Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಅಧಿಕಾರ | Congress
    ಸುದ್ದಿ

    ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಅಧಿಕಾರ | Congress

    vartha chakraBy vartha chakraಜನವರಿ 10, 202421 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜ,10: ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯದ ಜನತಗೆ ನೀಡಿದ ಗ್ಯಾರಂಟಿ ಭರವಸೆಗಳನ್ನು ಯೋಜನೆಗಳ ಮೂಲಕ ಜಾರಿಗೊಳಿಸಿರುವ ರಾಜ್ಯ ಸರ್ಕಾರ ಇವುಗಳ ಅನುಷ್ಠಾನಕ್ಕೆ ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದೆ.
    ಲೋಕಸಭಾ ಚುನಾವಣೆ ಸಿದ್ಧತೆಗಾಗಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ (Congress) ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು
    ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು.ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದೆ ಎಂದು ತಿಳಿಸಿದರು.

    ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು ಅವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಮಾಡಲಾಗುವುದು.ಹಾಗೂ ಪ್ರತಿ ತಿಂಗಳು 50 ಸಾವಿರ ನೀಡಲಾಗುವುದು ಎಂದು ‌ತಿಳಿಸಿದರು.
    ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯಲ್ಲಿ ಅಧ್ಯಕ್ಷರ ಜೊತೆಗೆ 21 ಸದಸ್ಯರು ಇರಲಿದ್ದಾರೆ. ಎಲ್ಲಾ 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದು ವಿವರಿಸಿದರು.

    ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ ₹16 ಕೋಟಿ ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದರು.
    ಕಾರ್ಯಕರ್ತರಿಗೆ, ಶಾಸಕರಲ್ಲದವರಿಗೆ ಸಂಸದರಲ್ಲದವರಿಗೆ, ಸಮಿತಿ ಸದಸ್ಯತ್ವ ದೊರೆಯಲಿದೆ. ವಿವಿಧ ಇಲಾಖೆಗಳ ಸಮಿತಿಗಳನ್ನು ಕೂಡಲೇ ರಚಿಸಲು ಆಯಾ ಇಲಾಖೆಗಳ ಸಚಿವರ ವಿವೇಚನೆಗೆ ಬಿಡಲಾಗಿದೆ. ಹೆಸರುಗಳನ್ನು ಪಡೆಯುವಾಗ, ನಮ್ಮ ಶಾಸಕರು, ಸಂಸದರ ಸಲಹೆ ಪಡೆಯಲಾಗುವುದು. ವಿಧಾನಸಭೆ ಟಿಕೆಟ್ ದೊರೆಯದವರಿಗೆ ಹಾಗೂ ಕೆಲವು ಮಾಜಿ ಶಾಸಕರಿಗೂ ಅವಕಾಶ ಕಲ್ಪಿಸಲಾಗುವುದು.ಈ ಸಮಿತಿಗಳಿಗೆ ಎರಡು ವರ್ಷಗಳ ಅಧಿಕಾರಾವಧಿ ಇರಲಿದೆ ಈ ಮೂಲಕ ಕಾರ್ಯಕರ್ತರಿಗೆ ಸರ್ಕಾರದ ಅಧಿಕಾರ ಸಿಗುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.
    ಕಾರ್ಯಕರ್ತರ ಶ್ರಮದಿಂದ ಪಕ್ಷ ಗಟ್ಟಿಯಾಗಿದೆ. ಹೀಗಾಗಿ‌ ಅವರ ಶ್ರಮವನ್ನು ಗುರುತಿಸಿ ಗೌರವಿಸಬೇಕಾಗಿದೆ.ಲೋಕಸಭಾ ಚುನಾವಣೆಯನ್ನು ನಾವು ಗೆಲ್ಲಲೇ ಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಗೆಲ್ಲದೆ ಹೋದರೆ ಅದು ನಮಗೆ ಹಿನ್ನಡೆಯಾಗಲಿದೆ. ನಾವು ಗೆಲ್ಲಲೇಬೇಕು. 28 ಕ್ಕೆ 28 ಸೀಟನ್ನು ಗೆಲ್ಲಬೇಕು. ಕನಿಷ್ಠ 26 ಸೀಟು ಗೆಲ್ಲಬೇಕು. ಜನರ ನಾಡಿ ಮಿಡಿತ ನಮ್ಮ ಪರವಾಗಿರುವುದರಿಂದ ಅಪಪ್ರಚಾರದಿಂದ ನಾವು ಯಾರೂ ಹತಾಶರಾಗಬಾರದು. ಸಕಾರಾತ್ಮಕವಾಗಿರಬೇಕು ಎಂದು ಮುಖ್ಯಮಂತ್ರಿ ಹೇಳಿದರು.

    Verbattle
    Verbattle
    Verbattle
    Congress Karnataka News Politics ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಸಭೆಯಲ್ಲಿ ಕೇಂದ್ರ ಮಂತ್ರಿ-ಶಾಸಕರ Big fight
    Next Article ಕೇಂದ್ರದಲ್ಲಿ ಮತ್ತೆ ಮೋದಿ ನೇತೃತ್ವದ ಸರ್ಕಾರ | Modi Govt
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • Glennhof ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LinwoodGah ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.