Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Plastic ಬಳಕೆ ಬೇಡ ಎಂದ ಈಶ್ವರ ಖಂಡ್ರೆ | Eshwar Khandre
    Viral

    Plastic ಬಳಕೆ ಬೇಡ ಎಂದ ಈಶ್ವರ ಖಂಡ್ರೆ | Eshwar Khandre

    vartha chakraBy vartha chakraಫೆಬ್ರವರಿ 5, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದಕ್ಷಿಣ ಕನ್ನಡ, ಫೆ.5: ನೀರಲ್ಲಿ ಕರಗದ, ಮಣ್ಣಲ್ಲಿ ಮಣ್ಣಾಗದ, ಸುಟ್ಟರೆ ವಿಷಕಾರಿ ಅಂಶವನ್ನು ಗಾಳಿಗೆ ಸೇರಿಸುವ ಪ್ಲಾಸ್ಟಿಕ್ ಪರಿಸರ ಮತ್ತು ಸಮುದಾಯ ಆರೋಗ್ಯಕ್ಕೆ ಮಾರಕ.
    ಇಂತಹ ಪ್ಲಾಸ್ಟಿಕ್ ಬಳಕೆ ತ್ಯಜಿಸುವ ಮೂಲಕ ಜೀವಸಂಕುಲವನ್ನು ಉಳಿಸಬೇಕು ಎಂದು ಅರಣ್ಯ, ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಕರೆನೀಡಿದ್ದಾರೆ.
    ಶ್ರೀಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂದಿರದ ಬಳಿ, ಧರ್ಮಾಧಿಕಾರಿ ಪದ್ಮಶ್ರೀ ಡಾ. ವೀರೇಂದ್ರ ಹೆಗ್ಗಡೆ ಅವರ ಸಾನ್ನಿಧ್ಯದಲ್ಲಿ ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಕ್ಷೇತ್ರ ಫಲಕ ಅನಾವರಣ ಮಾಡಿ ಮಾತನಾಡಿದ ಅವರು,ಅನಿವಾರ್ಯ ಸಂದರ್ಭದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಮಿತವಾಗಿ ಬಳಸುವಂತೆ ಮನವಿ ಮಾಡಿದರು.
    ಮರುಬಳಕೆ ಪ್ರವೃತ್ತಿ ಜನರಲ್ಲಿ ಕಡಿಮೆ ಆಗಿದ್ದು, ತ್ಯಾಜ್ಯ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ತ್ಯಾಜ್ಯ ವಿಲೇವಾರಿ ಸ್ಥಳೀಯ ಸಂಸ್ಥೆಗಳಿಗೆ ಸವಾಲಾಗಿದೆ. ಅದರಲ್ಲೂ ಪ್ಲಾಸ್ಟಿಕ್ ತ್ಯಾಜ್ಯ ದೊಡ್ಡ ಸವಾಲಾಗಿದ್ದು, ಜನರಲ್ಲಿ ಜಾಗೃತಿ ಮೂಡದ ಹೊರತು ಇದಕ್ಕೆ ಪರಿಹಾರ ದೊರಕುವುದು ದುರ್ಲಭ ಎಂದರು.

    ಅರಣ್ಯ ನಾಶ, ಪ್ರಕೃತಿಯ ಮೇಲಿನ ದಬ್ಬಾಳಿಕೆಯಿಂದ ಇಂದು ಜಾಗತಿಕ ತಾಪಮಾನ ಏರಿಕೆ ಆಗುತ್ತಿದೆ, ಹವಾಮಾನ ವೈಪರೀತ್ಯದಿಂದ ಜಾಗತಿಕ ಸಮಸ್ಯೆಗಳು ತಲೆದೋರುತ್ತಿವೆ, ಅಭಿವೃದ್ಧಿಯೂ ಆಗಬೇಕು, ಪ್ರಕೃತಿಯೂ ಉಳಿಯಬೇಕು ಹೀಗಾಗಿ ಸುಸ್ಥಿರ ಅಭಿವೃದ್ಧಿ ಇಂದಿನ ಅತ್ಯಗತ್ಯವಾಗಿದೆ ಎಂದು ಹೇಳಿದರು.
    ಆಹಾರದಲ್ಲಿ ಮಾಲಿನ್ಯ ಇದೆ, ಗಾಳಿಯಲ್ಲಿ ಮಾಲಿನ್ಯ ಇದೆ, ನೀರಿನಲ್ಲಿ ಮಾಲಿನ್ಯ ಇದೆ. ಇದರಿಂದ ಅನೇಕ ರೋಗ ರುಜಿನಗಳು ಜನರನ್ನು ಕಾಡುತ್ತಿದ್ದು, ಸಮುದಾಯ ಆರೋಗ್ಯ ರಕ್ಷಣೆಗೆ ನಾವೆಲ್ಲರೂ ಕಟಿಬದ್ಧರಾಗಬೇಕು ಎಂದರು.
    ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿಯ ಸಂದರ್ಭದಲ್ಲಿ ಸಾವಿರಾರು ಜನರು ಪಾದಯಾತ್ರೆಯ ಮೂಲಕ ಬರುತ್ತಾರೆ. ಅರಣ್ಯ ಮಾರ್ಗದಲ್ಲಿ ಬರುವಾಗ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ತಟ್ಟೆ, ಲೋಟ, ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ಇದನ್ನು ವನ್ಯಜೀವಿಗಳು ತಿಂದು ಸಾವಿಗೀಡಾಗುತ್ತವೆ. ಹೀಗಾಗಿ ಈ ಬಾರಿ ಪಾದಯಾತ್ರೆಯಲ್ಲಿ ಬರುವ ಭಕ್ತರು ಅರಣ್ಯ ಪ್ರವೇಶಿಸುವ ಮುನ್ನ ತಪಾಸಣೆ ಮಾಡಿ ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಲಾಗುವುದು ಎಂದು ತಿಳಿಸಿದರು.

    ಯಂತ್ರಗಳ ಬಳಕೆ:
    ಸಮಾರಂಭದಲ್ಲಿ ಉಪಸ್ಥಿತರಿದ್ದ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಧರ್ಮಸ್ಥಳ ಸ್ವಚ್ಛ ನಗರಿಯಾಗಿದ್ದು, ಇಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಶ್ರಮಿಸುತ್ತಿದ್ದೇವೆ. ಆದರೆ ಜನರಲ್ಲಿ ಸ್ವಯಂ ಪರಿಸರ ಜಾಗೃತಿ ಮೂಡಿದರೆ ಮಾತ್ರ ಇದನ್ನು ನಿಗ್ರಹಿಸಲು ಸಾಧ್ಯ ಎಂದರು.
    ಆಧುನಿಕ ಯಂತ್ರಗಳ ನೆರವಿನಿಂದ ತ್ಯಾಜ್ಯವನ್ನು ಸಂಸ್ಕರಿಸಿ ಪುನರ್ ಬಳಕೆ ಮಾಡಲು ಆ ಮೂಲಕ ಸುಸ್ಥಿರ ಅಭಿವೃದ್ಧಿಗೆ ಕ್ಷೇತ್ರ ಒತ್ತು ನೀಡಿದೆ ಎಂದು ತಿಳಿಸಿದರು. ಜನರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸುವಂತೆ ಕರೆ ನೀಡಿದರು.

    Verbattle
    Verbattle
    Verbattle
    Eshwar Khandre war ಆರೋಗ್ಯ ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಓಲಾ,ಊಬರ್ ಸೇರಿ ಎಲ್ಲಾ ಟ್ಯಾಕ್ಸಿಗಳಿಗೆ ಏಕರೂಪ ಶುಲ್ಕ | Cab Fares
    Next Article ಪೂನಂಪಾಂಡೆ ವಿರುದ್ಧ ಎಫ್ ಐಆರ್ ದಾಖಲು | Poonam Pandey
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    1 ಟಿಪ್ಪಣಿ

    1. Ejuntz on ಫೆಬ್ರವರಿ 11, 2026 11:19 ಅಪರಾಹ್ನ

      mgm app promo betmgm WV betmgm m

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Nwcpjr ರಲ್ಲಿ ಸಿ.ಟಿ. ರವಿ ಇನ್ನೊಂದು ದೂರು ನೀಡಿದ್ದಾರೆ
    • firsturl.de ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Vzgtzw ರಲ್ಲಿ ಬಜೆಟ್ ನಂತರ ಸಿದ್ದರಾಮಯ್ಯ ರಾಜೀನಾಮೆ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.