ಬೆಂಗಳೂರು,ಏ.30- ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 10ರಂದು ಪ್ರಕಟವಾಗುವ ಸಾಧ್ಯತೆ ಇದೆ. ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು ತೆಗೆದುಕೊಂಡಿದ್ದು ಎಲ್ಲವೂ ನಿರೀಕ್ಷೆಯಂತೆ ನಡೆದು ಮೇ 10ರಂದು ಫಲಿತಾಂಶ ಹೊರಬೀಳಲಿದೆ.
ಈ ಬಾರಿ ರಾಜ್ಯದಲ್ಲಿ ಯಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು ಸೇರಿದ್ದಾರೆ. ಒಟ್ಟಾರೆ, 2750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ಇದಾದ ನಂತರ ದಾಖಲೆಯ ಅವಧಿಯಲ್ಲಿ ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳಿಸಿದ್ದು ಇದೀಗ ಅಂತಿಮ ಸುತ್ತಿನ ಪ್ರಕ್ರಿಯೆಗಳು ಆರಂಭಗೊಂಡಿವೆ ನಿರೀಕ್ಷೆಯಂತೆ ಎಲ್ಲವೂ ಮುಕ್ತಾಯಗೊಳ್ಳುತ್ತಿದ್ದು ಮೇ ಹತ್ತರಂದು ಫಲಿತಾಂಶ ಪ್ರಕಟಿಸಲು ಮಂಡಳಿ ಸಿದ್ಧತೆ ನಡೆಸಿದೆ.
ವಿದ್ಯಾರ್ಥಿಗಳು ಮೇ ಹತ್ತರಂದು kseab.karnataka.gov.inಗೆ ಭೇಟಿ ನೀಡಿ ತಮ್ಮ ಫಲಿತಾಂಶ ವೀಕ್ಷಿಸಬಹುದಾಗಿದೆ.

