ಬೆಂಗಳೂರು: ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಬೆನ್ನಲ್ಲೇ ರಾಜ್ಯ (Karnataka) ಸರ್ಕಾರ ನಿವೃತ್ತ ನೌಕರರ ಓಲೈಕೆಗೆ ಮುಂದಾಗಿದೆ.ಹಳೆಯ ಪಿಂಚಣಿ ಪದ್ಧತಿಗೆ ಆಗ್ರಹಿಸಿ ಪ್ರತಿಭಟನೆಯ ಹಾದಿ ಹಿಡಿಯಲು ಮುಂದಾದವರಿಗೆ ಸಿಹಿ ಸುದ್ದಿ ಸಿಕ್ಕಿದೆ.
ದಿನಾಂಕ 1.4.2006 ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆಯಾಗಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರಿ ಸೇವೆಗೆ ಸೇರಿದ ನೌಕರರನ್ನು ಹಳೇಯ ಡಿೆನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಬಹುದು ಎಂದು ಆದೇಶದಲ್ಲಿ ವಿವರಿಸಿದೆ.
ಸರ್ಕಾರಿ ನೌಕರರು ಹಿಂದಿನ ಪಿಂಚಣಿ ಯೋಜನೆಗೊಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾಂಕ: 20.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ, ನೇರವಾಗಿ ಸಲ್ಲಿಸತಕ್ಕದ್ದು, ಇದು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ. ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ ಎಂದು ಷರತ್ತು ವಿಧಿಸಲಾಗಿದೆ.
ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ ಎಂದು ಹೇಳಿದೆ.
ನೌಕರರ ಆಯ್ಕೆಗನುಸಾರ ಅವರು ಹಿಂದಿನ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥ ರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.


5 ಪ್ರತಿಕ್ರಿಯೆಗಳು
Spin the reels of Sweet Bonanza and let the sweets rain down wins! Ante sweet bonanza xmas bet or buy the bonus for instant thrills. Victory is deliciously close.
Feel the primal pulse of pure payout power. buffalo gold slot machine bonus features 1024 lines, retriggers, and buffalo gold jackpots. Conquer!
Deposit once. Keep winning stake bonus buy slots for weeks thanks to rakeback + bonuses.
Your winning run starts at Play DraftKings casino Casino. New offer: $5 play unlocks 500 spins + up to $1K first-day lossback. Slots, roulette, blackjack—go!
Stejna ucinnost, stejna kvalita, cena az o 80 % nizsi!
opravdovalekarna.cz