Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ರಾಂಡ್ ಬೆಂಗಳೂರಿನ ಮೂಲಕ ಸಿಲಿಕಾನ್ ಸಿಟಿಗೆ ಹೊಸ ರೂಪ | Brand Bengaluru
    Viral

    ಬ್ರಾಂಡ್ ಬೆಂಗಳೂರಿನ ಮೂಲಕ ಸಿಲಿಕಾನ್ ಸಿಟಿಗೆ ಹೊಸ ರೂಪ | Brand Bengaluru

    vartha chakraBy vartha chakraಡಿಸೆಂಬರ್ 6, 202327 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ: “ನಿರಂತರವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಯೋಜನಾಬದ್ಧವಾಗಿ ಹೊಸರೂಪ ನೀಡಲು “ಬ್ರ್ಯಾಂಡ್ ಬೆಂಗಳೂರು” (Brand Bengaluru) ಪರಿಕಲ್ಪನೆಯಲ್ಲಿ ಯೋಜನೆ ರೂಪಿಸಲಾಗುತ್ತಿದೆ” ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಅವರು ಬ್ರ್ಯಾಂಡ್ ಬೆಂಗಳೂರು ಹಾಗೂ ಅದರ ಅಧ್ಯಯನ ವರದಿ ಸ್ವೀಕೃತಿ ಹಾಗೂ ಮುಂದಿನ ಕ್ರಮಗಳ ವಿಚಾರವಾಗಿ ಪ್ರಶ್ನೆ ಕೇಳಿದರು.

    ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉತ್ತರಿಸಿದರು.

    “ಬೆಂಗಳೂರು ನಗರ ಈ ಹಿಂದೆ ಗಾರ್ಡನ್ ಸಿಟಿ, ಪ್ಯಾರಡೈಸ್ ಆಫ್ ಪೆನ್ಷನರ್ಸ್, ಹಾಸ್ಪಿಟಲ್ ಹಬ್, ಐಟಿ ಹಬ್, ಎಜುಕೇಶನ್ ಹಬ್ ಆಗಿ ಹೆಸರು ಮಾಡಿತ್ತು. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿಂದೆ ವಿಶ್ವ ನಾಯಕರು ಬೆಂಗಳೂರಿಗೆ ಬಂದು ನಂತರ ದೇಶದ ಇತರೆ ನಗರಗಳಿಗೆ ತೆರಳುತ್ತಿದ್ದರು.

    ಬೆಂಗಳೂರಿನ ಸ್ವರೂಪವನ್ನು ಬದಲಿಸಲು ನಮ್ಮ ಉಪಮುಖ್ಯಮಂತ್ರಿಗಳು ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆ ಮೂಲಕ ಕೆಲಸ ಮಾಡಲು ಮುಂದಾಗಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಸಂಘ ಸಂಸ್ಥೆಗಳು, ಎಲ್ಲಾ ವರ್ಗದ ಜನರ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ. ಸುಗಮ ಸಂಚಾರ ಬೆಂಗಳೂರು, ಹಸಿರು ಬೆಂಗಳೂರು, ಆರೋಗ್ಯ ಬೆಂಗಳೂರು, ಜನಹಿತ ಬೆಂಗಳೂರು, ಶೈಕ್ಷಣಿಕ ಬೆಂಗಳೂರು, ತಂತ್ರಜ್ಞಾನ ಮತ್ತು ಮಾಹಿತಿ ಬೆಂಗಳೂರು, ಹಸಿರು ಬೆಂಗಳೂರು, ಜಲ ಸುರಕ್ಷ ಬೆಂಗಳೂರು ಬಗ್ಗೆ 70 ಸಾವಿರ ಸಲಹೆಗಳನ್ನು ಸಂಗ್ರಹಿಸಲಾಗಿದೆ. ಈ ಪ್ರತಿ ವಿಭಾಗಕ್ಕೆ ಸಂಬಂಧಿಸಿದ ಸಲಹೆಗಳನ್ನು ವಿವಿಧ ಸಂಸ್ಥೆಗಳಿಗೆ ಅಧ್ಯಯನಕ್ಕೆ ನೀಡಲಾಗಿದೆ. ಈ ಸಂಸ್ಥೆಗಳು ವರದಿ ನೀಡಿದ ನಂತರ ಈ ಕುರಿತ ಸಲಹೆಗಳನ್ನು ಜಾರಿಗೊಳಿಸಲಾಗುವುದು” ಎಂದರು.

    “ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಬೃಹತ್ ಬೆಂಗಳೂರು ಸಮನ್ವಯ ಸಮಿತಿ ರಚನೆ ಮಾಡಲಾಗುವುದು. ಸರ್ಕಾರದ ಮುಖ್ಯಕಾರ್ಯದರ್ಶಿಗಳ ಮಟ್ಟದಲ್ಲಿ ಬೃಹತ್ ಬೆಂಗಳೂರು ಕಾರ್ಯಕಾರಿ ಸಮಿತಿ ಮಾಡಿ ಬೆಂಗಳೂರನ್ನು ಹೊಸ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಲು ನಮ್ಮ ಉಪಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ನಾವು ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಮುಂದೆ ಕೆಲಸ ಮಾಡುತ್ತೇವೆ ಎಂದು ಹೇಳುತ್ತಿದ್ದು, ಇದು ವಿರೋಧ ಪಕ್ಷದ ನಾಯಕರಿಗೆ ಅರ್ಥವಾಗುತ್ತಿಲ್ಲ.

    ಬೆಂಗಳೂರಿನ ಅಭಿವೃದ್ಧಿಯನ್ನು ಯೋಜನಾ ಬದ್ಧವಾಗಿ ಮಾಡಲು ನಾವು ಬದ್ಧ. ಇದಕ್ಕೆ ಎಲ್ಲಾ ಪಕ್ಷಗಳ ಸಹಕಾರ ಮುಖ್ಯ. ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಏನೂ ಕೆಲಸ ಆಗಿಲ್ಲ ಎನ್ನುತ್ತೀರಿ. ನಿಮ್ಮ ಸರ್ಕಾರ 25 ಸಾವಿರ ಕೋಟಿ ಸಾಲ ಮಾಡಿಟ್ಟು ಹೋಗಿದ್ದೀರಿ. ಅದರ ಜೊತೆಗೆ ಬಿಲ್ ಬಾಕಿ. ನಗರೊತ್ಥಾನ, ವಾರ್ಡ್ ಅನುದಾನ ಸೇರಿದಂತೆ ಸಾಲ ಹೆಚ್ಚು ಮಾಡಿದ್ದೀರಿ. ಮುನಿರತ್ನ ಅವರು ಮೆಲ್ಸೇತುವೆ ವಿಚಾರವಾಗಿ ಮಾತನಾಡುತ್ತಿದ್ದರು. ಇದೇ ಚಾಲುಕ್ಯ ಸರ್ಕಲ್ ಮೇಲ್ಸೆತುವೆಗೆ ವಿರೋಧ ಮಾಡಿದವರೇ ಬಿಜೆಪಿಯವರು” ಎಂದು ವಿರೋಧ ಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು.

    Verbattle
    Verbattle
    Verbattle
    Bangalore Bengaluru Brand Bengaluru Government Karnataka News Politics ಆರೋಗ್ಯ ಕಾಂಗ್ರೆಸ್ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus
    Next Article ಬರ ನಿರ್ವಹಣೆಗೆ ಹಣ ಬಿಡುಗಡೆ | Drought Relief
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LinwoodGah ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Glennhof ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.