Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ರೇವಣ್ಣ ಪ್ರಕರಣದ ವರದಿ ಕೇಳಿದ ಮಹಿಳಾ ಆಯೋಗ | Prajwal Revanna
    Viral

    ಪ್ರಜ್ವಲ್ ರೇವಣ್ಣ ಪ್ರಕರಣದ ವರದಿ ಕೇಳಿದ ಮಹಿಳಾ ಆಯೋಗ | Prajwal Revanna

    vartha chakraBy vartha chakraಏಪ್ರಿಲ್ 30, 202430 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.30- ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಇದೀಗ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸದ್ದು ಮಾಡತೊಡಗಿದೆ.ಘಟನೆ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ ಪ್ರಕರಣದ ಕುರಿತು ಸಮಗ್ರ ವರದಿ ನೀಡಲು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
    ಪ್ರಕರಣ ಹೇಗೆ ಬೆಳಕಿಗೆ ಬಂದಿತು, ಯಾವ ರೀತಿಯ ತನಿಖೆ ನಡೆಸಲಾಗುತ್ತದೆ ಎನ್ನುವುದು ಸೇರಿದಂತೆ ಸಂಪೂರ್ಣ ವರದಿಯನ್ನು ಮೂರು ದಿನಗಳಲ್ಲಿ ಆಯೋಗಕ್ಕೆ ಸಲ್ಲಿಸವಂತೆ ಕರ್ನಾಟಕ ಪೊಲೀಸ್ ಮಹಾ‌ನಿರ್ದೇಶಕ ( ಡಿಜಿ-ಐಜಿಪಿ) ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ನೀಡಿದೆ.
    ಮಹಿಳಾ ಆಯೋಗ ಡಿಜಿ-ಐಜಿಪಿ ಮತ್ತು ಎಸ್ಐಟಿ ಮುಖ್ಯಸ್ಥರಿಗೆ ಪತ್ರ ಬರೆದು ವಿಡಿಯೋಗಳು ವೈರಲ್ ಆಗದಂತೆ ತಡೆಯಿರಿ. ವಿಡಿಯೋ ಲೀಕ್ ಆಗಿದ್ದು ಎಲ್ಲಿಂದ? ಲೀಕ್ ಮಾಡಿದ್ದು ಯಾರು? ಪ್ರಕರಣವನ್ನು ಕ್ರಿಮಿನಲ್ ಮೊಕದ್ದಮೆ ಅಡಿಯಲ್ಲಿ ತನಿಖೆ ನಡೆಸಬೇಕು ಎಂದು ಪತ್ರ ಬರೆದಿದೆ.

    ಕ್ರಮ ಕೈಗೊಳ್ಳಿ:
    ಈ‌‌ ನಡುವೆ, ಈ ವಿಷಯವಾಗಿ ರಾಜ್ಯ ಮಹಿಳಾ ಆಯೋಗ ಕೂಡ ಮಧ್ಯ ಪ್ರವೇಶ ಮಾಡಿದ್ದು ಸಂತ್ರಸ್ತ ಮಹಿಳೆಯರ ವಿಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದೆ.
    ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಈ‌ ಪತ್ರ ಬರೆದಿದ್ದು,
    ಸಾಮಾಜಿಕ ತಾಲತಾಣಗಳಲ್ಲಿ ಸಂತ್ರಸ್ತ ಮಹಿಳೆಯರ ಫೋಟೋ ವಿಡಿಯೋಗಳನ್ನು ಹಂಚಲಾಗುತ್ತಿದೆ. ಇದರಿಂದ ಮಹಿಳೆಯರ ಘನತೆಗೆ ಧಕ್ಕೆ ಉಂಟಾಗುತ್ತಿದೆ. ಸಂತ್ರಸ್ತ ಮಹಿಳೆಯ ಕುಟುಂಬದಲ್ಲೂ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಈ ಬಗ್ಗೆ ಸಾಕಷ್ಟು ಮಹಿಳೆಯರಿಂದ ಅಭಿಪ್ರಾಯಗಳು ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಸಂತ್ರಸ್ತ ಮಹಿಳೆಯರ ವಿಡಿಯೋ ಶೇರ್‌ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

    ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಇಂತಹ ಕೃತ್ಯ ಎಸಗುತ್ತಿದ್ದಾರೆ. ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರ ಫೋಟೋ, ವಿಡಿಯೋಗಳನ್ನು ಹರಿಯಬಿಡುವ ಮೂಲಕ ಅನ್ಯಾಯಕ್ಕೊಳಗಾದ ಮಹಿಳೆಯರ ಘನತೆಗೆ ಕುಂದು ತರುತ್ತಿದ್ದಾರೆ. ಇದರ ವಿರುದ್ಧ ಪೊಲೀಸ್‌ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.
    ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚನೆ ಆಗಿರುವುದರಿಂದ ನಾವು ಕಾಯಬೇಕು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ಮುಂದೆ ಬರುವ ಸಂತ್ರಸ್ತ ಮಹಿಳೆಯರ ಗೌಪ್ಯತೆ ಕಾಪಾಡೋದು, ತನಿಖೆಯಲ್ಲಿ ಭಾಗಿಯಾದಾಗ ರಕ್ಷಣೆ ಕೊಡಿಸುವುದು ಮಹಿಳಾ ಆಯೋಗದ ಜವಾಬ್ದಾರಿಯಾಗಿದೆ. ಈ ಭರವಸೆಯನ್ನು ನಾನು ಸಂತ್ರಸ್ತರಿಗೆ ನೀಡುತ್ತೇನೆ ಎಂದು ಹೇಳಿದರು.

    Verbattle
    Verbattle
    Verbattle
    prajwal revanna revanna ಕಾನೂನು ನ್ಯಾಯ ವೈರಲ್ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಜೆಡಿಎಸ್ ಶಾಸಕರಿಗೆ ಪ್ರಜ್ವಲ್ ಬೇಡವಂತೆ | Prajwal Revanna
    Next Article ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಲಗ್ಗೆ | Youth Congress
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MathewPlala ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    • Tracymix ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    • LinwoodGah ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.