Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತ್ಯಾಜ್ಯ ನೀರು ಸಂಸ್ಕರಿಸಿ ಮಾರಾಟ : ಈಶ್ವರ ಖಂಡ್ರೆ | Eshwar Khandre
    ಸುದ್ದಿ

    ತ್ಯಾಜ್ಯ ನೀರು ಸಂಸ್ಕರಿಸಿ ಮಾರಾಟ : ಈಶ್ವರ ಖಂಡ್ರೆ | Eshwar Khandre

    vartha chakraBy vartha chakraಮಾರ್ಚ್ 6, 2024Updated:ಮಾರ್ಚ್ 6, 202424 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ 6: ಬೆಂಗಳೂರು ನಗರದ ಬೃಹತ್ ಕಟ್ಟಡ ಸಮುಚ್ಚಯಗಳ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಶುದ್ಧೀಕರಿಸಿ ಅದನ್ನು ಪುನರ್ಬಳಕೆಗಾಗಿ ಮಾರಾಟ ಮಾಡಲು ಹೊಸ ಮಾನದಂಡ ಬಿಡುಗಡೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಮಾರಾಟದ ಮಾರ್ಗಸೂಚಿಗಳನ್ನು ರೂಪಿಸಿ 1 ವಾರದೊಳಗೆ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

    ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿದ್ದು, ಅದಕ್ಕೆ ಅನುಗುಣವಾಗಿ ನೀರು ಪೂರೈಕೆ ಕಷ್ಟಸಾಧ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಮೂಲಗಳ ರಕ್ಷಣೆ ಮತ್ತು ನೀರಿನ ಮರುಬಳಕೆಗೆ ಆದ್ಯತೆ ನೀಡುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
    ಸೂಕ್ತ ರೀತಿಯಲ್ಲಿ ನೀರು ಸಂಸ್ಕರಿಸಿದರೆ ಬೆಂಗಳೂರು ನಗರದಲ್ಲಿ ನಿತ್ಯ 250ರಿಂದ 300 ಎಂ.ಎಲ್.ಡಿ.ಯಷ್ಟು ನೀರು ಮರು ಬಳಕೆಗೆ ಲಭಿಸಲಿದೆ. ಆದರೆ ಈ ನೀರನ್ನು ಯಾವುದೇ ಕಾರಣಕ್ಕೂ ಕುಡಿಯಲು, ಔಷಧ ಮತ್ತು ಆಹಾರ ತಯಾರಿಕೆಗೆ ಬಳಸದಂತೆ ನಿರ್ಬಂಧಿಸಲಾಗುವುದು ಎಂದು ತಿಳಿಸಿದರು.
    ಮಾರಾಟ ಮಾಡಲಾಗುವ ಮರುಬಳಕೆ ನೀರಿನ ಶುದ್ಧತೆಯ ಜವಾಬ್ದಾರಿ ಕಟ್ಟಡ ಸಮುಚ್ಚಯಗಳ ಸಂಘಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಬಿಡಬ್ಲ್ಯುಎಸ್.ಎಸ್.ಬಿ ಮತ್ತಿತತರೆ ಪೂರಕ ಸಂಸ್ಥೆಗಳ ಮೇಲೂ ಇರುತ್ತದೆ ಎಂದರು.
    ಬಹುಮಹಡಿ ಕಟ್ಟಡಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ಜಲವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಆ ನೀರನ್ನು ಹತ್ತಿರದ ಕೆರೆಗಳಿಗೆ ಕೊಳವೆಯ ಮೂಲಕ ಹರಿಸಿದರೆ ಕೆರೆಗಳಲ್ಲಿ ನೀರೂ ಇರುತ್ತದೆ ಜೊತೆಗೆ ಅಂತರ್ಜಲ ಮಟ್ಟವೂ ಹೆಚ್ಚುತ್ತದೆ. ಈ ಕುರಿತಂತೆ ಇಂದು ತಮ್ಮ ಕಚೇರಿಯಲ್ಲಿ ಬಿಬಿಎಂಪಿ, ಬಿಡಿಎ, ನಗರಾಭಿವೃದ್ಧಿ ಇಲಾಖೆ, ಪರಿಸರ ಇಲಾಖೆಯ ಅಧಿಕಾರಿಗಳು ಮತ್ತು ಕಟ್ಟಡ ಸಮುಚ್ಛಯಗಳ ನಿವಾಸಿಗಳ ಸಂಘದ ಪ್ರತಿನಿಧಿಗಳು ಹಾಗೂ ಬಾಧ್ಯಸ್ಥರೊಂದಿಗೆ ನಡೆದ ಸಭೆಯಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದರು.

    ರಾಜ್ಯದಲ್ಲಿ ಹಕ್ಕಿಪಕ್ಷಿಗಳು ಹೆಚ್ಚಾಗಿ ಇರುವ ಮತ್ತು 2.25 ಹೆಕ್ಟೇರ್ ಗಿಂತ ಹೆಚ್ಚು ವ್ಯಾಪ್ತಿಯ ಕೆರೆ, ಕುಂಟೆಗಳನ್ನು ಜೌಗು ಭೂಮಿಯೆಂದು ಗುರುತಿಸಲು ತೀರ್ಮಾನಿಸಲಾಗಿದೆ. ಇಂತಹ 16,700ಕ್ಕೂ ಅಧಿಕ ಜೌಗು ಭೂಮಿ ತಾಣಗಳನ್ನು ಈಗಾಗಲೇ ಗುರುತಿಸಲಾಗಿದ್ದು,ಸಂಬಂಧಿತ ಪಂಚಾಯ್ತಿ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಅನುಮತಿ ಪಡೆದು ಅದನ್ನು ಅಧಿಕೃತವಾಗಿ ಜೌಗು ಭೂಮಿ ಪ್ರದೇಶ ಎಂದು ಘೋಷಿಸಲಾಗುವುದು ಎಂದರು.
    2017ರಲ್ಲಿ ಕೇಂದ್ರ ಸರ್ಕಾರ ಜೌಗು ಪ್ರದೇಶ ಘೋಷಣೆ ಮತ್ತು ಅಭಿವೃದ್ದಿಗೆ ಮಾನದಂಡಗಳನ್ನು ಪ್ರಕಟಿಸಿ ಅಧಿಸೂಚನೆ ಹೊರಡಿಸಿದ್ದು, ಈವರೆಗೆ ರಾಜ್ಯದಲ್ಲಿ ಜೌಗು ಭೂಮಿಯ ಅಧಿಕೃತ ಪ್ರಕಟಣೆ ಆಗಿರಲಿಲ್ಲ. ಹೀಗಾಗಿ ತಾವು ಈ ಬಗ್ಗೆ ಆಸಕ್ತಿ ತೋರಿದ್ದು, ಕೂಡಲೇ ತಜ್ಞರ ತಂಡ ರೂಪಿಸಿ ಜೌಗು ಭೂಮಿ ಪ್ರಾಧಿಕಾರವನ್ನು ಸಕ್ರಿಯಗೊಳಿಸಲು ಸೂಚಿಸಲಾಗಿದೆ ಎಂದರು.

    ಇಂದು ಬಿಡುಗಡೆ ಮಾಡಲಾದ ಅಂತರ್ಜಾಲ ತಾಣದಲ್ಲಿ ಸಾರ್ವಜನಿಕರಿಗೆ ಜೌಗು ಪ್ರದೇಶ ಘೋಷಣೆಯಿಂದ ಆಗುವ ಪ್ರಯೋಜನಗಳ ಬಗ್ಗೆ, ಕಾಯಿದೆ, ನಿಯಮ ನಿಬಂಧನೆಗಳ ಕುರಿತಂತೆ ಮಾಹಿತಿ ನೀಡುವುದರ ಜೊತೆಗೆ ಜೌಗು ಭೂಮಿಯಲ್ಲಿ ತ್ಯಾಜ್ಯ ಸುರಿಯದಂತೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುವುದು ಎಂದರು.
    ರಾಜ್ಯದಲ್ಲಿ 4 ತಾಣಗಳನ್ನು ರಾಮ್ಸರ್ ತಾಣಗಳೆಂದು ಘೋಷಿಸಲಾಗಿದೆ. ಅದೇ ರೀತಿ ನಾವು ಜೌಗು ಭೂಮಿಗಳನ್ನು ಸಂರಕ್ಷಿಸಿದರೆ, ಅಭಿವೃದ್ಧಿ ಪಡಿಸಿದರೆ, ರಾಜ್ಯದಲ್ಲಿ ಇನ್ನೂ ಹೆಚ್ಚಿನ ಜೌಗುಭೂಮಿ ಪ್ರದೇಶ ಮಾಡಲು ಸಾಧ್ಯ ಎಂದು ತಿಳಿಸಿದರು.

    Eshwar Khandre war
    Share. Facebook Twitter Pinterest LinkedIn Tumblr Email WhatsApp
    Previous Articleಹುಡುಕಿಕೊಟ್ಟರೆ 10 ಲಕ್ಷ ರೂಪಾಯಿ ಬಹುಮಾನ | Rameshwaram Cafe Blast
    Next Article Acid ಮಾರಾಟ ನಿಷೇಧಕ್ಕೆ ಸರ್ಕಾರ ಸಿದ್ದತೆ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardspimi ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • HunterMooda ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • HerbertNub ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe