Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋವಿಡ್ ಸೋಂಕು ಹೆಚ್ಚಿದೆ. ಆದರೂ ಹೊಸ ವರ್ಷದ ಸಂಭ್ರಮಕ್ಕಿಲ್ಲ ಅಡ್ಡಿ | COVID 19
    Trending

    ಕೋವಿಡ್ ಸೋಂಕು ಹೆಚ್ಚಿದೆ. ಆದರೂ ಹೊಸ ವರ್ಷದ ಸಂಭ್ರಮಕ್ಕಿಲ್ಲ ಅಡ್ಡಿ | COVID 19

    vartha chakraBy vartha chakraಡಿಸೆಂಬರ್ 21, 202328 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    New Year 2024
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.21: ನೆರೆಯ ಕೇರಳದಲ್ಲಿ ರೂಪಾಂತರಗೊಂಡ ಕೋವಿಡ್ ವೈರಸ್ (COVID 19) ವ್ಯಾಪಕ ಪ್ರಮಾಣದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಆತಂಕಗೊಂಡಿದ್ದವರು ನಿರಾತಂಕವಾಗಿರುವ ಸುದ್ದಿ ಹೊರಬಿದ್ದಿದೆ.
    ಕೋವಿಡ್‌ನ ಕುಲಾಂತರಿ JN.1 ವೈರಾಣು ಹರಡುವಿಕೆ ತಡೆಯಲು ಮುನ್ನೆಚ್ಚರಿಕೆಯೇ ಮದ್ದು.ಇದನ್ನು ಎಲ್ಲರೂ ಪಾಲಿಸಬೇಕು ಹೀಗಾಗಿ ಸರ್ಕಾರ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ಕೋವಿಡ್-19ರ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಜನಸಂದಣಿ ಹೆಚ್ಚು ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು. ಮಾರ್ಗಸೂಚಿ ಬಗ್ಗೆ ಸಚಿವ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಲಾಗುವುದು’ ಎಂದು ತಿಳಿಸಿದರು
    ಕೋವಿಡ್‌ಗೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿ ಕಾಲಕಾಲಕ್ಕೆ ನೀಡುವ ಸಲಹೆಯನ್ನು ಸರ್ಕಾರ ಅನುಸರಿಸಲಿದೆ. ಕೋವಿಡ್ ಪರೀಕ್ಷಾ ಪ್ರಮಾಣ ದಿನಕ್ಕೆ 5 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇದರಲ್ಲಿ 1500 ರ‍್ಯಾಪಿಡ್ ಆಯಂಟಿಜೆನ್ ಟೆಸ್ಟ್‌ ಹಾಗೂ 3500 ಆರ್‌ಟಿಪಿಸಿಆರ್ ಪರೀಕ್ಷೆಗಳಿವೆ. ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಅಗತ್ಯವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರ್ಕಾರವೂ ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ವಹಿಸಲಿದೆ’ ಎಂದು ಹೇಳಿದರು.
    ಬೆಂಗಳೂರಿನಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿದೆ. ಕರ್ನಾಟಕದಲ್ಲಿ ಪ್ರಸ್ತುತ 92 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಬೆಂಗಳೂರಿನಲ್ಲೇ 80 ಪ್ರಕರಣಗಳಿವೆ. 72 ಜನ ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದಾರೆ. 20 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆರೆಯ ಕೇರಳದಲ್ಲಿ 2041, ತಮಿಳುನಾಡಿನಲ್ಲಿ 77, ಮಹಾರಾಷ್ಟ್ರದಲ್ಲಿ 35, ಗೋವಾದಲ್ಲಿ 23 ಹಾಗೂ ಗುಜರಾತ್‌ನಲ್ಲಿ 12 ಸಕ್ರಿಯ ಪ್ರಕರಣಗಳು ವರದಿಯಾಗಿವೆ’ ಎಂದು ವಿವರಿಸಿದರು.
    ಹಿಂದಿನ ಕೋವಿಡ್‌ ಅಲೆಗಳ ಸಂದರ್ಭದಲ್ಲಿ ನಡೆದ ತಪ್ಪುಗಳು ಈ ಬಾರಿ ಆಗಬಾರದು. ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ಗಳು ಯಾವುದಕ್ಕೂ ತೊಂದರೆ ಆಗಬಾರದು. ಕಳೆದ ಬಾರಿ ತೊಂದರೆ ಆಗಿ ಹಲವಾರು ಜನ ಮೃತಪಟ್ಟರು. ಆಕ್ಸಿಜನ್‌ ಲಭ್ಯತೆಯನ್ನು ಖಾತರಿ ಪಡಿಸಬೇಕು. ಇದಕ್ಕೆ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸನ್ನದ್ಧವಾಗಿ ಇವು ಯಾವುದೂ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು. ಇದಾದ ನಂತರ ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಲಾಯಿತು.

    ಮಾರ್ಗಸೂಚಿ:
    60 ವರ್ಷ ಮೇಲ್ಪಟ್ಟವರು ಮೂತ್ರಪಿಂಡ, ಹೃದಯ, ಯಕೃತ್ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿ ಹಾಗೂ ಬಾಣಂತಿಯರು ಮಾಸ್ಕ್‌ ಧರಿಸುವುದು ಹಾಗೂ ಮುಚ್ಚಿದ, ಹೆಚ್ಚು ಗಾಳಿಯಾಡದ ಸ್ಥಳಗಳಿಗೆ ಹಾಗೂ ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡದೆ ಇರುವುದು.
    ಉಸಿರಾಟದ ಸಮಸ್ಯೆಯ ಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ನೆಗಡಿ ಇತ್ಯಾದಿಗಳಿಂದ ಬಳಲುತ್ತಿರುವವರು ಕೂಡಲೇ ವೈದ್ಯಕೀಯ ಸಮಾಲೋಚನೆ ನಡೆಸುವುದು ಹಾಗೂ ಮಾಸ್ಕ್‌ ಧರಿಸುವುದು.
    ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡುವುದು. ಅನಾರೋಗ್ಯ ಪೀಡಿತರಾದರೆ ಮನೆಯಲ್ಲೇ ಇರಿ ಹಾಗೂ ಇತರರೊಂದಿಗೆ ಸಂಪರ್ಕವನ್ನು ಕಡಿಮೆ ಮಾಡಿ.
    ಜನಸಂದಣಿಯ ಪ್ರದೇಶದಲ್ಲಿ ಮಾಸ್ಕ್‌ ಧರಿಸುವುದು ಉತ್ತಮ.
    ವಿದೇಶ ಪ್ರವಾಸದ ಸಂದರ್ಭದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವುದು.
    ರಾಜ್ಯವೂ ಕೇರಳ ಮತ್ತು ತಮಿಳುನಾಡು ಗಡಿ ಭಾಗದಲ್ಲಿ ಜ್ವರದ ಪ್ರಕರಣಗಳ ಮೇಲೆ ನಿಗಾ ವಹಿಸಿ, ಪರೀಕ್ಷೆ ಮತ್ತು ವರದಿ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ.
    ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಸಿರಾಟದ ತೊಂದರೆ ಮತ್ತು ಜ್ವರದ ಲಕ್ಷಣ ಇರುವ ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯವಾಗಿ ಮಾಡಲು ಸೂಚಿಸಿದೆ

    Bangalore COVID-19 Karnataka News Trending Varthachakra ಆರೋಗ್ಯ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕದಲ್ಲಿ ಏಕನಾಥ್ ಶಿಂಧೆ ಯಾರಾಗಲಿದ್ದಾರೆ | Eknath Shinde
    Next Article ಹೈಕಮಾಂಡ್ ಮುಂದೆ ವಿಜಯೇಂದ್ರ ಅಳಲು | Vijayendra
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • double happiness cigarette ರಲ್ಲಿ Crypto ವಂಚಕ Arrest.
    • manchester cigarettes ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    • australia cheap tobacco ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe