ಬೆಂಗಳೂರು,ಜೂ.22-ಭೂ ಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸೇರಿ 6 ಮಂದಿ ವಿರುದ್ಧ ಲೋಕಾಯುಕ್ತಕ್ಕೆ ಬಾಲಿವುಡ್‌ನ ಖ್ಯಾತ ಗಾಯಕ ಲಕ್ಕಿ ಅಲಿ ದೂರು ನೀಡಿದ್ದಾರೆ.
ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್‌ವೊಂದಕ್ಕೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಸಹಾಯಕ ಪೊಲೀಸ್ ಕಮಿಷನರ್ ಮಂಜುನಾಥ್, ಯಲಹಂಕ ನ್ಯೂ ಟೌನ್ ಪಿಎಸ್‌ಐ, ತಾಲೂಕು ಸರ್ವೇಯರ್ ಮನೋಹರ್, ಸುಧೀರ್ ರೆಡ್ಡಿ ಹಾಗೂ ಮಧಸೂಧನ್ ರೆಡ್ಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿರುವ ಪ್ರತಿಯನ್ನು ಲಕ್ಕಿ ಅಲಿ ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.
ನ್ಯೂ ಯಲಹಂಕ ಟೌನ್ ಬಳಿಯ ಕೆಂಚೇನಹಳ್ಳಿ ಬಳಿ ಇರುವ ತನ್ನ ಆಸ್ತಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ತಮ್ಮ ಬಳಿಯಿರುವ ಜಮೀನನ್ನು ಸುಧೀರ್ ರೆಡ್ಡಿ, ಮಧುಸೂದನ್ ರೆಡ್ಡಿ ಸಿಂಧೂರಿ ಸಹಕಾರದಲ್ಲೇ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ದೂರಿದ್ದಾರೆ.
Previous Articleಗಾಂಧಿನಗರದಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್*
Next Article ಮೋಹಕ ತಾರೆ ರಮ್ಯಾಗೆ ಬೇಸರವಂತೆ.