Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕದಲ್ಲಿ ಏಕನಾಥ್ ಶಿಂಧೆ ಯಾರಾಗಲಿದ್ದಾರೆ | Eknath Shinde
    Trending

    ಕರ್ನಾಟಕದಲ್ಲಿ ಏಕನಾಥ್ ಶಿಂಧೆ ಯಾರಾಗಲಿದ್ದಾರೆ | Eknath Shinde

    vartha chakraBy vartha chakraಡಿಸೆಂಬರ್ 21, 202325 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ, ಡಿ.21- ಲೋಕಸಭಾ ಚುನಾವಣೆ ಮುನ್ನ ಅಥವಾ ನಂತರದಲ್ಲಿ ಕರ್ನಾಟಕದ ರಾಜಕೀಯ ಪರಿಸ್ಥಿತಿ ಏನು ಬೇಕಾದರೂ ಆಗಬಹುದು ಎಂದು ಭವಿಷ್ಯ ನುಡಿದಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕರ್ನಾಟಕದ ರಾಜಕೀಯದಲ್ಲಿ ಏಕನಾಥ್ ಶಿಂಧೆಯೂ (Eknath Shinde) ಇದ್ದಾರೆ, ಅಜಿತ್ ಪವಾರ್ ಸಹ ಇದ್ದಾರೆ. ಯಾರು ಮೊದಲು ಮುಂದೆ ಬರುತ್ತಾರೋ ಕಾದು ನೋಡಬೇಕು ಎಂದಿದ್ದಾರೆ.
    ನವದೆಹಲಿಯಲ್ಲಿ ತಮ್ಮ ತಂದೆ ಹಾಗೂ ಸೋದರನೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದರೆ ಸದ್ಯದ ಪರಿಸ್ಥಿತಿಯಲ್ಲಿ ಏನು ಬೇಕಾದರೂ ಆಗಬಹುದು’ ಎಂದರು.

    ಪ್ರಧಾನಿಗಳ ಭೇಟಿಯ ಸಮಯದಲ್ಲಿ ರಾಜ್ಯ ರಾಜಕೀಯ ಪರಿಸ್ಥಿತಿಯ ಜತೆಗೆ ಕೊಬ್ಬರಿ ಖರೀದಿ, ಕಾಡುಗೊಲ್ಲ ಜಾತಿಗೆ ಮೀಸಲಾತಿ ಸೌಲಭ್ಯ‌ ಹಾಗೂ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಹೇಳಿದರು.
    ಕೊಬ್ಬರಿಗೆ ಬೆಂಬಲ ಬೆಲೆ ನೀಡುವುದು ಹಾಗೂ ನಾಫೆಡ್‌ ಮೂಲಕ ಖರೀದಿ ಮಾಡಬೇಕು ಎಂಬ ಬಗ್ಗೆ ಪ್ರಧಾನಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಬಗ್ಗೆ ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
    ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕೂತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಒಂದು ಕ್ಷೇತ್ರ ಹೆಚ್ಚೂ ಕಡಿಮೆ ಆಗಬಹುದು ಅಷ್ಟೇ. ಅದರಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಮುಖ್ಯವಾಗಿ ಪರಸ್ಪರ ವಿಶ್ವಾಸ ಬೇಕು ಅಷ್ಟೇ, ಅದನ್ನು ನಾವು ಉಳಿಸಿಕೊಳ್ಳಬೇಕು. ಅದಕ್ಕೆ ಏನೆಲ್ಲಾ ಮಾಡಬೇಕೋ ಅದನ್ನು ಮಾಡುತ್ತೇನೆ. ಜನವರಿ ಅಂತ್ಯದ ಒಳಗೆ ನಾವು ಎಲ್ಲಾ ನಿರ್ಧಾರ ಮಾಡುತ್ತೇವೆ’ ಎಂದು ಅವರು ಹೇಳಿದರು.

