Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ರಾಮ ಪಂಚಾಯತಿ ಗ್ರಂಥಾಲಯ ನೌಕರರಿಗೆ ವೇತನ ಭದ್ರತೆ | Gram Panchayat
    Viral

    ಗ್ರಾಮ ಪಂಚಾಯತಿ ಗ್ರಂಥಾಲಯ ನೌಕರರಿಗೆ ವೇತನ ಭದ್ರತೆ | Gram Panchayat

    vartha chakraBy vartha chakraಫೆಬ್ರವರಿ 18, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕನಿಷ್ಠ ವೇತನಕ್ಕಾಗಿ ಕಳೆದ ಹಲವಾರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದನಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.
    2024ರ ಸೆಪ್ಟೆಂಬರ್ 04ರಿಂದ ಅನ್ವಯಿಸುವಂತೆ ಮಾಸಿಕ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ.

    ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರಿಗೆ 15,196.72 ರೂ. ಮಾಸಿಕ ಕನಿಷ್ಠ ವೇತನದ ಜೊತೆಗೆ ಕಾರ್ಮಿಕ ಇಲಾಖೆಯು ಕಾಲಕಾಲಕ್ಕೆ ನಿಗದಿ ಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲು ಆದೇಶದಲ್ಲಿ ತಿಳಿಸಲಾಗಿದೆ.
    14ನೇ ಮತ್ತು 15ನೇ ಹಣಕಾಸು ಆಯೋಗದ ಅನುದಾನ ಅಥವಾ ಗ್ರಾಮ ಪಂಚಾಯತಿಯ ಸಂಪನ್ಮೂಲ ಬಳಸಿಕೊಂಡು ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ಡಿಜಿಟಲೀಕರಿಸಲು ಕ್ರಮ ವಹಿಸಿದ್ದು, ಇಲ್ಲಿಯವರೆಗೆ 5,494 ಡಿಜಿಟಲ್ ಗ್ರಂಥಾಲಯಗಳನ್ನು ಸ್ಥಾಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
    ಗ್ರಾಮ ಪಂಚಾಯತಿಯ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ, ಸಂವಿಧಾನದ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನರ್ಜನೆ ಮುಂತಾದ ಸೌಲಭ್ಯಗಳನ್ನು ನೀಡಲಾಗುವುದು ಎಂದು ಆಯವ್ಯಯದಲ್ಲಿ ಘೋಷಿಸಲಾಗಿತ್ತು. ಘೋಷಣೆಯನ್ನು ಸಾಕಾರಗೊಳಿಸುವಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಪಾತ್ರ ಅತ್ಯಂತ ಮಹತ್ವ ಎಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.

    ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಾದ ಅರಿವು ಕೇಂದ್ರಗಳ ಕೆಲಸದ ಸಮಯವನ್ನು 6 ರಿಂದ 8 ಗಂಟೆಗಳಿಗೆ ಏರಿಸಿ ಮಾಸಿಕ 16,382.52 ರೂ. ಮಾಸಿಕ ಕನಿಷ್ಠ ವೇತನ ಮತ್ತು 1542 ರೂ. ವ್ಯತ್ಯಯವಾಗುವ ತುಟ್ಟಿ ಭತ್ಯೆ ಸೇರಿಸಿ ಮಾಸಿಕ 17,924.52 ರೂ, ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ.
    ಗ್ರಾಮ ಪಂಚಾಯತಿ ಗ್ರಂಥಾಲಯಗಳ ಸಂಪೂರ್ಣ ನಿರ್ವಹಣೆಯನ್ನು ಸಾರ್ವಜನಿಕ ಗ್ರಂಥಾಲಯಗಳ ಇಲಾಖೆಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತಿಗಳಿಗೆ ವರ್ಗಾವಣೆಗೊಂಡ ನಂತರ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಅಭಿವೃದ್ಧಿಯಲ್ಲಿ ಅಗಾಧವಾದ ಸಾಧನೆಯಾಗಿದೆ, 5,895 ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ, 4895 ಗ್ರಂಥಾಲಯ ಕಟ್ಟಡಗಳ ನವೀಕರಣ, ಪುಸ್ತಕ, ನಿಯತಕಾಲಿಕಗಳ ಸಂಗ್ರಹಣೆ ಇನ್ನಿತರ ಪರಿಕರಗಳನ್ನು ಒದಗಿಸಿ ಅಭಿವೃದ್ಧಿಪಡಿಸಲಾಗಿದೆ ಎಂದು ವಿವರಿಸಿದ್ದಾರೆ.

