ಬೆಂಗಳೂರು.ಜ7: ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ರಮೇಶ್ ಜಾರಕಿಹೊಳಿ (Ramesh Jarkiholi ) ವಿರುದ್ಧ ಬ್ಯಾಂಕಿಗೆ ಮೋಸ ಮಾಡಿದ ಆರೋಪದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರಿನ ಅಫೆಕ್ಸ್ ಬ್ಯಾಂಕ್ ನ ವಿ.ವಿ. ಪುರಂ ಶಾಖೆಯಲ್ಲಿ ಸಾಲ ಪಡೆದಿರುವ ರಮೇಶ್ ಜಾರಕಿಹೊಳಿ ಅವರು ಅದನ್ನು ಮರು ಪಾವತಿಸಿಲ್ಲ ಅಲ್ಲದೆ ಸಾಲ ಮರುಪಾವತಿಸಬಾರದು ಎಂಬ ಏಕೈಕ ಉದ್ದೇಶದಿಂದ ಬ್ಯಾಂಕಿನಲ್ಲಿ ಹೊಂದಿದ್ದ ಎಲ್ಲಾ ಪದಾಧಿಕಾರಿಗಳ ಹುದ್ದೆಯಿಂದ ಹೊರಬಂದಿದ್ದಾರೆ ಎಂದು ಆರೋಪಿಸಿ ವಿ.ವಿ. ಪುರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.
ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಅವರು ಮಾಜಿ ಸಚಿವ ರಮೇಶ ಜಾರಕಿಹೊಳಿ (Ramesh Jarkiholi ) ಹಾಗೂ ಇವರ ಮಾಲಿಕತ್ವದ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ನ ಇಬ್ಬರು ಪದಾಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು
ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಕಂಪನಿಯ ವಿಸ್ತರಣೆ ಮತ್ತು ನಿರ್ವಹಣೆಗಾಗಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನಿಂದ ಸಾಲ ಪಡೆದುಕೊಂಡಿದ್ದರು.
ಬ್ಯಾಂಕ್ 2013 ರಿಂದ 2017ರವರೆಗೆ 232 ಕೋಟಿ 88 ಲಕ್ಷ ಸಾಲ ಮಂಜೂರು ಮಾಡಿದೆ. ಆದರೆ ಇಲ್ಲಿಯವರೆಗೂ ಸಾಲದ ಹಣ ಪಾವತಿ ಮಾಡಿಲ್ಲ. ಹೀಗಾಗಿ ಇವರು ಮಾಡಿರುವ ಸಾಲಕ್ಕೆ ಬಡ್ಡಿ ಸೇರಿ 2023ರ ವೇಳೆಗೆ 439 ಕೋಟಿ 7 ಲಕ್ಷ ಸಾಲದ ಮೊತ್ತ ಬಾಕಿ ಉಳಿದುಕೊಂಡಿದೆ.
ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಮಂಡಳಿಯ ಸದಸ್ಯರಾಗಿದ್ದ ರಮೇಶ್ ಜಾರಕಿಹೊಳಿ ಅವರು ತಮ್ಮ ಪ್ರಭಾವ ಬಳಸಿ ಸಾಲ ಪಡೆದುಕೊಂಡಿದ್ದರು.ಸಾಲ ಮರು ಪಾವತಿಸುವಂತೆ ಬ್ಯಾಂಕ್ ಹಲವಾರು ಬಾರಿ ನೋಟೀಸ್ ನೀಡಿದರೂ ಅದಕ್ಕೆ ಉತ್ತರ ನೀಡುವ ಗೋಜಿಗೆ ಹೋಗಿಲ್ಲ.ಅಷ್ಟೇ ಅಲ್ಲದೆ ಇದೀಗ ಅವರು ಬ್ಯಾಂಕ್ ನ ನಿರ್ದೇಶಕ ಮಂಡಳಿಯೂ ಸೇರಿದಂತೆ ಎಲ್ಲಾ ಸದಸ್ಯತ್ವದಿಂದ ಹೊರ ಬಂದಿದ್ದಾರೆ. ಬ್ಯಾಂಕ್ ಗೆ ಸಾಲ ಮರುಪಾವತಿ ಮಾಡದೇ ಮೋಸ ಮಾಡುವ ಉದ್ದೇಶದಿಂದ ಯಾವುದೇ ಮಾಹಿತಿ ನೀಡದೇ ಆಡಳಿತ ಮಂಡಳಿ ಹುದ್ದೆಗಳಿಂದ ಹೊರಬಂದಿದ್ದಾರೆ. ಬ್ಯಾಂಕ್ ನವರಿಗೆ ನಂಬಿಕೆದ್ರೋಹ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ದೂರನ್ನು ಸ್ವೀಕರಿಸಿದ ಪೊಲೀಸರು ಇದೀಗ ರಮೇಶ್ ಜಾರಕಿಹೊಳಿ ಮತ್ತಿಬ್ಬರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
1 ಟಿಪ್ಪಣಿ
Вывод из запоя Алматы fizioterapijakeskic.com .