Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ನಿಂದ ಮಂತ್ರಿಗಳ ಕುಟುಂಬ ಸದಸ್ಯರು ಚುನಾವಣಾ ಅಖಾಡಕ್ಕೆ | Congress
    ರಾಜಕೀಯ

    ಕಾಂಗ್ರೆಸ್ ನಿಂದ ಮಂತ್ರಿಗಳ ಕುಟುಂಬ ಸದಸ್ಯರು ಚುನಾವಣಾ ಅಖಾಡಕ್ಕೆ | Congress

    vartha chakraBy vartha chakraಮಾರ್ಚ್ 12, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.12- ರಾಜ್ಯದಲ್ಲಿ ಈ ಬಾರಿ ಅತ್ಯಧಿಕ ಸಂಖ್ಯೆಯಲ್ಲಿ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಬೇಕೆಂದು ರಣತಂತ್ರ ರೂಪಿಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ಮಂತ್ರಿಗಳು ಮತ್ತು ಪ್ರಭಾವಿ ನಾಯಕರ ಕುಟುಂಬದವರನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದಾರೆ.
    ಕಳೆದ ರಾತ್ರಿ ಮತ್ತು ಇಂದೂ ಕೂಡ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ ಕೇಂದ್ರ ಚುನಾವಣಾ ತಂಡ 21 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ (ಸಿಇಸಿ) ಶಿಫಾರಸು ಮಾಡಲು
    ನಿರ್ಧರಿಸಿದೆ.

    ಎಐಸಿಸಿ ಯ ಸ್ಕ್ರೀನಿಂಗ್ ಸಮಿತಿ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೃಹ ಸಚಿವ ಜಿ ಪರಮೇಶ್ವರ್ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೆಲವು ಕ್ಷೇತ್ರಗಳಿಗೆ ಪ್ರಭಾವಿ ನಾಯಕರ ಕುಟುಂಬ ಸದಸ್ಯರನ್ನು ಕಣಕ್ಕಿಳಿಸಲು ನಿರ್ಧರಿಸಿದರು.
    ರಾಜ್ಯದ ಒಟ್ಟು 28 ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಸಿಇಸಿ ಈಗಾಗಲೇ ಪ್ರಕಟಿಸಿದೆ.ಸಂಭವನೀಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸಿದ್ಧಪಡಿಸಿರುವ ಪ್ರತ್ಯೇಕ ಪಟ್ಟಿಗಳ ಕುರಿತು ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಿತು.

    ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಚಿಕ್ಕೋಡಿ ಕ್ಷೇತ್ರದಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಚಾಮರಾಜನಗರ ಕ್ಷೇತ್ರದಿಂದ ಸಚಿವ ಮಹಾದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ ದಾವಣಗೆರೆ ಕ್ಷೇತ್ರದಿಂದ ಸಚಿವ ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾವತಿ ಮಲ್ಲಿಕಾರ್ಜುನ್ ಮತ್ತು ಧಾರವಾಡ ಕ್ಷೇತ್ರದಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಸ್ಕ್ರೀನಿಂಗ್ ಕಮಿಟಿ ತೀರ್ಮಾನಿಸಿದೆ ಬೆಳಗಾವಿಯಿಂದ ತಮ್ಮಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಕಣಕ್ಕಿಳಿಸಲು ಲಕ್ಷ್ಮಿ ಹೆಬ್ಬಾಳ್ಕರ್ ಸಮ್ಮತಿಸಿದರೆ, ಚಿಕ್ಕೋಡಿಯಿಂದ ತಮ್ಮ ಪುತ್ರಿ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸಲು ಸತೀಶ್ ಜಾರಕಿಹೊಳಿ ಸಮ್ಮತಿಸಿಲ್ಲ ತಮ್ಮ ಪುತ್ರಿಯ ಬದಲಿಗೆ ಹಿಂದುಳಿದ ಸಮುದಾಯಕ್ಕೆ ಸೇರಿದ ಲಕ್ಷ್ಮಣರಾವ್ ತಿಂಗಳೆ ಅವರಿಗೆ ಟಿಕೆಟ್ ನೀಡಬೇಕು ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು ಎಂದು ಸಚಿವ ಜಾರಕಿಹೊಳಿ ಪಟ್ಟು ಹಿಡಿದಿರುವುದಾಗಿ ಗೊತ್ತಾಗಿದೆ.

    ಅದೇ ರೀತಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತಮ್ಮ ಪುತ್ರಿಯನ್ನು ಕಣಕ್ಕಿಳಿಸಲು ಸಚಿವ ರಾಮಲಿಂಗ ರೆಡ್ಡಿ ಸಮ್ಮತಿಸಿಲ್ಲ ಆದರೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈ ಇಬ್ಬರಿಗೂ ತಮ್ಮ ಪುತ್ರಿಯರನ್ನು ಕಣಕ್ಕಿಳಿಸಿ ಅವರನ್ನು ಗೆಲ್ಲಿಸಿಕೊಂಡು ಬರಬೇಕು ಇದು ಪಕ್ಷದ ನಿರ್ಧಾರವಾಗಿದೆ ಎಂದು ಹೇಳಿ ಮನವರಿಕೆ ಮಾಡಿಕೊಡಲು ಪ್ರಯತ್ನ ಮಾಡಿದ್ದಾರೆ ಇದಕ್ಕೆ ಈ ಇಬ್ಬರೂ ಎರಡು ದಿನದ ಸಮಯಾವಕಾಶ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ‘ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಉಡುಪಿ‌–ಚಿಕ್ಕಮಗಳೂರು, ಚಿಕ್ಕೋಡಿ, ಮೈಸೂರು, ಚಿತ್ರದುರ್ಗ, ರಾಯಚೂರು ಮತ್ತು ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿ ಹೆಸರಿನ ಬಗ್ಗೆ ಗಂಭೀರ ಚರ್ಚೆ ನಡೆದಿದೆ’ ಎಂದು ಮೂಲಗಳು
    ತಿಳಿಸಿವೆ.
    ಸಮಿತಿಯ ಅಧ್ಯಕ್ಷ ಹರೀಶ್ ಚೌಧರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಮಿತಿ ಸದಸ್ಯರಾದ ಜಿಗ್ನೇಶ್ ಮೇವಾನಿ, ವಿಶ್ವಜಿತ್ ಕದಂ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಭೆಯಲ್ಲಿ ಭಾಗವಹಿಸಿದರು.

    Verbattle
    Verbattle
    Verbattle
    Congress ಉಡುಪಿ ಕಾಂಗ್ರೆಸ್ ಧಾರವಾಡ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಾಪ್ ಸಿಂಹ, ಕಟೀಲ್ ಗಿಲ್ಲಾ ಬಿಜೆಪಿ ಟಿಕೆಟ್ | Pratap Simha
    Next Article ಬಳ್ಳಾರಿಯಲ್ಲಿ ಸಿಕ್ಕಿಬಿದ್ದ ಕೆಫೆ ಬಾಂಬರ್ ಸ್ನೇಹಿತ | NIA
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    IPS ಅಧಿಕಾರಿ ತಲೆದಂಡ

    ಜನವರಿ 20, 2026

    1 ಟಿಪ್ಪಣಿ

    1. avigroup on ಡಿಸೆಂಬರ್ 30, 2025 10:54 ಅಪರಾಹ್ನ

      Нужен трафик и лиды? avigroup.pro/kazan/ SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • RicardoCor ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Jeffreymaf ರಲ್ಲಿ ಕೆಲಸದಿಂದ ತೆಗೆದದ್ದಕ್ಕೆ ನಡೆಯಿತು ಕೊಲೆ | Pratima
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.