Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈತ ಸೌರ ಶಕ್ತಿ ಮೇಳ ದ ಮೂಲಕ ಇಂಧನ ಇಲಾಖೆಯ ಧೀಶಕ್ತಿಯ ಅನಾವರಣ
    Trending

    ರೈತ ಸೌರ ಶಕ್ತಿ ಮೇಳ ದ ಮೂಲಕ ಇಂಧನ ಇಲಾಖೆಯ ಧೀಶಕ್ತಿಯ ಅನಾವರಣ

    vartha chakraBy vartha chakraಮಾರ್ಚ್ 6, 2024Updated:ಮಾರ್ಚ್ 6, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ. 6: ಅಸಾಂಪ್ರದಾಯಿಕ ಮೂಲಗಳಿಂದ ವಿದ್ಯುತ್ ಪಡೆಯುವ ಮೂಲಕ ಕೃಷಿ ಕ್ಷೇತ್ರವನ್ನು ಮತ್ತಷ್ಟು ಸಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯ ಇಂಧನ ಇಲಾಖೆ ಹೊಸ ಆವಿಷ್ಕಾರಗಳಿಗೆ ಮುಂದಾಗಿದೆ.
    ಇದನ್ನು ರೈತರಿಗೆ ಪರಿಚಯಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ರೈತ ಸೌರಶಕ್ತಿ ಮೇಳ ಆಯೋಜಿಸಿದೆ.ಈ ಮೂಲಕ ಕೃಷಿ ಬಳಕೆ ಪಂಪ್ ಸೆಟ್ ಗಳಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು ಎಂಬ ನಿಟ್ಟಿನಲ್ಲಿ ಈ‌ ಮೇಳ ಆಯೋಜಿಸಲಾಗಿದೆ.

    ಮಾರ್ಚ್‌ 9 ರಂದು ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಆಯೋಜಿಸಿರುವ ಈ ಮೇಳದ ಕುರಿತು ಮಾಹಿತಿ ನೀಡಿದ ಇಂಧನ ಸಚಿವ ಕೆ.ಜೆ ಜಾರ್ಜ್‌, “ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್‌ಸೆಟ್‌ ಬಳಕೆಯೇ ಪರಿಹಾರ. ಹಾಗಾಗಿ, ಈ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿ ಒದಗಿಸಲು ಜಿಕೆವಿಕೆ ಆವರಣದಲ್ಲಿ ಇದೇ ಮಾರ್ಚ್‌ 9 ರಂದು “ರೈತ ಸೌರ ಶಕ್ತಿ ಮೇಳ” ಆಯೋಜಿಸಲಾಗಿದೆ,”ಎಂದರು.
    ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು. ಅದಕ್ಕಾಗಿ ನಮ್ಮ ಸರ್ಕಾರ ‘ಕುಸುಮ್‌ ಬಿ’ ಯೋಜನೆಯ ಅನುಷ್ಠಾನಕ್ಕೆ ಒತ್ತು ನೀಡುತ್ತಿದೆ. ನವೀನ ಮಾದರಿಯ ಸೌರ ಪಂಪ್‌ಸೆಟ್‌ಗಳ ಪ್ರಾತ್ಯಕ್ಷಿಕೆಯನ್ನು ನೋಡಿ, ಈ ವಿಚಾರವಾಗಿ ಇರುವ ಗೊಂದಲಗಳನ್ನು ಪರಿಹರಿಸಿಕೊಳ್ಳಲು ಮೇಳ ಅತ್ಯುತ್ತಮ ವೇದಿಕೆಯಾಗಲಿದೆ. ಸೌರ ಪಂಪ್‌ಸೆಟ್‌ಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ರೈತರು ತಮ್ಮ ಜಮೀನುಗಳಲ್ಲಿ ಇದನ್ನು ಅಳವಡಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು ಮಾರ್ಚ್‌ 9ರಂದು 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

    ಮೇಳದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಸೇರಿದಂತೆ ಹಲವು ಸಚಿವರು ಮೇಳದಲ್ಲಿ ಭಾಗಿಯಾಗಲಿದ್ದಾರೆ.ರಾಜ್ಯದ ಮೂಲೆ ಮೂಲೆಗಳಿಂದ ‌ಆಗಮಿಸುವ ರೈತರು‌ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರ ಕೃಷಿಕರು ನೀರಾವರಿಗೆ ಸಾಂಪ್ರದಾಯಿಕ ಇಂಧನ ಮೂಲದ ಬದಲಾಗಿ ಹೆಚ್ಚಿನ ಪ್ರಮಾಣದಲ್ಲಿ ಸೌರ ಪಂಪ್‌ ಸೆಟ್‌ ಅಳವಡಿಕೆಯನ್ನು ರೈತರ ಸಮೂಹಗಳಲ್ಲಿ ಉತ್ತೇಜಿಸಲು ರಾಜ್ಯ ಸರ್ಕಾರದಿಂದ ಈವರೆಗೆ ನೀಡಲಾಗುತ್ತಿದ್ದ ಶೇ 30 ರಷ್ಟು ಸಹಾಯಧನವನ್ನು ಶೇ 50 ಕ್ಕೆ ಹೆಚ್ಚಿಸಿದೆ. ಒಟ್ಟಾರೆ ಮೊತ್ತದಲ್ಲಿ ಶೇ 20 ರಷ್ಟನ್ನು ಮಾತ್ರ ರೈತರು ಭರಿಸಬೇಕಾಗಿರುತ್ತದೆ. ಇದಲ್ಲದೇ, ಯೋಜನೆಯಡಿ ರೈತರಿಗೆ ಪಂಪ್, ಮೀಟರ್, ಪೈಪ್‌ಗಳನ್ನು ಒದಗಿಸಲಿದೆ,”ಎಂದರು ರಾಜ್ಯದ ನಾನಾ ಭಾಗಗಳಿಂದ ಬರುವ ರೈತರಿಗೆ ಸೌರ ಪಂಪ್‌ಸೆಟ್‌ಗಳ ಬಗ್ಗೆ ಮಾಹಿತಿ ನೀಡಲು ಮೇಳದಲ್ಲಿ ವ್ಯವಸ್ಥೆ ಮಾಡಲಾಗಿರುತ್ತದೆ. ವಿವಿಧ ಸೌರ ವಿದ್ಯುತ್‌ ಉತ್ಪನ್ನಗಳ ಮಳಿಗೆಗಳರಲಿವೆ.

    ಸೌರ ಪಂಪ್‌ಸೆಟ್‌ಗಳು ಹೇಗೆ ಕೆಲಸ ಮಾಡುತ್ತವೆ ಎಂಬುದನ್ನು ನೇರವಾಗಿ ನೋಡುವ ಅವಕಾಶ ಇರುತ್ತದೆ. ಸೋಲಾರ್‌ ಪಂಪ್‌ಸೆಟ್‌ ಅಳವಡಿಕೊಳ್ಳುವ ರೈತರಿಗಾಗಿಯೇ ಆನ್‌ಲೈನ್‌ ಪೋರ್ಟಲ್‌ ವಿನ್ಯಾಸಗೊಳಿಸಲಾಗಿದೆ. ಅಲ್ಲದೇ, ಮೇಳದಲ್ಲಿ ‘ಸೌರ ಮಿತ್ರ’ ಆ್ಯಪ್ ಬಿಡುಗಡೆ ಮಾಡಲಾಗಿತ್ತದೆ. ಆ್ಯಪ್ ಮೂಲಕವೂ ರೈತರು ಅರ್ಜಿ ಸಲ್ಲಿಸಬಹುದಾಗಿದೆ.ಎಂದು ಹೇಳಿದರು
    ರೈತರಿಗಾಗಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸೌರ ಪಂಪ್‌ ಸೆಟ್‌ಗಳ ಉತ್ಪಾದಕರು, ಮಾರಾಟಗಾರರು, ಬ್ಯಾಂಕ್‌ ಅಧಿಕಾರಿಗಳು, ಕೃಷಿ ಹಾಗೂ ಇಂಧನ ಇಲಾಖೆಯ ಅಧಿಕಾರಿಗಳು ಸಂವಾದದಲ್ಲಿ ಪಾಲ್ಗೊಂಡು ರೈತರಿಗೆ ಮಾಹಿತಿ ಒದಗಿಸಲಿದ್ದಾರೆ.
    ಜತೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ‘ಕುಸುಮ್ ಸಿ’ ಯೋಜನೆ ಹಾಗೂ ರಾಜ್ಯದ 13 ಜಿಲ್ಲೆಗಳಲ್ಲಿರುವ ವಿವಿಧ ವೋಲ್ಟೇಜ್ ವರ್ಗಗಳ ಹೊಸ ಸಬ್‌ಸ್ಟೇಷನ್‌ಗಳಿಗೂ ಮುಖ್ಯಮಂತ್ರಿಯವರು ಚಾಲನೆ ನೀಡಲಿದ್ದಾರೆ. ,”ಎಂದು ಸಚಿವ ಜಾರ್ಜ್‌ ಮಾಹಿತಿ ನೀಡಿದರು.
    ಈ ವೇಳೆ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ, ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬಿಳಗಿ, ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪ್ಪಯ್ಯ ಉಪಸ್ಥಿತರಿದ್ದರು.

    Verbattle
    Verbattle
    Verbattle
    ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದೇವಾಲಯಗಳಿಗೆ ರಾಮಲಿಂಗಾರೆಡ್ಡಿ ಕೊಡುಗೆ | Ramalinga Reddy
    Next Article ಹುಡುಕಿಕೊಟ್ಟರೆ 10 ಲಕ್ಷ ರೂಪಾಯಿ ಬಹುಮಾನ | Rameshwaram Cafe Blast
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    1 ಟಿಪ್ಪಣಿ

    1. Qhphqa on ಫೆಬ್ರವರಿ 11, 2026 3:57 ಅಪರಾಹ್ನ

      betmgm llc betmgm-play betmgm NJ

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Мигрень у женщин лечение ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • LinwoodGah ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.