ಮೂಲಕ ತೆಗೆದು ಟೇಬಲ್ ಮೇಲೆ ಇಡಲಾಗುತ್ತಿತ್ತು. 5 ರಿಂದ 10 ನಿಮಿಷಕ್ಕೆ ಆ ಮಗು ಸಾಯುತ್ತಿತ್ತು. ತಾಯಿಗೆ ಪ್ರಜ್ಞೆ ಇಲ್ಲದಂತೆ ಮಾಡಿ ಸಿ ಸೆಕ್ಷನ್ ಮಾಡಲಾಗುತ್ತಿತ್ತು ಎಂಬ ಸ್ಫೋಟಕ ಮಾಹಿತಿ ಪೊಲೀಸರಿಗೆ ನೀಡಿದ್ದಾರೆ.

    ಇನ್ನೂ ವೈದ್ಯ ಚಂದನ್ ಬಲ್ಲಾಳ್ ಅವರ ಪುರಾಣವನ್ನು ಪೊಲೀಸರು ಬಿಚ್ಚಿಟ್ಟಿದ್ದಾರೆ.ಅಸಲಿಗೆ ಚಂದನ್ ಬಲ್ಲಾಳ್ ಎಂಬಿಬಿಎಸ್ ಪೂರ್ಣಗೊಳಿಸಿರುವ ವೈದ್ಯರೇ ಅಲ್ಲ. ಅವರು ಸ್ಕ್ಯಾನಿಂಗ್ ಮಾಡುವ ಪಾಠವನ್ನೇ ಕಲಿತಿರಲಿಲ್ಲ. ಈತ ಕೇವಲ ಆಯುರ್ವೇದದ ಚಿಕಿತ್ಸೆಯನ್ನು ಮಾತ್ರ ಕೊಡಬೇಕಿತ್ತು. ನರ್ಸಿಂಗ್ ಹೋಂ ತೆಗೆಯಲು ಈತನಿಗೆ ವಿದ್ಯಾರ್ಹತೆ ಇಲ್ಲ. ಆದರೂ ನರ್ಸಿಂಗ್ ಹೋಂ ತೆಗೆದಿದ್ದ ಎಂದು ಹೇಳಿದ್ದಾರೆ.

    Verbattle
    Verbattle
    Verbattle
    crime Female Feticide Karnataka m News Politics Trending ಚಂದನ್
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರಿಗೆ ಸವಾಲೊಡ್ಡಿದ ಬಾಂಬ್ ಬೆದರಿಕೆ ಕರೆ | Bomb Threat
    Next Article Bitcoin ಕರ್ಮಕಾಂಡದಲಿ IPS ಅಧಿಕಾರಿಗಳು ಶಾಮೀಲು?
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    1 ಟಿಪ್ಪಣಿ

    1. Qedlsx on ಫೆಬ್ರವರಿ 12, 2026 12:01 ಫೂರ್ವಾಹ್ನ

      betmgm IL betmgm-play betmgm Idaho

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • alpha66_zkKr ರಲ್ಲಿ ಮುನಿಸಿಕೊಂಡ G. Parameshwara ಮತ್ತು M.B.Patil
    • Tracymix ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.