Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬರಕ್ಕೆ ಸ್ಪಂದಿಸದ ರಾಜ್ಯ ಸರ್ಕಾರ-ಬಿಜೆಪಿ‌ ದೂರು | Drought
    Trending

    ಬರಕ್ಕೆ ಸ್ಪಂದಿಸದ ರಾಜ್ಯ ಸರ್ಕಾರ-ಬಿಜೆಪಿ‌ ದೂರು | Drought

    vartha chakraBy vartha chakraಜನವರಿ 9, 202427 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.9- ರಾಜ್ಯದಲ್ಲಿ ತೀವ್ರ‌ ಸ್ವರೂಪದ ಬರಗಾಲವಿದ್ದರೂ ಜನರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
    ಪ್ರತಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ನಿಯೋಗ ತಕ್ಷಣವೇ ಬರ ಪೀಡಿತರ ನೆರವಿಗೆ ಧಾವಿಸಲು ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಮನವಿ ಮಾಡಿದರು.

    ಈ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್,ಕಳೆದ 70 ವರ್ಷಗಳಲ್ಲಿ ಇಂತಹ ಕೆಟ್ಟ ಸರ್ಕಾರವನ್ನು ನೋಡಿಲ್ಲ. ಬೇಜವಾಬ್ದಾರಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದೇವೆ. ರಾಜ್ಯದಲ್ಲಿ ಸುಮಾರು 600ರಿಂದ 700 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ಆ ಕಡೆ ಸರ್ಕಾರ ತಿರುಗಿಯೂ ನೋಡಿಲ್ಲ. ತೀವ್ರ ಬರವಿದ್ದರೂ ರೈತರಿಗೆ ಪರಿಹಾರ ಧನ ತಲುಪಿಸಿಲ್ಲ. ರೈತರಿಗೆ ದಿಕ್ಕು ತೋಚದಂತೆ ಮಾಡಿದ್ದಾರೆ ಎಂದು ಆಪಾದಿಸಿದರು.
    ನಮ್ಮ ಸರ್ಕಾರ ಅಧಿಕಾರಿದಲ್ಲಿದ್ದಾಗ ಕೇಂದ್ರದ ನೆರವಿಗೆ ಕಾಯದೆ ಡಿಬಿಟಿ ಮೂಲಕ ರೈತರಿಗೆ 3 ಸಾವಿರ ಕೋಟಿ ರೂ. ನೀಡಿದ್ದೆವು. ಆದರೆ ಈ ಸರ್ಕಾರ 100 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುತ್ತೇವೆ ಎಂದು ಹೇಳುತ್ತಾರೆ. ರೈತರಿಗೆ ಬರೀ 3 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ದೂರಿದರು.

    ಬರಪೀಡಿತ ಪ್ರದೇಶಗಳಿಗೆ ತಕ್ಷಣವೇ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುವಂತೆ ನಿರ್ದೇಶನ ಮಾಡಲು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು. ಬರ, ಪ್ರವಾಹದಂತಹ ಸಂಕಷ್ಟ ಸಂದರ್ಭದಲ್ಲಿ ಜನರ ನೆರವಿಗೆ ಸರ್ಕಾರ ಧಾವಿಸಿ ಸಹಾಯ ಮಾಡಿದರೆ ಸರ್ಕಾರ ಜೀವಂತ ಇದ್ದಂತೆ. ಸಂಕಷ್ಟದಲ್ಲಿರುವ ರೈತರ ಕಡೆಗೆ ನೋಡದಿದ್ದರೆ ಅದು ಸತ್ತಂತೆ ಎಂದು ಟೀಕಿಸಿದರು.
    18 ಸಾವಿರ ಕೋಟಿ ರೂ. ಬರಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವ ರಾಜ್ಯ ಸರ್ಕಾರ ಕೇವಲ 105 ಕೋಟಿ ರೂ. ಮಾತ್ರ ಅಂದರೆ ಶೇ.1ರಷ್ಟೂ ಬಿಡುಗಡೆ ಮಾಡಿಲ್ಲ. ರೈತರಿಗೆ ತಲಾ 2000 ರೂ. ನೀಡುವುದಾಗಿ ಹೇಳಿ ತಿಂಗಳು ಕಳೆದರೂ ಹಣ ಬಿಡುಗಡೆ ಮಾಡಿಲ್ಲ. ಆಧಾರ್ ಜೋಡಣೆಯ ಕಥೆ ಹೇಳುತ್ತಿದ್ದಾರೆ. ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಸಂಪೂರ್ಣ ಮಾಹಿತಿ ಇದೆ. ನಮ್ಮ ಸರ್ಕಾರದ ಅವಧಿಯಲ್ಲಿ 14 ಲಕ್ಷ ರೈತರಿಗೆ ನೇರವಾಗಿ ಹಣ ವರ್ಗಾವಣೆ ಮಾಡಿದ್ದೆವು ಎಂದರು.
    ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಅಭಿವೃದ್ದಿ ಕಾಮಗಾರಿಗಳು ಆರಂಭವಾಗಿಲ್ಲ ಎಂದು ಆರೋಪಿಸಿದ ಅವರು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ 3 ತಿಂಗಳಿಗೊಮ್ಮೆ ಹಣ ಬಿಡುಗಡೆ ಮಾಡಲಿದೆ ಎಂದು ಹೇಳಿದರು.

    Verbattle
    Verbattle
    Verbattle
    drought Karnataka News Trending
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿಗಳು ಲೋಕಸಭಾ ಅಖಾಡಕ್ಕೆ ಧುಮುಕಲಿದ್ದಾರೆ | Lok Sabha Elections
    Next Article ವಿದೇಶಿ ಮಹಿಳೆಯ ಹೈಟೆಕ್ ವೇಶ್ಯಾವಾಟಿಕೆ ಜಾಲ | Prostitution
    vartha chakra
    • Website

    Related Posts

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    ಫೆಬ್ರವರಿ 2, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಡಿ.ಕೆ.ಶಿವಕುಮಾರ್ ಭಾಷಣದಲ್ಲಿ ಏನು ಹೇಳಿದ್ದಾರೆ ನೋಡಿ

    ಜನವರಿ 30, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesknocK ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Conradjag ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Jamespiedy ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    ಫೆಬ್ರವರಿ 4, 2026

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    ಫೆಬ್ರವರಿ 4, 2026

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.