Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾಕಿಸ್ತಾನ್ ಜಿಂದಾಬಾದ್ ಎಂದವರ ಬಂಧನ | Pakistan Zindabad
    ಪ್ರಚಲಿತ

    ಪಾಕಿಸ್ತಾನ್ ಜಿಂದಾಬಾದ್ ಎಂದವರ ಬಂಧನ | Pakistan Zindabad

    vartha chakraBy vartha chakraಮಾರ್ಚ್ 4, 2024Updated:ಮಾರ್ಚ್ 4, 202432 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ. 4-ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಪರ ಘೋಷಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಸಂಬಂಧ ಕೊನೆಗೂ ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
    ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಗ್ಗೆ ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು,ನವದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿಯನ್ನು ಬಂಧಿಸಿದ್ದಾರೆ.

    ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಬಳಿಕ ನ್ಯಾಯಾಲಕ್ಕೆ ಹಾಜರುಪಡಿಸಿದ್ದು ಮತ್ತೆ ಕಸ್ಟಡಿಗೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಲಾಗಿದೆ.
    ಬಂಧಿತ ಆರೋಪಿಗಳ ಪೈಕಿ ಓರ್ವ ಪಾಕಿಸ್ತಾನ ಎಂದು ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್‌, ಜಿಂದಾಬಾದ್‌ ಎಂದು ಕೂಗುವುದು ಎಫ್ ಎಸ್ ಎಲ್ ವರದಿ ಹಾಗೂ ತನಿಖೆಯಲ್ಲಿ ಧೃಡಪಟ್ಟ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ.
    ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಖುಷಿಯಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

    ಪಾಕಿಸ್ತಾನ ಪರ ಘೋಷಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ, 26 ಮಂದಿಯ ಪಟ್ಟಿಯನ್ನು ಸಿದ್ದಪಡಿಸಲಾಗಿತ್ತು. ಇದರಲ್ಲಿ 7 ಮಂದಿ ವಿಚಾರಣೆ ಮಾಡಲಾಗಿತ್ತು, ಮೂವರ ವಾಯ್ಸ್​ ಸ್ಯಾಂಪಲ್ಸ್​ಗಳನ್ನ ಎಫ್​​ಎಸ್​ಎಲ್​ಗೆ ರವಾನೆ ಮಾಡಲಾಗಿತ್ತು. ಮೆಲುಧ್ವನಿ, ಏರುಧ್ವನಿ ಮಾದರಿಯಲ್ಲಿ ಸ್ಯಾಂಪಲ್ಸ್​ಗಳನ್ನ ಸಂಗ್ರಹಿಸಲಾಗಿದ್ದು, ಎಫ್​ಎಸ್​ಎಲ್ ತಂಡ​ ಪರಿಶೀಲನೆ ಮಾಡಿದೆ. ಘಟನೆ ನಡೆದ ದೃಶ್ಯಗಳನ್ನು ಸಹ ರವಾನಿಸಲಾಗಿತ್ತು.
    ಸರ್ಕಾರ ಕೂಡ ಕಟ್ಟುನಿಟ್ಟಿನ ತನಿಖೆಗೆ ಮುಂದಾಗಿದ್ದು, ಎಫ್ಎಸ್​ಎಲ್​ ಮೇಲೆ ಇಡೀ ಪ್ರಕರಣವೇ ನಿಂತಿದೆ. ಸರ್ಕಾರ ಇನ್ನು ಎಫ್​​ಎಸ್ಎಲ್ ವರದಿ ಬಂದಿಲ್ಲ ಎಂದಿದ್ದರೆ, ಇತ್ತ ಬಿಜೆಪಿ ನಾಯಕರು ಮಾತ್ರ ನಿನ್ನೆಯೇ ವರದಿ ಬಂದಿದೆ ಎಂದು ಗಂಭೀರ ಆರೋಪ ಮಾಡಿದ್ದರು.

    ಕೇಸ್​ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಈಗಾಗಲೇ ಎಫ್​ಎಸ್​ಎಲ್ ವರದಿ ಕಾಂಗ್ರೆಸ್​ ಕೈ ಸೇರಿದೆ. ಆದರೆ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
    ಈ ನಡುವೆ
    ಎಫ್​ಎಸ್​ಎಲ್ ವರದಿ ಬಿಡುಗಡೆ ಬಿಜೆಪಿಯವರು ಒತ್ತಾಯಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ವರದಿ ಬಂದ ತಕ್ಷಣವೇ ಬಿಡುಗಡೆ ಮಾಡುತ್ತೇವೆ. ದೇಶಭಕ್ತಿಯನ್ನ ಬಿಜೆಪಿಯವರು ಹೇಳಿಕೊಡುವ ಅಗತ್ಯವಿಲ್ಲ ಅಂತ ಹೇಳಿದ್ದಾರೆ.

    Verbattle
    Verbattle
    Verbattle
    NDA Pakistan Zindabad ಕಾಂಗ್ರೆಸ್ ಚುನಾವಣೆ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇವಳೆಂಥ ತಾಯಿ ನೋಡಿ
    Next Article ಯತೀಂದ್ರ ಸಿದ್ದರಾಮಯ್ಯ ಯಾಕೆ ಹೀಗೆ ಹೇಳಿದರು | Yathindra Siddaramaiah
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • LarryCax ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Tracymix ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.