    ಶಾಲೆಗಳು ಮುಚ್ಚಿದ್ದರೂ ಮಕ್ಕಳು ಓದುವ ಅಭ್ಯಾಸದಿಂದ ದೂರ ಉಳಿಯಬಾರದು ಎಂಬ ಉದ್ದೇಶದೊಂದಿಗೆ ʼಓದುವ ಬೆಳಕುʼ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಅಜೀಂ ಪ್ರೇಮ್ ಜೀ ಫೌಂಡೇಶನ್, ಭಾರತೀಯ ಜ್ಞಾನ ವಿಜ್ಞಾನ ಸಮಿತಿ ಮತ್ತು ಶಿಕ್ಷಣ ಫೌಂಡೇಶನ್ ಸಂಸ್ಥೆಗಳು ನೆರವು ನೀಡಿವೆ, 6ರಿಂದ 18 ವರ್ಷದ ಮಕ್ಕಳಿಗೆ ಗ್ರಂಥಾಲಯದ ಸದಸ್ಯತ್ವವನ್ನು ನೀಡಿ ಅವರು ಮನೆಗೆ ಪುಸ್ತಕ ತೆಗೆದುಕೊಂಡು ಹೋಗಿ ಓದಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ, ಇದರ ಪರಿಣಾಮವಾಗಿ ಇಂದು ಗ್ರಂಥಾಲಯಗಳಲ್ಲಿ ಒಟ್ಟು 46,89,220 ಮಕ್ಕಳು ನೋಂದಣಿಯಾಗಿದ್ದಾರೆ ಎಂದು ಹೇಳಿದ್ದಾರೆ.
    ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ಮಕ್ಕಳ ಸ್ನೇಹಿಯಾಗಿಸಲು ಓದಿನ ಮನೆಗೆ ಹೋಗೋಣ, ಚದುರಂಗ ಆಟ ಆಡೋಣ ಅಭಿಯಾನ, ಗಟ್ಟಿ ಓದು ಅಭಿಯಾನ, ಅಮ್ಮನಿಗಾಗಿ ಒಂದು ಪುಸ್ತಕ, ಪತ್ರ ಬರೆಯುವ ಅಭಿಯಾನ, ಚಿಣ್ಣರ ಚಿತ್ತಾರ, ನಿಮ್ಮ ಗೆಳೆಯರನ್ನು ಗ್ರಂಥಾಲಯಕ್ಕೆ ಕರೆತನ್ನಿ, ಮಕ್ಕಳಿಗೆ ಬೇಸಿಗೆ ಶಿಬಿರ, ಸಣ್ಣ ಕಥೆ ಬರೆಯುವುದು, ನಾನು ಓದುವ ಪುಸ್ತಕಗಳು, ನನ್ನ ಪ್ರೀತಿಯ ಗ್ರಂಥಾಲಯ, ವಾರ್ತಾ ಪತ್ರಿಕೆ ಓದೋಣ ಅಭಿಯಾನಗಳನ್ನು ಕೈಗೊಳ್ಳಲಾಗಿದ್ದು ಗ್ರಾಮ ಪಂಚಾಯತಿಗಳ ಅರಿವು ಕೇಂದ್ರಗಳು ಗ್ರಾಮೀಣ ಮಕ್ಕಳಲ್ಲಿ ಹೊಸ ಉತ್ಸಾಹ ಹಾಗೂ ಭರವಸೆಯನ್ನು ತಂದುಕೊಟ್ಟಿದೆ ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    m Panchayat ತಂತ್ರಜ್ಞಾನ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಸೀತಾ ಮತ್ತು ಅಕ್ಬರ್ ಜೊತೆಯಲ್ಲಿ ಇರಬಾರದಂತೆ | VHP
    Next Article ಕೂದಳೆಲೆ ಅಂತರದಲ್ಲಿ ಬಚಾವಾದ ರಶ್ಮಿಕಾ ಮಂದಣ್ಣ | Rashmika Mandanna
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    ಡಿ.ಕೆ.ಶಿವಕುಮಾರ್ ಭಾಷಣದಲ್ಲಿ ಏನು ಹೇಳಿದ್ದಾರೆ ನೋಡಿ

    ಜನವರಿ 30, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StevenCaf ರಲ್ಲಿ ಅಗಲಿದ “ಕಲಾ ತಪಸ್ವಿ”
    • MichaelAffew ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • jqk_cbMt ರಲ್ಲಿ ತೇಜಸ್ವಿನಿ ಅನಂತಕುಮಾರ್, ಮಾಳವಿಕ ಅವಿನಾಶ್ ಗೆ BJP ಟಿಕೆಟ್ | Malavika Avinash | Tejaswini Ananth Kumar | BJP
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.