    ನಾವು ಎಷ್ಟು ಗೆಲ್ಲುತ್ತೇವೆ ಎನ್ನುವ ಕಡೆಯಷ್ಟೇ ನಾವು ಕೇಳುತ್ತೇವೆ. ನಾವು ಎಲ್ಲೆಲ್ಲಿ ಗೆಲ್ಲುತ್ತೇವೆ ಅಂತ ನಮ್ಮ ಬಳಿ ರಿಪೋರ್ಟ್ ಇದೆ. ಆ ರಿಪೋರ್ಟ್ ಪ್ರಕಾರ ನಾವು ಕೆಲಸ ಮಾಡುತ್ತೇವೆ. ಇಲ್ಲಿ ಸೀಟ್ ಹಂಚಿಕೆ ಒಂದೇ ಪ್ರಮುಖ ಅಲ್ಲ. ನಾವು ಪರಸ್ಪರ ವಿಶ್ವಾಸ, ನಂಬಿಕೆಯಿಂದ ಕೆಲಸ ಮಾಡುತ್ತೇವೆ. ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
    ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶ ನನ್ನ ಮುಂದೆ ಇಲ್ಲ. ನಾನೇನಿದ್ದರೂ ರಾಜ್ಯ ರಾಜಕಾರಣಕ್ಕೆ ಸೀಮಿತ. ನಾನು ಇಲ್ಲಿಯೇ ಇದ್ದರೆ ರಾಜ್ಯಕ್ಕೆ ಒಳ್ಳೆಯದು ಎನ್ನುವುದು ಅನೇಕ ಜನರ ಅಭಿಪ್ರಾಯ, ನನ್ನ ಅಭಿಪ್ರಾಯವೂ ಅದೇ ಆಗಿದೆ. ನಾನು ಕರ್ನಾಟಕದಲ್ಲೇ ಇರಲು ತೀರ್ಮಾನ ಮಾಡಿದ್ದೇನೆ ಎಂದರು.
    ನಿಖಿಲ್ ಕುಮಾರಸ್ವಾಮಿ ಅವರು ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಪ್ರಚಾರ ಮಾಡುತ್ತಾರೆ. ಯಾವುದೇ ಕಾರಣಕ್ಕೂ ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ, ಜನರು ಚುನಾವಣೆಗೆ ನಿಲ್ಲಿ ಎಂದು ಹೇಳುತ್ತಿದ್ದಾರೆ.
    ನಿಖಿಲ್, ಮಂಡ್ಯ ಕ್ಷೇತ್ರದಿಂದಲೇ ಕಣಕ್ಕೆ ಇಳಿಯಲಿ ಎಂದು ಜನ ಬಯಸುತ್ತಿದ್ದಾರೆ. ಎರಡು ಬಾರಿ ಅವರು ಸೋತಿದ್ದಾರೆ. ಹೀಗಾಗಿ ಜನರ ಅನುಕಂಪವೂ ಇದೆ. ಆದರೆ, ಅವರಿಗೆ ಸ್ಪರ್ಧೆ ಮಾಡುವ ಉದ್ದೇಶವಿಲ್ಲ’ ಎಂದು ತಿಳಿಸಿದರು.

    Eknath Shinde Entertainment Government Karnataka Politics Trending Varthachakra ಚುನಾವಣೆ ನರೇಂದ್ರ ಮೋದಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕ್ರೆಡಲ್ ಕಿರೀಟಕ್ಕೆ ಮತ್ತೊಂದು ಗರಿ | KREDL
    Next Article ಕೋವಿಡ್ ಸೋಂಕು ಹೆಚ್ಚಿದೆ. ಆದರೂ ಹೊಸ ವರ್ಷದ ಸಂಭ್ರಮಕ್ಕಿಲ್ಲ ಅಡ್ಡಿ | COVID 19
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • double happiness cigarette ರಲ್ಲಿ Crypto ವಂಚಕ Arrest.
    • manchester cigarettes ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    • australia cheap tobacco ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe