ಬೆಂಗಳೂರು.ಮೇ,12:
ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಮುಕ್ತಾಯಗೊಂಡ ಬೆನ್ನಲ್ಲೇ ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿನ ಆರು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆ ಗೆ ಭರ್ಜರಿ ರಂಗು ಬಂದಿದೆ.
ಆರು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ವಿಧಾನಪರಿಷತ್ತಿನಲ್ಲಿ ಬಹುಮತದ ಕೊರತೆಯನ್ನು ನೀಗಿಸಿಕೊಳ್ಳಲು ಆಡಳಿತರೂಢ ಕಾಂಗ್ರೆಸ್ ರಣತಂತ್ರ ರೂಪಿಸಿದರೆ, ಪರಿಷತ್ತಿನಲ್ಲಿ ಪ್ರಾಬಲ್ಯ ಉಳಿಸಿಕೊಳ್ಳಲು ಬಿಜೆಪಿ ಜೆಡಿಎಸ್ ಮೈತ್ರಿ ಕೂಟ ವ್ಯೂಹ ಹೆಣೆದಿದೆ.
ಚುನಾವಣೆಯ ಕಾರ್ಯತಂತ್ರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಹಿರಿಯ ನಾಯಕರು ಮತ್ತು ಪಕ್ಷದ ಅಭ್ಯರ್ಥಿಗಳೊಂದಿಗೆ ಸುಧೀರ್ಘ ಸಮಾಲೋಚನೆ ನಡೆಸಿದರು.
ಲೋಕಸಭೆ ಚುನಾವಣೆ ಎದುರಿಸಿದ ಮಾದರಿಯಲ್ಲಿಯೇ ಈ ಚುನಾವಣೆಯನ್ನು ಎದುರಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಜೆಡಿಎಸ್ ಬಿಜೆಪಿ ಮೈತ್ರಿಕೂಟವನ್ನು ಕಟ್ಟಿ ಹಾಕಬೇಕು ಎಂಬ ತೀರ್ಮಾನಕ್ಕೆ ಬರಲಾಯಿತು.
ಚುನಾವಣೆ ನಡೆಯುತ್ತಿರುವ ಎಲ್ಲ ಕ್ಷೇತ್ರಗಳಿಗೂ ಜಿಲ್ಲೆಗೊಬ್ಬ ಉಸ್ತುವಾರಿ ಮಂತ್ರಿ ಹಾಗೂ ಸಹ ಉಸ್ತುವಾರಿಯಾಗಿ ಪಕ್ಷದ ಹಿರಿಯ ನಾಯಕರನ್ನು ನೇಮಿಸಲು ನಿರ್ಧರಿಸಿದ್ದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಚುನಾವಣೆಯ ಮೇಲುಸ್ತುವಾರಿ ವಹಿಸಲಿದ್ದಾರೆ.
ಪದವೀಧರರು ಮತ್ತು ಶಿಕ್ಷಕರಿಗೆ ರಾಜ್ಯ ಸರ್ಕಾರ ನೀಡಿರುವ ಕೊಡುಗೆಗಳು ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚಿಸಬೇಕು ಎಂಬ ತೀರ್ಮಾನಕ್ಕೆ ಬಂದಿದ್ದು ಅಭ್ಯರ್ಥಿಗಳು ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದೆ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಪ್ರಚಾರದಲ್ಲಿ ತೊಡಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿವಿಮಾತು ಹೇಳಿದ್ದಾರೆ.
ಬಳಿಕ ಅಭ್ಯರ್ಥಿಗಳಾದ ಕೆ ಕೆ ಮಂಜುನಾಥ್ ಕುಮಾರ್, ಮರಿತಿಬ್ಬೇಗೌಡ, ಆಯನೂರು ಮಂಜುನಾಥ್ ಹಾಗೂ ಡಾ. ಚಂದ್ರಶೇಖರ ಪಾಟೀಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಬಿ ಫಾರಂ ನೀಡಿದರು.
ಇದಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್ ತಾವು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಈ ಮೈತ್ರಿಕೂಟ ಶಾಶ್ವತವಾಗಿ ಮುಂದುವರೆಯಲಿ ಅಥವಾ ಒಂದು ಪಕ್ಷದಲ್ಲಿ ಮತ್ತೊಂದು ಪಕ್ಷ ವಿಲೀನವಾಗಲಿ ಅದು ಅವರಿಗೆ ಬಿಟ್ಟ ವಿಷಯ ನಾವು ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಡೆ ಗಮನ ಹರಿಸುತ್ತೇವೆ ಎಂದು ಹೇಳಿದರು.
ಮಂತ್ರಿಗಳು ಶಾಸಕರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಂದ ಹಿಡಿದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರವರೆಗೆ ಎಲ್ಲಾ ಹಂತದ ಕಾರ್ಯಕರ್ತರು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವಂತೆ ತಾಕಿತು ಮಾಡಲಾಗಿದೆ ಎಂದು ತಿಳಿಸಿದರು.
ಅಪಸ್ವರ:
ಮತ್ತೊಂದೆಡೆ ಬಿಜೆಪಿಯಲ್ಲೂ ಕೂಡ ಈ ಚುನಾವಣೆ ರಣೋತ್ಸಾಹ ಮೂಡಿಸಿದರೆ ಆದರೆ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಆಪಸ್ವರ ಕೇಳಿ ಬಂದಿದ್ದು ನಾಯಕರನ್ನು ಚಿಂತೆಗೀಡು ಮಾಡಿದೆ.
ಬೆಂಗಳೂರು ಪದವೀಧರ ಕ್ಷೇತ್ರ ಸೇರಿದಂತೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಪಸ್ವರ ಕೇಳಿದ್ದು ಅವರನ್ನು ಸಮಾಧಾನ ಪಡಿಸುವ ಕೆಲಸಕ್ಕೆ ನಾಯಕರು ಮುಂದಾಗಿದ್ದಾರೆ.
ಅದರಲ್ಲೂ ಮಾಜಿ ಶಾಸಕ ರಘುಪತಿ ಭಟ್ ಅವರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದು ತಮಗೆ ಟಿಕೆಟ್ ನಿರಾಕರಿಸಿ ಜೆಡಿಎಸ್ಗೆ ಕ್ಷೇತ್ರ ಬಿಟ್ಟುಕೊಟ್ಟ ಕ್ರಮದ ಬಗ್ಗೆ ತೀವ್ರ ಬೇಸರ ಹೊರಹಾಕಿದ್ದಾರೆ.
ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ್ ರಾಜ್ಯನಾಯಕರು ಸುಧೀರ್ಘ ಚರ್ಚೆ ನಡೆಸಿ ಎಲ್ಲಾ ಕ್ಷೇತ್ರಗಳಿಗೂ ತಲಾ ಮೂವರು ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ ಗೆ ರವಾನಿಸಲಾಗಿತ್ತು. ಈ ವಿಷಯದಲ್ಲಿ ರಾಜ್ಯ ನಾಯಕರು ಯಾವುದೇ ತೀರ್ಮಾನ ಕೈಗೊಂಡಿಲ್ಲ ಇದು ಹೈಕಮಾಂಡ್ ನಿರ್ಧಾರವಾಗಿದ್ದು ಅದಕ್ಕೆ ಎಲ್ಲರೂ ತಲೆಬಾಗಬೇಕು ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಪಸ್ವರದ ಬಗ್ಗೆ ಹೈಕಮಾಂಡ್ ಗಮನಹರಿಸುತ್ತದೆ. ಅಂತಿಮವಾಗಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದೆ ಎಲ್ಲಾ ಆರೋ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ಮೂಲಕ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.
3 ಪ್ರತಿಕ್ರಿಯೆಗಳು
i-tec.ru https://multimedijnyj-integrator.ru/ .
вывод из запоя недорого вывод из запоя недорого .
снятие ломки цены http://www.snyatie-lomki-narkolog.ru .