Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆನಂದ್ ತೇಲ್ತುಂಬ್ಡೆ ಗೆ ಬಸವ ರಾಷ್ಟ್ರೀಯ ಪುರಸ್ಕಾರ | Anand Teltumbde
    Trending

    ಆನಂದ್ ತೇಲ್ತುಂಬ್ಡೆ ಗೆ ಬಸವ ರಾಷ್ಟ್ರೀಯ ಪುರಸ್ಕಾರ | Anand Teltumbde

    vartha chakraBy vartha chakraಜನವರಿ 25, 2024ಯಾವುದೇ ಟಿಪ್ಪಣಿಗಳಿಲ್ಲ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.24: ಖ್ಯಾತ ವಿಚಾರವಾದಿ ಎಡ ಪಂಥೀಯ ನಾಯಕ ಮಹಾರಾಷ್ಟ್ರದ ಆನಂದ್ ತೇಲ್ತುಂಬ್ಡೆ (Anand Teltumbde) ಅವರಿಗೆ ರಾಜ್ಯ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಿ ಗೌರವಿಸಲಾಗಿದೆ.
    ಕಳೆದ ಎರಡು ಸಾಲಿನಿಂದ ನೆನೆಗುದಿಗೆ ಬಿದ್ದಿದ್ದ ಪ್ರಶಸ್ತಿಗಳನ್ನು ಪ್ರಕಟಿಸಲು ನಿರ್ಧರಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದಕ್ಕಾಗಿ ತಜ್ಞರ ಸಮಿತಿ ರಚಿಸಿತ್ತು.
    ಅದರಂತೆ ಖ್ಯಾತ ಸಾಹಿತಿ ಗೋ.ರು.ಚನ್ನಬಸಪ್ಪ ನೇತೃತ್ವದ ಆಯ್ಕೆ ಸಮಿತಿ ಕಳೆದ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ವಿಚಾರವಾದಿ ಆನಂದ್ ತೇಲ್ತುಂಬ್ಡೆ(Anand Teltumbde), ಮತ್ತು ಪ್ರಸಕ್ತ ಸಾಲಿನ ಪ್ರಶಸ್ತಿಗೆ ಧಾರವಾಡದ ಡಾ.ಎನ್.ಜಿ.ಮಹಾದೇವಪ್ಪ ಅವರನ್ನು ಆಯ್ಕೆ ಮಾಡಿದೆ.

    ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಗೆ ಧಾರವಾಡದ ಜಿನದತ್ತ ದೇಸಾಯಿ ಹಾಗೂ ಗುಜರಾತ್‌ನ ಗಾಂಧೀ ಸೇವಾಶ್ರಮ ಆಯ್ಕೆಯಾಗಿದೆ.
    ಟಿ.ಚೌಡಯ್ಯ ಪ್ರಶಸ್ತಿಗೆ ಕೊಳಲು ವಾದಕ ನಿತ್ಯಾನಂದ ಹಳದಿಪುರ ಹಾಗೂ ಕೋಲಾರದ ನಾದಸ್ವರ ಕಲಾವಿದ ಶ್ರೀರಾಮುಲು ಅವರು ಆಯ್ಕೆಯಾಗಿದ್ದಾರೆ.
    ಗಾಯನಯೋಗಿ ಪಂ. ಪಂಚಾಕ್ಷರಿ ಗವಾಯಿ ಪ್ರಶಸ್ತಿಗೆ ಹಿಂದೂಸ್ಥಾನಿ ಗಾಯಕ ಧಾರವಾಡದ ಪಂ. ಸೋಮನಾಥ ಮರಡೂರ ಹಾಗೂ ಕರ್ನಾಟಕಿ ಸಂಗೀತದ ಮೈಸೂರಿನ ಡಾ. ನಾಗಮಣಿ ಶ್ರೀನಾಥ್ ಭಾಜನರಾಗಿದ್ದಾರೆ.
    ಪ್ರಶಸ್ತಿ ಹತ್ತು ಲಕ್ಷ ರೂಪಾಯಿ ನಗದು,ಸ್ಮರಣಿಕೆ ಮತ್ತು ಚಿನ್ನದ ಪದಕವನ್ನೊಳಗೊಂಡಿರಲಿದೆ.

    ಸಾಹಿತ್ಯ ಪ್ರಕಾರದ ವಿವಿಧ ಪ್ರಶಸ್ತಿಗಳ ಆಯ್ಕೆಗೆ ನೇಮಿಸಿದ್ದ ಡಾ. ಬರಗೂರು ರಾಮಚಂದ್ರಪ್ಪ ಅವರು ಆಯ್ಕೆ ಸಮಿತಿಯು ಹಲವು ಪ್ರಶಸ್ತಿಗಳನ್ನು ಪ್ರಕಟಿಸಿದೆ ಮರಾಠಿ ಮತ್ತು ಕನ್ನಡ ಸಾಹಿತ್ಯದ ಕೊಂಡಿಯಂತೆ ಕೆಲಸ‌ ಮಾಡುವ ಮೂಲಕ ಗಡಿ ಜಿಲ್ಲೆಯ ಸೌಹಾರ್ದ ವಾತಾವರಣ ಮೂಡಿಸಲು ಶ್ರಮಿಸಿದ ಹಿರಿಯ ಸಾಹಿತಿ ಚಂದ್ರಕಾಂತ ಪೋಕಳೆ ಅವರಿಗೆ ಪ್ರಸಕ್ತ ಸಾಲಿನ ಕುಂದಣಗಾರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕಳೆದ ಸಾಲಿನ ಕುಂದಣಗಾರ ಪ್ರಶಸ್ತಿಗೆ ಮಹಾರಾಷ್ಟ್ರದ ಡಾ. ಕೆ.ವಿಶ್ವನಾಥ್ ಕಾರ್ನಾಡ್ ಅವರನ್ನು ಆಯ್ಕೆ ಮಾಡಲಾಗಿದೆ.
    ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ: ಹಾಸನದ ಬಾನು ಮುಷ್ತಾಕ್ (2022–23), ರಾಯಚೂರಿನ ಎಚ್‌.ಎಸ್.ಮುಕ್ತಾಯಕ್ಕ (2023–24) ಬಿ.ವಿ.ಕಾರಂತ ಪ್ರಶಸ್ತಿ: ಬೆಂಗಳೂರಿನ ಸಿ.ಬಸವಲಿಂಗಯ್ಯ (2022–23), ಮಂಗಳೂರಿನ ಸದಾನಂದ ಸುವರ್ಣ (2023–24) ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ: ತುಮಕೂರಿನ ಚನ್ನಬಸಯ್ಯ ಗುಬ್ಬಿ (2022–23) , ವಿಜಯಪುರದ ಎಲ್.ಬಿ.ಶೇಖ್ ಮಾಸ್ತರ (2023–24) ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ: ಹಂಪಿ ಡಾ. ಮೊಗಳ್ಳಿ ಗಣೇಶ್ (2021–22), ಉತ್ತಮ ಕಾಂಬ್ಳೆ (2022–23), ದಾವಣಗೆರೆಯ ಬಿ.ಟಿ.ಜಾಹ್ನವಿ (2023–24) ಈ ಪ್ರಶಸ್ತಿಗಳು ತಲಾ ₹5 ಲಕ್ಷ ನಗದು, ಸ್ಮರಣಿಕೆ, ಪ್ರಶಸ್ತಿ ಫಲಕ ಒಳಗೊಂಡಿದೆ.

    ಸಾಮಾಜಿಕ ಮತ್ತು ಸಾಂಸ್ಕೃತಿಕ ವಿಭಾಗದ ಪ್ರಶಸ್ತಿಗಳ ಆಯ್ಕೆಗೆ ನೇಮಿಸಿದ್ದಬಿ.ಟಿ.ಲಲಿತಾ ನಾಯಕ್ ಅವರು ಈ ಪ್ರಶಸ್ತಿಗಳ ಆಯ್ಕೆ ಸಮಿತಿಯು,ಸಂಗೊಳ್ಳಿ ರಾಯಣ್ಣ ಪ್ರಶಸ್ತಿಗೆ ಬೆಂಗಳೂರಿನ ಕೆ. ಮರುಳಸಿದ್ದಪ್ಪ (2020–21), ಬೆಳಗಾವಿಯ ಹಸನ್‌ ನಯೀಂ ಸುರಕೋಡ (2021–22), ಕೋಲಾರದ ಕೆ. ರಾಮಯ್ಯ (2022–23), ಬಳ್ಳಾರಿಯ ವೀರಸಂಗಯ್ಯ (2023–24)
    ಅಕ್ಕಮಹಾದೇವಿ ಪ್ರಶಸ್ತಿ: ಧಾರವಾಡದ ಜಗನ್ಮಾತೆ ಅಕ್ಕಮಹಾದೇವಿ ಆಶ್ರಮ ಟ್ರಸ್ಟ್ (2020–21), ಮಂಡ್ಯದ ಡಾ. ಆರ್.ಸುನಂದಮ್ಮ (2021–22), ಕಲಬುರಗಿಯ ಮೀನಾಕ್ಷಿ ಬಾಳಿ (2022–23), ಬೆಂಗಳೂರಿನ ಡಾ. ವಸುಂಧರಾ ಭೂಪತಿ (2023–24) ಕನಕಶ್ರೀ ಪ್ರಶಸ್ತಿ: ಹಾವೇರಿಯ ಡಾ. ಲಿಂಗದಹಳ್ಳಿ ಹಾಲಪ್ಪ (2021–22), ಮಂಗಳೂರಿನ ಡಾ. ಬಿ.ಶವರಾಮ ಶೆಟ್ಟಿ (2022–23)ಅವರನ್ನು ಆಯ್ಕೆ ಮಾಡಿದೆ.ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

    ಕಲಾ ವಿಭಾಗದ ಪ್ರಶಸ್ತಿಗಳ ಆಯ್ಕೆಗೆ ನೇಮಿಸಿದ್ದ ಡಾ. ವಿ.ಟಿ.ಕಾಳೆ ಅವರ ನೇತೃತ್ವದ ಆಯ್ಕೆ ಸಮಿತಿ,ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ  ಮೈಸೂರಿನ ಜಿ.ಎಲ್.ಎನ್.ಸಿಂಹ (2022–23), ಕಲಬುರಗಿಯ ಬಸವರಾಜ್ ಎಲ್. ಜಾನೆ (2023–24)
    ಜಾನಪದಶ್ರೀ ಪ್ರಶಸ್ತಿ– ವಾದನ: ದಕ್ಷಿಣ ಕನ್ನಡದ ಅರುವ ಕೊರಗಪ್ಪ ಶೆಟ್ಟಿ (2022–23), ಚಿಕ್ಕಮಗಳೂರಿನ ಜಿ.ಪಿ. ಜಗದೀಶ್ (2023–24) ಜಾನದಪಶ್ರೀ ಪ್ರಶಸ್ತಿ– ಗಾಯನ: ಬೀದರ್‌ನ ಕಲ್ಲಪ್ಪ ಮಿರ್ಜಾಪುರ (2022–23), ಚಿತ್ರದುರ್ಗದ ಹಲಗೆ ದುರ್ಗಮ್ಮ (2023–24) ಅವರನ್ನು ಆಯ್ಕೆ ಮಾಡಿದೆ.ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಸಂಗೀತ, ನೃತ್ಯ ಪ್ರಶಸ್ತಿಗಳ ಆಯ್ಕೆಗೆ ನೇಮಿಸಿದ್ದ ಖ್ಯಾತ ಸಂಗೀತಗಾರ ಡಾ. ನರಸಿಂಹಲು ವಡವಾಟಿ ಅಧ್ಯಕ್ಷತೆಯ ಸಮಿತಿ,ನಿಜಗುಣ–ಪುರಂದರ ಪ್ರಶಸ್ತಿಗೆ  ಮೈಸೂರಿನ ಎಂ.ಕೆ.ಸರಸ್ವತಿ (2022–23), ಧಾರವಾಡದ ಅಕ್ಕಮಹಾದೇವಿ ಮಠ (2023–24) ಕುಮಾರವ್ಯಾಸ ಪ್ರಶಸ್ತಿ: ಗದುಗಿನ ಸಿದ್ದೇಶ್ವರ ಶಾಸ್ತ್ರಿ (2022–23), ಮೈಸೂರಿನ ಕೃಷ್ಣಗಿರಿ ರಾಮಚಂದ್ರ (2023–24) ಶಾಂತಲಾ ನಾಟ್ಯ ಪ್ರಶಸ್ತಿ: ಬೆಂಗಳೂರಿನ ಚಿತ್ರಾ ವೇಣುಗೋಪಾಲ್ (2022–23), ಬೆಂಗಳೂರಿನ ರೇವತಿ ನರಸಿಂಹನ್‌ (2023–24) ಸಂತ ಶಿಶುನಾಳ ಷರೀಫ ಪ್ರಶಸ್ತಿ: ಬೆಂಗಳೂರಿನ ಕಸ್ತೂರಿ ರಂಗನ್‌ (2022–23), ಶಿವಮೊಗ್ಗದ ಎನ್.ಬಿ.ಶಿವಲಿಂಗಪ್ಪ (2023–24) ಅವರನ್ನು ಆಯ್ಕೆ ಮಾಡಿದೆ. ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಹಿರಿಯ ಸಾಹಿತಿ, ಶಿವಮೊಗ್ಗದ ನಾ. ಡಿಸೋಜಾ ಅವರಿಗೆ 2023–24ನೇ ಸಾಲಿನ ಪಂಪ ಪ್ರಶಸ್ತಿ ಲಭಿಸಿದೆ.

    Government m News Trending ಕಾನೂನು ಚಿನ್ನ ಧಾರವಾಡ ಸಾಹಿತ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleನಾವು ಗುಲಾಮರಲ್ಲ – ಹೈಕಮಾಂಡ್ ಗೆ ಸಚಿವ ರಾಜಣ್ಣ ಎಚ್ಚರಿಕೆ | KN Rajanna
    Next Article KSRTC ಬಸ್ಸುಗಳಲ್ಲಿ 139 ಕೋಟಿ ಜನರು ಪ್ರಯಾಣ
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025

    ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

    ಮೇ 6, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Geraldnax ರಲ್ಲಿ ಕರೆಂಟ್ ಕಳ್ಳತನ ‌ಮಾಡಿದ ಕುಮಾರಸ್ವಾಮಿ | Kumaraswamy
    • сервисные центры москвы ರಲ್ಲಿ ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • Geraldnax ರಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಸಿಎಂ ಪುಲ್ ಖುಷ್ | Congress Guarantee Schemes
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Pakistan How ಈಸ್ ದ ಜೋಶ್ ! #india #pakistan #facts #war #warzone #news #modi #soldier #worldnews
    Subscribe