Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಕಿವಿಮಾತು.
    Trending

    ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಕಿವಿಮಾತು.

    vartha chakraBy vartha chakraಜೂನ್ 13, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು, ಜೂ.13:
    ಚುನಾವಣೆಯ ಕಾರಣಕ್ಕೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ.ಹಲವಾರು ಸಮಸ್ಯೆಗಳಿಂದ ಜನರು ಪರಿತಪಿಸುತ್ತಿದ್ದು,ಇವುಗಳಿಗೆ ತಕ್ಷಣವೇ ಸ್ಪಂದಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೂಚಿಸಿದ್ದಾರೆ.
    ಬಹು ದಿನಗಳ ಬಿಡುವಿನ ನಂತರ ಸಂಪುಟ ಸಭೆ ನಡೆಸಿದ ಅವರು ಎಲ್ಲಾ ಸಚಿವರು ಜನ ಸ್ಪಂದನಾ ಕಾರ್ಯಕ್ರಮಗಳ ಮೂಲಕ ಜನರ ಅಹವಾಲು ಆಲಿಸಿ,ಅವುಗಳಿಗೆ ಪರಿಹಾರ ನೀಡಬೇಕು. ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ನೀಡುವಂತೆ ತಾಕೀತು ಮಾಡಿದರು
    ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್
    ಹಿಂದಿನ ಸಚಿವ ಸಂಪುಟದಲ್ಲಿ 147 ಟೆಂಡರ್ ಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿದ್ದು, ಇವುಗಳಲ್ಲಿ ಎಷ್ಟು ಟೆಂಡರ್ ಕರೆದು ಕೆಲಸ ಪ್ರಾರಂಭ ಮಾಡಲಾಗಿದೆ ಎನ್ನುವ ಅವಲೋಕನ ನಡೆಸಲಾಯಿತು.
    ಇದರಲ್ಲಿ 94 ಪ್ರಸ್ತಾವಗಳಿಗೆ ಟೆಂಡರ್ ಆಹ್ವಾನಿಸಲಾಗಿದೆ. 19 ಟೆಂಡರ್ ಪರಿಶೀಲನೆಯಲ್ಲಿವೆ. 18 ಟೆಂಡರ್ಗಳಿಗೆ ಕಾರ್ಯಾದೇಶ ನೀಡಲಾಗಿದೆ. 7 ಟೆಂಡರ್ ಕಾಮಗಾರಿ ಮುಕ್ತಾಯಗೊಂಡಿದೆ. 53 ಟೆಂಡರ್ ಕರೆಯಲು ಬಾಕಿ ಇವೆ, ಸಂಪುಟ ಇವುಗಳನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದು, ಅನುಮೋದನೆ ಕೊಟ್ಟಿರುವುದಕ್ಕೆಲ್ಲಾ ಟೆಂಡರ್ ಕರೆದು ಕೆಲಸ ಆರಂಭಿಸಲು ಸಿಎಂ ಸೂಚನೆ ನೀಡಿದರು ಎಂದು ತಿಳಿಸಿದರು.
    ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಡಿ 2025 ಫೆಬ್ರವರಿ 12-14ರವರೆಗೆ ಇನ್ವೆಸ್ಟ್ ಕರ್ನಾಟಕ -2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲು ಸಚಿವ ಸಂಪುಟ ಅನುಮೋದಿಸಿದೆ.  ಈಗಾಗಲೇ 25 ಕೋಟಿ ರೂ.ಗಳನ್ನು ಒದಗಿಸಲಾಗಿದ್ದು, ಹೆಚ್ಚುವರಿ 15 ಕೋಟಿ ರೂ.ಗಳನ್ನು ಒದಗಿಸಲು ಸಚಿವ ಸಂಪುಟ ಒಪ್ಪಿದೆ.
    ಕಾರ್ಮಿಕ ಇಲಾಖೆಯಲ್ಲಿ ಇಎಸ್‍ಐ ನಲ್ಲಿ ಗುತ್ತಿಗೆ ವೈದ್ಯರ ವಿಲೀನ ಮಾಡುವ ಬಗ್ಗೆ ಚರ್ಚೆಯಾಗಿ ಮುಂದೂಡಲಾಗಿದೆ. ಕಾನೂನು ಸಲಹೆ ಪಡೆಯಲು ಸೂಚಿಸಲಾಗಿದೆ.
    ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಕೋಟಿ ರೂ.ಗಳ ವೆಚ್ಚದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ.
    • ಸಾರಿಗೆ ಇಲಾಖೆಯಲ್ಲಿ ಕರ್ನಾಟಕ ಸಾರಿಗೆ ರಸ್ತೆ ಸಾರಿಗೆ ನಿಗಮ ಮತ್ತು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಹೊಸದಾಗಿ 112 ಪೂರ್ಣ ಕವಚ ನಿರ್ಮಿತ ಬಿಎಸ್. 4 ವೇಗದೂತ ಬಸ್ಸುಗಳನ್ನು 46.48 ಕೋಟಿ ರೂ.ಗಳ  ಅಂದಾಜು ಮೊತ್ತದಲ್ಲಿ ಖರೀದಿ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲು ಪ್ರಸ್ತಾವನೆಯನ್ನು ಸಚಿವ ಸಂಪುಟ ಒಪ್ಪಿದೆ. 62 ಹೊಸ ಬಸ್ಸುಗಳನ್ನು ಖರೀದಿಸಲು ಹಾಗೂ 50 ಬಸ್ಸುಗಳನ್ನು  ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ ವರ್ಗಾಯಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
    • ಗಣಿಗುತ್ತಿಗೆ ಅವಧಿ ಮುಕ್ತಾಯಗೊಂಡಿರುವ ಮೆ: ಭಾರತ್ ಚಿನ್ನದ ಗಣಿ ಸಂಸ್ಥೆ, ಕೆ.ಜಿಎಫ್ ಅವರು ಪಡೆದಿರುವ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಭ್ಯವಿರುವ ಟೇಲಿಂಗ್  ಡಂಪ್ಸ್ ಗಳಿಗೆ ಎಂ.ಎಂ.ಡಿ.ಆರ್ ಕಾಯ್ದೆಯ ಕಲಂ 17 ರನ್ವಯ ಕೇಂದ್ರ ಸರ್ಕಾರದಿಂದ ಗಣಿ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರಸ್ತಾವನೆ ಇದ್ದು, ಹೆಚ್ಚಿನ ತಾಂತ್ರಿಕ ವಿವರಗಳು ಅಗತ್ಯವಿರುವುದರಿಂದ  ಇದನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ.
    • ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಆಕರ್ಷಣೆಗಾಗಿ Knowledge  Partner ಆಯ್ಕೆ ಮಾಡಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಇ-ಟೆಂಡರ್ ಕರೆದಿದ್ದು ಟೆಂಡರ್ ಪ್ರಕಾರ ಈಗಾಗಲೇ ಮೆ: ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಇಂಡಿಯಾ ಪ್ರೈ ಲಿ., ಇವರನ್ನು ಜಿಎಸ್‍ಟಿ ಒಳಗೊಂಡಂತೆ 21 ಕೋಟಿ ರೂ. ವೆಚ್ಚದಲ್ಲಿ Knowledge  Partner ಆಗಿ ನೇಮಕ ಮಾಡಲು  ಸಚಿವ ಸಂಪುಟ ಒಪ್ಪಿಗೆ ನೀಡಿದೆ.
    • ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯಡಿ ರಾಜ್ಯದಲ್ಲಿ ಕಾನೂನು ಮತ್ತು ನೀತಿ ಗೆ ಅನುಮೋದನೆ ನೀಡುವ ಬಗ್ಗೆ ಎರಡು ಮೂರು ವಿಚಾರಗಳಲ್ಲಿ ಬದಲಾವಣೆ ಅಗತ್ಯವನ್ನು  ಮನಗಂಡು ಮುಂದೂಡಲಾಗಿದೆ.

    art Bangalore Congress ED Edge Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚಿನ್ನ ಚುನಾವಣೆ ನ್ಯಾಯ ರಾಜಕೀಯ ವಾಣಿಜ್ಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Next Article ಸಾರ್ವಜನಿಕ ಸ್ಥಳಗಳಲ್ಲಿ 254 ನಮ್ಮ ಕ್ಲಿನಿಕ್ ಆರಂಭ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zapojkrasnodarvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • OLanesoume ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • video sex 18+ ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe