Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತ್ಯ ತಪಾಸಣಾ ತಂಡಗಳು ರಚನೆಯಾಗಲಿವೆ | Fact Check Unit
    Trending

    ಸತ್ಯ ತಪಾಸಣಾ ತಂಡಗಳು ರಚನೆಯಾಗಲಿವೆ | Fact Check Unit

    vartha chakraBy vartha chakraಫೆಬ್ರವರಿ 16, 202432 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.16- ಸರ್ವಜನಾಂಗದ ಶಾಂತಿಯ ತೋಟವಾಗಿರುವ ರಾಜ್ಯದಲ್ಲಿ‌ ಜಾತಿ, ಧರ್ಮ, ಭಾಷೆಯ ಹೆಸರಿನಲ್ಲಿ ಗಲಭೆಯನ್ನುಂಟು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
    ವಿಧಾಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಅವರು,ಸಮಾಜದಲ್ಲಿ ಸುಳ್ಳು ಸುದ್ದಿಗಳನ್ನು ಹರಡಿಸಿ ಸಾರ್ವಜನಿಕರಲ್ಲಿ ಅಭದ್ರತೆ ಮತ್ತು ಭಯವನ್ನು ಉಂಟು ಮಾಡುವವರ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳಲು ಐ.ಟಿ.ಬಿ.ಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡಗಳನ್ನು ರಚಿಸಲಾಗುವುದು ಮತ್ತು ಒಳಾಡಳಿತ ಇಲಾಖೆಯಲ್ಲಿ ಒಂದು ವಿಶೇಷ ಕೋಶವನ್ನು ರಚಿಸಿ ಅದಕ್ಕೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಅಧಿಕಾರ ನೀಡಲಾಗುವುದು ಎಂದು ಹೇಳಿದರು.

    ಡೀಪ್ ಫೇಕ್ ಮತ್ತಿತರ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಗ್ಧ ಸಾರ್ವಜನಿಕರನ್ನು ವಂಚಿಸುವ ಕೃತ್ಯ ಎಸಗುವವರ ವಿರುದ್ಧ ತನಿಖೆ ನಡೆಸಿ ಪರಿಣಾಮಕಾರಿ ಕ್ರಮ ತೆಗೆದುಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಸೈಬರ್ ಕ್ರೈಂ ವಿಭಾಗವನ್ನು ಬಲಪಡಿಸಲು ಒಟ್ಟು 43 ಸಿ.ಇ.ಎನ್. ಪೊಲೀಸ್ ಠಾಣೆಗಳನ್ನು ಉನ್ನತೀಕರಿಸಲಾಗುವುದು ಎಂದರು.
    ಪೊಲೀಸ್ ಗೃಹ-2025 ಯೋಜನೆಯಡಿ ಇದುವರೆಗೆ 800 ಕೋಟಿ ರೂ.ಗಳ ವೆಚ್ಚದಲ್ಲಿ 1,128 ವಸತಿಗೃಹಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಲಾಗಿದ್ದು, 2,956 ವಸತಿ ಗೃಹಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆಗೆ 2024-25ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು ಎಂದು ಹೇಳಿದರು. ಕಟ್ಟಡ ರಹಿತ ಠಾಣೆ ಮತ್ತು ಪೊಲೀಸ್ ಕಛೇರಿಗಳಿಗೆ 30 ಕೋಟಿ ರೂ.ಗಳ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು.
    ವಿಧಿ ವಿಜ್ಞಾನ ಪ್ರಯೋಗಾಲಯಗಳ ಮೊಬೈಲ್ ಫೋರೆನ್ಸಿಕ್, ಆಡಿಯೋ ಮತ್ತು ವಿಡಿಯೋ ವಿಭಾಗಗಳನ್ನು ಬಲಪಡಿಸಲು 10 ಕೋಟಿ ರೂ.ಗಳ ವೆಚ್ಚದಲ್ಲಿ ಅಗತ್ಯ ಉಪಕರಣಗಳನ್ನು ಮತ್ತು ತಂತ್ರಾಂಶಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

    ರಾಜ್ಯದ ಎಲ್ಲಾ ಕಾರಾಗೃಹಗಳ ಸುಗಮ ಆಡಳಿತ ಮತ್ತು ಭದ್ರತೆಗಾಗಿ 5 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಾಂಶ, ಬ್ಯಾಗೇಜ್ ಸ್ಕ್ಯಾನರ್ ಮುಂತಾದ ಆಧುನಿಕ ಉಪಕರಣಗಳನ್ನು ಖರೀದಿಸಿ ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹವನ್ನು ನಿರ್ಮಿಸಲಾಗುವುದು.
    ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ.1 ರ ದರದಲ್ಲಿ ಫೈರ್ ಸೆಸ್ ಅನ್ನು ವಿಧಿಸಲಾಗುವುದು ಎಂದರು. ಬೆಂಗಳೂರಿನ ಪೊಲೀಸ್ ಸುಲಿವನ್ ಮೈದಾನದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಆಸ್ಟ್ರೋ ಟರ್ಫ್ ಹಾಕಿ ಪ್ರಾಂಗಣವನ್ನು ನಿರ್ಮಿಸಲಾಗುವುದು ಎಂದರು.

    Karnataka News Politics Trending ಕಾನೂನು ಧರ್ಮ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜಿಲ್ಲೆಗೊಂದು ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ | Critical Care Block
    Next Article ಗ್ರಾಮ ಪಂಚಾಯತಿಗಳೂ ಬಜೆಟ್ ಮಂಡಿಸಬೇಕು | Gram Panchayat
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • double happiness cigarette ರಲ್ಲಿ ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    • psychiatrmskvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • australia cigerettes deliery ರಲ್ಲಿ ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe