ಬೆಂಗಳೂರು – ಕರ್ನಾಟಕ ಕೇರಳ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ಸುರೇಶ್ ಆನೆಯಿಂದ ಪೊಲೀಸರಿಗೆ.
ಕರ್ನಾಟಕದ ಪಶ್ಚಿಮ ಘಟ್ಟ ಅರಣ್ಯ ಪ್ರದೇಶ ಕರಾವಳಿ ಮತ್ತು ಕೇರಳದ ಹಲವೆಡೆಗಳಲ್ಲಿ ಚಟುವಟಿಕೆಗಳ ಮೂಲಕ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದ್ದ ಕರ್ನಾಟಕ ಮೂಲದ ನಕ್ಸಲ್ ಸುರೇಶ್ ಕಳೆದ 20 ವರ್ಷಗಳಿಂದ ಪತ್ತೆಯಾಗಿರಲಿಲ್ಲ.
ಪೊಲೀಸ್ ಠಾಣೆಗಳ ಮೇಲೆ ದಾಳಿ ಭೂಮಾಲೀಕರ ಮೇಲೆ ಹಲ್ಲೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದ ನಕ್ಸಲ್ ಸುರೇಶ್ ಕರ್ನಾಟಕದ ಪಶ್ಚಿಮಘಟ್ಟ ಅರಣ್ಯ ಮತ್ತು ಕೇರಳದ ನೀಲಗಿರಿ ತಪ್ಪಲಿನಲ್ಲಿ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.
ದಕ್ಷಿಣ ಭಾರತದ ನಕ್ಸಲ್ ಚಳುವಳಿಯಲ್ಲಿ ಪ್ರಮುಖ ಪಾತ್ರನಿರ್ವಹಿಸುತ್ತಿದ್ದ ಸುರೇಶ್, ಅತ್ಯುತ್ತಮ ವಾಗ್ಮಿಯಾಗಿದ್ದು ವಿದ್ಯಾವಂತ ಯುವಜನರನ್ನು ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡುವಲ್ಲಿ ಸಾಕಷ್ಟು ಯಶಸ್ಸು ಗಳಿಸಿದ್ದರು ಎನ್ನಲಾಗಿದೆ.
ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದ ಈತನಿಗಾಗಿ ಕರ್ನಾಟಕ ಕೇರಳ ತಮಿಳುನಾಡು ಪೊಲೀಸರು ಕುಡುಕಾಟ ನಡೆಸಿದ್ದರು ಕೂಡ ಸಿಕ್ಕಿ ಬಿದ್ದಿರಲಿಲ್ಲ.
ಈತ ಕಳೆದ ಶುಕ್ರವಾರ ಸುರೇಶ್ ತನ್ನ ನಕ್ಸಲ್ ತಂಡದೊಂದಿಗೆ ಕೇರಳದ ಕಣ್ಣೂರಿನ ಕಂಚಿಕೊಲ್ಲಿ ಅರಣ್ಯ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆಗಳು ನಕ್ಸಲರ ಮೇಲೆ ದಾಳಿ ಮಾಡಿವೆ. ಆನೆ ದಾಳಿಯಿಂದ ಸುರೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಡೆಯಲಾಗದ ಸ್ಥಿತಿಯಲ್ಲಿದ್ದ ಆತನನ್ನು ಉಳಿದ ನಕ್ಸಲರು ಅಲ್ಲೇ ಬಿಟ್ಟು ಪರಾರಿಯಾಗಿದ್ದರು. ಗಾಯಗೊಂಡ ಸುರೇಶ್ ನಡೆಯಲಾಗದೇ ಕಾಡಿನಲ್ಲೇ ನರಳುತ್ತಿದ್ದರು. ಇದನ್ನು ಕಂಡ ಕೆಲವು ಆದಿವಾಸಿಗಳು ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಕಣ್ಣೂರಿನ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಈ ಬೆಳೆ ಆನೆ ದಾಳಿಯ ಕುರಿತಂತೆ ಮಾಹಿತಿ ಸಂಗ್ರಹಿಸಲು ಬಂದ ಪೊಲೀಸರು ಸುರೇಶ್ ನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ನಾಪತ್ತೆಯಾಗಿದ್ದ ನಕ್ಸಲ್ ಸುರೇಶ್ ಎಂದು ಬೆಳಕಿಗೆ ಬಂದಿದೆ ಇದೀಗ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ
ನಕ್ಸಲ್ ಸುರೇಶ್‌ನ ಮೂಲ ಹೆಸರು ಪ್ರದೀಪ್. ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡ ಬಳಿಕ ಸುರೇಶ್ ಎಂದು ಬದಲಿಸಿಕೊಂಡಿದ್ದರು. ಸುರೇಶ್ ಅಲಿಯಾಸ್ ಪ್ರದೀಪ್ ಕರ್ನಾಟಕ ಕೇಡರ್ ನಕ್ಸಲ್ ಆಗಿ ಗುರುತಿಸಿಕೊಂಡಿದ್ದರು. ಇವರೆಗೂ ಕರ್ನಾಟಕದಲ್ಲಿ ಒಟ್ಟು 26ಕ್ಕೂ ಹೆಚ್ಚು ಪ್ರಕರಣಗಳು ಸುರೇಶ್ ಮೇಲೆ ದಾಖಲಾಗಿವೆ.