Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಂಕರಾಚಾರ್ಯರು ಯಾಕೆ ಹೀಗೆ ಹೇಳಿದರು? | Shankaracharya
    Trending

    ಶಂಕರಾಚಾರ್ಯರು ಯಾಕೆ ಹೀಗೆ ಹೇಳಿದರು? | Shankaracharya

    vartha chakraBy vartha chakraಜನವರಿ 12, 2024458 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ – ಕೋಟ್ಯಾಂತರ ಭಕ್ತರು,ಆಸಕ್ತರು ಕುತೂಹಲದಿಂದ ಕಾಯುತ್ತಿರುವ ಪರಮ ಪವಿತ್ರ ವಿದ್ಯಮಾನಕ್ಕೆ ದಿನಗಣನೆ ಆರಂಭವಾಗಿದೆ.ದೇಶದ ಜನತೆ ಉತ್ತರ ಪ್ರದೇಶದ ಅಯೋಧ್ಯೆಯತ್ತ ತನ್ನ ಗಮನ ಕೇಂದ್ರೀಕರಿಸಿದೆ.
    ಇದಕ್ಕೆ ಪ್ರಮುಖ ಕಾರಣ ರಾಮಮಂದಿರ ಉದ್ಘಾಟನೆ ಹಾಗೂ ಭಗವಾನ್ ಶ್ರೀ ರಾಮ ಚಂದ್ರ ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಸಮಾರಂಭ ಇದೇ 22ರಂದು ನಡೆಯಲಿರುವ ಈ ಅಭೂತಪೂರ್ವ ಸಮಾರಂಭ ಜನರ ಗಮನ ಸೆಳೆದಿರುವ ಬೆನ್ನಲ್ಲೇ ವಿವಾದಗಳ ಮೂಲಕವೂ ಗಮನ ಸೆಳೆಯುತ್ತಿದೆ.

    ಈ ವಿವಾದಗಳ ಸಾಲಿಗೆ ಈಗ ಹೊಸ ಸೇರ್ಪಡೆ ಶಂಕರಪೀಠಗಳು. ಆದಿ ಶಂಕರಾಚಾರ್ಯರು (Shankaracharya) ಸ್ಥಾಪಿಸಿದ ಈ ಪೀಠಗಳನ್ನು ಅತ್ಯಂತ ಪವಿತ್ರ ಎಂದು ಪರಿಗಣಿಸಲಾಗಿದೆ. ಈ ಪೀಠಗಳ ಪೀಠಾಧಿಪತಿಗಳು‌ ಶಂಕರಾಚಾರ್ಯರನ್ನು ಕೂಡಾ ಅತ್ಯಂತ ಎತ್ತರದ ಸ್ಥಾನದಲ್ಲಿಟ್ಟು ಗೌರವಿಸುತ್ತಾರೆ.
    ಶಂಕರಾಚಾರ್ಯರನ್ನು ಹಿಂದುತ್ವ ಸಿದ್ಧಾಂತದ ಪ್ರಮುಖ ಪ್ರಭಾವಿಗಳು ಎಂದು ಪರಿಗಣಿಸಲಾಗುತ್ತದೆ. ದೊಡ್ಡ ಜನಸಮೂಹದ ಬೆಂಬಲವನ್ನು ಹೊಂದಿರುವ ಇವರು, ದೇಶದಲ್ಲಿರುವ ಸಂತರು ಮತ್ತು ಸ್ವಾಮೀಜಿಗಳಲ್ಲಿಯೇ ಹೆಚ್ಚಿನ ಗೌರವಾತಿಥ್ಯಕ್ಕೂ ಪಾತ್ರರಾಗುತ್ತಾರೆ.

    ಇಂತಹ ಶಂಕರಾಚಾರ್ಯರು ಇದೀಗ ಅಯೋಧ್ಯೆಯ ರಾಮಮಂದಿರ ವಿವಾದಕ್ಕೆ ಹೊಸ ತಿರುವು ನೀಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಅಪೂರ್ಣ ನಿರ್ಮಾಣದ ರಾಮಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆಯೇ ಹಿಂದುತ್ವದ ತತ್ವಗಳು ಹಾಗೂ ಸನಾತನ ಧರ್ಮಕ್ಕೆ ವಿರುದ್ಧವಾದುದು’ ಎಂದು ಉತ್ತರಾಖಂಡದ ಬದರಿಕಾಶ್ರಮ ಜ್ಯೋತಿರ್ಮಠದ ಶಂಕರಾಚಾರ್ಯರಾದ ಸ್ವಾಮಿ ಅವಿಮುಕ್ತೇಶ್ವರಾನಂದ ಮಹಾರಾಜ್‌ ಮತ್ತು ಪುರಿ ಮೂಲದ ಗೋವರ್ಧನ ಪೀಠದ ಶಂಕರಾಚಾರ್ಯರಾದ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅವರು ಹೇಳಿದ್ದಾರೆ.ರಾಮಮಂದಿರವು ರಾಮನಂದಿ ಪಂಥಕ್ಕೆ ಸೇರುವುದೇ ಆಗಿದ್ದರೆ, ಅದರ ಕಾರ್ಯದರ್ಶಿ ಹಾಗೂ ಇತರೆ ಪದಾಧಿಕಾರಿಗಳು ಏನು ಮಾಡುತ್ತಿದ್ದಾರೆ’ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.
    ಮೂರ್ತಿ ಪ್ರತಿಷ್ಠಾಪನೆಗೆ ಈ ಇಬ್ಬರು ಶಂಕರಾಚಾರ್ಯರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿರುವುದು ವಿವಾದಕ್ಕೆ ಕಾರಣವಾಗಿದೆ.

    ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭವು ‘ಹಿಂದುತ್ವದ ತತ್ವ ಹಾಗೂ ಸಿದ್ಧಾಂತಗಳಿಗೆ ವಿರುದ್ಧವಾಗಿದೆ’ ಎಂದು ಇಬ್ಬರೂ ಶಂಕರಾಚಾರ್ಯರು ಬಲವಾಗಿ ಪ್ರತಿಪಾದಿಸಿದ್ದಾರೆ.
    ಒಬ್ಬ ವ್ಯಕ್ತಿಯ ಎಷ್ಟೇ ಗೌರವಾನ್ವಿತ ಸ್ಥಾನದಲ್ಲಿಯೇ ಇರಲಿ ಅವರ ನಡವಳಿಕೆ ಸರಿಯಲ್ಲ ಎನಿಸಿದಾಗ ಖಂಡಿತವಾಗಿ ವಿರೋಧಿಸಬೇಕು.
    ಮೋದಿ ಜೀ ಅವರು ದೇವಸ್ಥಾನ ಉದ್ಘಾಟನೆ ಮಾಡುತ್ತಾರೆ, ಮೂರ್ತಿಯನ್ನು ಸ್ಪರ್ಶಿಸುತ್ತಾರೆ. ನಾನೇನು ಮಾಡಲಿ, ಚಪ್ಪಾಳೆ ತಟ್ಟಲಾ? ನನ್ನ ಸ್ಥಾನಕ್ಕೂ ಸ್ವಲ್ಪ ಘನತೆ ಇದೆ. ಧಾರ್ಮಿಕ ಸಿದ್ಧಾಂತಗಳಿಗೆ ಅನುಗುಣವಾಗಿ ನಡೆಯದ ಕಾರ್ಯಕ್ರಮಕ್ಕೆ ನಾನು ಏಕೆ ಹೋಗಬೇಕು’ ಎಂದು ಅವರು ಪ್ರಶ್ನಿಸಿದ್ದಾರೆ.
    ಆದರೆ, ಶೃಂಗೇರಿ ಮಠದ ಶಂಕರಾಚಾರ್ಯರಾಗಿರುವ ಸ್ವಾಮಿ ಭಾರತೀ ತೀರ್ಥ ಮತ್ತು ಗುಜರಾತ್ ಮೂಲದ ದ್ವಾರಕಾ ಪೀಠದ ಶಂಕರಾಚಾರ್ಯರಾಗಿರುವ ಸ್ವಾಮಿ ಸದಾನಂದ ಸರಸ್ವತಿ ಅವರು, ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಪೂರ್ಣ ಬೆಂಬಲ ಘೋಷಿಸಿದ್ದಾರೆ.

     

    ALSO READ | Latest Kannada News

    ರಾಮಮಂದಿರ ಉದ್ಘಾಟನೆಯಂದು ಮದ್ಯ ನಿಷೇಧ! | Ram Mandir

    #kannada art Government kannada news Karnataka m News Politics Shankaracharya Trending Varthachakra ಧರ್ಮ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleದಿಢೀರ್ ಹಣ ಗಳಿಸಲು ಪಿಂಪ್ ಆದ ಸಾಪ್ಟ್ ವೇರ್ ಇಂಜಿನಿಯರ್ | Prostitution
    Next Article IPS ಗಳು‌ ಕೇಂದ್ರ ನಿಯೋಜನೆಗೆ ಹೋಗಲು‌ ಹಿಂದೇಟು
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektricheskie jaluzi_kgot ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • rylonnie shtori na plastikovie okna s elektroprivodom_zkSn ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • MichaelTeamy ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe