ಮೈಸೂರು: ಈ ಬಾರಿ ಒಕ್ಕಲಿಗ ಸಮುದಾಯ ಮೈಸೂರಿನ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ (Lakshman) ಅವರನ್ನ ಬೆಂಬಲಿಸುತ್ತದೆ ಎಂದು ಮೈಸೂರು ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ ನಾವು ಮೈಸೂರಿನ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರನ್ನ ಬೆಂಬಲಿಸುತ್ತೇನೆ. ಒಕ್ಕಲಿಗರು ಎನ್ನುವ ಕಾರಣಕ್ಕೆ ಮೈಸೂರಿನಲ್ಲಿ ಬಿಜೆಪಿ ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಸಿದೆ. ಲಕ್ಷ್ಮಣ್ ಅವರ ಒಕ್ಕಲಿಗರಲ್ಲ ಎಂದು ಕೆಲವರು ಆರೋಪ ಮಾಡಿದ್ರು. ಲಕ್ಷ್ಮಣ್ ಅವರು ಒಕ್ಕಲಿಗರು, ಅವರು ಒಕ್ಕಲಿಗರ ಸಂಘದಿಂದಲು ಸ್ಪರ್ಧೆ ಮಾಡಿದ್ದಾರೆ. ಒಕ್ಕಲಿಗರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ನಾವು ಯಾವುದೇ ಪಕ್ಷವನ್ನು ಬೆಂಬಲಿಸುತ್ತಿಲ್ಲ. ಲಕ್ಷ್ಮಣ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂದು ಬೆಂಬಲಿಸುತ್ತಿಲ್ಲ. ಪಕ್ಷಾತೀತವಾಗಿ ಬೆಂಬಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೆ ಒಕ್ಕಲಿಗ ಸಂಘ ಬೆಂಬಲ | Lakshman
Previous Articleಕೋವಿಡ್ ಭ್ರಷ್ಟನ ಪರ ಪ್ರಧಾನಿ ಮೋದಿ ಪ್ರಚಾರ | Modi
Next Article ಹರ್ಷಿಕಾ ಪೂಣಚ್ಚ ಅವರಿಗಾದ ಕಹಿ ಅನುಭವ | Harshika Poonacha