Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಅವರಿಗೆ ದೇವೇಗೌಡರ ಆಶೀರ್ವಾದ | Devegowda
    Trending

    ಸಿದ್ದರಾಮಯ್ಯ ಅವರಿಗೆ ದೇವೇಗೌಡರ ಆಶೀರ್ವಾದ | Devegowda

    vartha chakraBy vartha chakraಜನವರಿ 6, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.6- ರಾಜ್ಯದಲ್ಲಿ ಕಾಂಗ್ರೆಸ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (Devegowda) ಅವರ ಶಾಪವನ್ನು ಆಶೀರ್ವಾದ ಎಂದು ಭಾವಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
    ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ, ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

    ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನ್ನಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು ಎಂದು ಮನವಿ ಮಾಡಿದ್ದಾರೆ.
    ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು ಸಂಗ ದೋಷದ ಫಲ ಎಂದು ಲೇವಡಿ ಮಾಡಿದ್ದಾರೆ.
    ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ದೇವೇಗೌಡರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ ಎಂದು ಹೇಳಿದ್ದಾರೆ.

    ಜಾತ್ಯತೀತ ಜನತಾ ಪಕ್ಷ ಎನ್ನುವುದು ಬಿಜೆಪಿಯ ಬಿ ಟೀಮ್ ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ. ಈ ಪಕ್ಷದ ಜಾತ್ಯತೀತ ಮುಖವನ್ನು ನಿಜ ಎಂದು ನಂಬಿ ಒಂದಷ್ಟು ಸೆಕ್ಯುಲರ್ ಮತದಾರರು ದಾರಿ ತಪ್ಪುವುದನ್ನು ಜೆಡಿಎಸ್ ಪಕ್ಷದ ಈ ನಿಲುವು ತಪ್ಪಿಸಿದೆ. ಇದು ಮುಂದಿನ ಚುನಾವಣೆಯನ್ನು ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವಿನ ನೇರ ಸಂಘರ್ಷವಾಗಿ ಪರಿವರ್ತಿಸಿದೆ. ಜಾತ್ಯತೀತತೆ ಮತ್ತು ಸೌಹಾರ್ದತೆಯ ಪರಂಪರೆಯ ಕರ್ನಾಟಕದ ಮತದಾರರು ಮುಂದಿನ ಚುನಾವಣೆಗಳಲ್ಲಿ ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ ಎಂದು ಹೇಳಿದ್ದಾರೆ

    Verbattle
    Verbattle
    Verbattle
    #devegowda Government Karnataka News Politics ಕಾಂಗ್ರೆಸ್ ಚುನಾವಣೆ ಡಿ.ಕೆ ಶಿವಕುಮಾರ್ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೂವರು ಡಿಸಿಎಂ ‌ಬೇಡಿಕೆಗೆ ಮದ್ದಿಟ್ಟ ಹೈಕಮಾಂಡ್ | Congress High Command
    Next Article Guest Lecturer’s ಗೌರವ ಧನ ಹೆಚ್ಚಳ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    1 ಟಿಪ್ಪಣಿ

    1. Cdelgh on ಫೆಬ್ರವರಿ 13, 2026 6:27 ಅಪರಾಹ್ನ

      betmgm AL betmgm-play mgm online gambling

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ukzbrx ರಲ್ಲಿ ಈ ನಿಯಮ ಪಾಲಿಸಿದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆ | Ganesh Chaturthi
    • Glennhof ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • LinwoodGah ರಲ್ಲಿ ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.