ಬೆಂಗಳೂರು, ಏ.20- ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಅತ್ಯಧಿಕ ಸ್ಥಾನ ಗೆಲ್ಲಬೇಕು ರಣತಂತ್ರ ರೂಪಿಸುತ್ತಿರುವ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬೃಹತ್ ಸಮಾವೇಶದ ಮೂಲಕ ಶಕ್ತಿಪ್ರದರ್ಶನ ನಡೆಸಿ ಕಾಂಗ್ರೆಸ್ಸಿಗೆ ಎದುರೇಟು ನೀಡಿದೆ.
ಮೊದಲಿಗೆ ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಸುಧಾಕರ್ ಮತ್ತು ಕೋಲಾರ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಪರ ಮತಯಾಚಿಸಿದರು.
ಬಳಿಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ದಕ್ಷಿಣ ಕ್ಷೇತ್ರದ ತೇಜಸ್ವಿ ಸೂರ್ಯ ಮತ್ತು ಬೆಂಗಳೂರು ಕೇಂದ್ರದ ಪಿ ಸಿ ಮೋಹನ್ ಪರವಾಗಿ ಮತಯಾಚಿಸಿದರು.
ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ರೈತರ ಹಿತ ದೃಷ್ಟಿಯಿಂದ ಕಿಸಾನ್ ಸಮ್ಮಾನ್ ಯೋಜನೆಯನ್ನು ರೂಪಿಸಿದೆ ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಇದನ್ನು ಮೂಲೆ ಗುಂಪು ಮಾಡಿದೆ ಎಂದು ಆಪಾದಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಭಾಗಿತ್ವದ ಈ ಯೋಜನೆ ಅನ್ವಯ ರೈತರಿಗೆ ಕೇಂದ್ರ ಸರ್ಕಾರ ವಾರ್ಷಿಕ 6,000 ನೀಡಿದರೆ ರಾಜ್ಯ ಸರ್ಕಾರ ನಾಲ್ಕು ಸಾವಿರ ರೂಪಾಯಿ ಸೇರಿಸಿ ಒಟ್ಟು ಹತ್ತು ಸಾವಿರ ರೂಪಾಯಿ ನೀಡಲಾಗುತ್ತಿತ್ತು ಆದರೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇದು ಸ್ಥಗಿತಗೊಂಡಿದೆ ಎಂದು ದೂರಿದರು.
ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತ ವಿರೋಧಿ ಎನ್ನುವುದಕ್ಕೆ ಇದು ತಾಜಾ ಉದಾಹರಣೆಯಾಗಿದೆ ಈ ಚುನಾವಣೆಯಲ್ಲಿ ರಾಜ್ಯದ ಮತದಾರರು ಇಂತಹ ಪಕ್ಷಕ್ಕೆ ತಕ್ಕ ಶಿಕ್ಷೆ ನೀಡಲಿದ್ದಾರೆ ಎಂಬ ವಿಶ್ವಾಸ ತಮಗಿದೆ ಎಂದು ಹೇಳಿದರು.
ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಸೇರಿದಂತೆ ಹಲವಾರು ಪಕ್ಷಗಳು ಇಂಡಿ ಮೈತ್ರಿಕೂಟ ರಚನೆ ಮಾಡಿಕೊಂಡಿದೆ. ಈ ಮೈತ್ರಿ ಕೂಟಕ್ಕೆ ಯಾವುದೇ ನಾಯಕನು ಇಲ್ಲ ಭವಿಷ್ಯದ ಬಗ್ಗೆ ಯೋಜನೆಗಳು ಇಲ್ಲ ದೇಶದ ಭದ್ರತೆಯ ಬಗ್ಗೆ ಕಾಳಜಿ ಅಂತಿಲ್ಲ ಅಧಿಕಾರ ಮಾತ್ರ ಇವರಿಗೆ ಬೇಕಾಗಿದೆ ಎಂದು ಕಿಡಿ ಕಾರಿದರು.
ಹತ್ತು ವರ್ಷಗಳ ಅವಧಿಯಲ್ಲಿ ನಮ್ಮ ಸರ್ಕಾರ ಮಾಡಿದ ಸಾಧನೆಗಳ ಪಟ್ಟಿ ಹಿಡಿದುಕೊಂಡು ಮತ ಕೇಳಲು ಬಂದಿದ್ದೇನೆ ದಿನ ರಾತ್ರಿ ಕೆಲಸ ಮಾಡುವ ವಿಚಾರದಲ್ಲಿ ನಾವು ಯಾವುದಕ್ಕೂ ಕಡಿಮೆ ಮಾಡಿಲ್ಲ ಪ್ರತಿ ಕ್ಷಣ ನನ್ನ ಸೇವೆ ನಿಮ್ಮ ಹೆಸರಿಗೆ ದೇಶದ ಹೆಸರಿಗೆ ಈ ಬಗ್ಗೆ ನಾನು ಗ್ಯಾರೆಂಟಿ ಕೊಡುತ್ತೇನೆ ಎಂದು ಹೇಳಿದರು.
ಭ್ರಷ್ಟಾಚಾರ ಸಮಾವೇಶ ಉದ್ದೇಶಸಿತೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ರಾಜ್ಯದಲ್ಲಿ 10 ತಿಂಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ 10 ವರ್ಷಗಳಲ್ಲಿ ಮಾಡುವಷ್ಟು ಭ್ರಷ್ಟಾಚಾರವನ್ನು ಮಾಡಿದೆ ಯುಪಿಎ ಸರ್ಕಾರದ ಅವಧಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ಮಾಡಿ ಜನರಿಗೆ ಚೊಂಬು ಕೊಟ್ಟಿದ್ದನ್ನು ನೆನೆಸಿಕೊಂಡು ಈಗ ಜಾಹಿರಾತು ನೀಡಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ 5 ಗ್ಯಾರಂಟಿಗಳನ್ನು ನೀಡಿದ ಕಾಂಗ್ರೆಸ್ ಇದೀಗ ಕೇಂದ್ರದಲ್ಲಿ 25 ಗ್ಯಾರಂಟಿ ನೀಡುವುದಾಗಿ ಹೇಳಿದೆ ಆದರೆ ಇಲ್ಲಿಯವರೆಗೆ ಒಬ್ಬ ನಾಯಕನನ್ನು ತೋರಿಸಲು ಅವರಿಂದ ಸಾಧ್ಯವಾಗುತ್ತಿಲ್ಲ ಎಂದು ದೂರಿದರು.
ಕಳೆದ ಹತ್ತು ವರ್ಷಗಳ ಅವಧಿಯ ಏನ್ ಡಿಎ ಸರ್ಕಾರದ ಸಾಧನೆಯಿಂದ ದೇಶದ ಚಿತ್ರಣವೇ ಬದಲಾಗಿದೆ ಪ್ರಧಾನಿ ಮೋದಿ ಅವರು ಹಲವಾರು ಯೋಜನೆಗಳ ಮೂಲಕ ದೇಶವನ್ನು ವಿಶ್ವದ ಭೂಪಟದಲ್ಲಿ ಪ್ರಜ್ವಲಿಸುವಂತೆ ಮಾಡಿದ್ದಾರೆ ದಲಿತರು ಹರಿಜನರ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದರೆ ಕಾಂಗ್ರೆಸ್ ನಾಯಕರು ಶುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಮೋದಿ ಕಾ ಗ್ಯಾರಂಟಿ :
ಬೆಂಗಳೂರಿನ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ದೇಶದ ಜನರಿಗೆ ಕೇಂದ್ರ ಸರ್ಕಾರ ಉಚಿತವಾಗಿ ಪಡಿತರ ನೀಡುತ್ತಿದ್ದು ಮುಂದಿನ ಐದು ವರ್ಷವೂ ಈ ವ್ಯವಸ್ಥೆ ಮುಂದುವರೆಯಲಿದೆ ಇದು ಮೋದಿ ಕ ಗ್ಯಾರಂಟಿ ಎಂದು ಹೇಳಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬರುವವರೆಗೆ ಬಡವರಿಗೆ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಸಿಗುತ್ತದೆ ಎಂದು ಯಾರು ಭಾವಿಸಲಿಲ್ಲ ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಆಯುಷ್ಮಾನ್ ಭಾರತ್ ಯೋಜನೆ ಮೂಲಕ ಎಲ್ಲ ಬಡವರಿಗೂ ಗಂಭೀರ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮುದ್ರಾ ಯೋಜನೆ ಅಡಿಯಲ್ಲಿ ಯಾವುದೇ ಭದ್ರತೆ ಇಲ್ಲದೆ ಯುವ ಉದ್ಯಮಿಗಳಿಗೆ 20 ಲಕ್ಷ ಕೋಟಿ ಸಾಲ ನೀಡಲಾಗಿದೆ. ಹತ್ತು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಸೇರಿದ 25 ಕೋಟಿ ಜನ ಬಡತನ ರೇಖೆಯಿಂದ ಹೊರಗೆ ಬಂದಿದ್ದಾರೆ ಎಂದು ತಿಳಿಸಿದರು.