ಬೆಂಗಳೂರು, ಜು.5:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಮತ್ತು ಪರಿಹಾರ ವಿತರಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಆಡಳಿತ ಪಕ್ಷದ ಸದಸ್ಯರಿಗೆ ಅಕ್ರಮವನ್ನು ಬಹಿರಂಗಪಡಿಸಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ
ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವವರಿಂದ ಮೂಡಾ ಹಗರಣ ಬಯಲಾಗಿದೆ ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಏಕೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿರುವವರ ಪಾತ್ರ ಇದೆ ಎಂದು ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡಿದ ಸಿಡಿ ಫ್ಯಾಕ್ಟರಿ ಈಗ ಬಂದ್ ಆಯ್ತು, ಇದೀಗ ಮುಡಾ ಫ್ಯಾಕ್ಟರಿ ಶುರುವಾಯ್ತು’ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಪತ್ನಿಗೆ 14 ಸೈಟ್ ಹಂಚಿಕೆ ವಿಚಾರದ ಬಗ್ಗೆ ಮುಖ್ಯಮಂತ್ರಿಯ ಕಾನೂನು ಸಲಹೆಗಾರರೂ ಆಗಿರುವ ಶಾಸಕ ಎ.ಎಸ್. ಪೊನ್ನಣ್ಣ ಸುದೀರ್ಘವಾಗಿ ಮಾತನಾಡಿದ್ದಾರೆ. ಅವರು ಮುಖ್ಯಮಂತ್ರಿಯನ್ನು ಸಮರ್ಥಿಸಿಕೊಂಡಿದ್ದಾರೆ. ನಿವೇಶನ ನೀಡಬೇಕು ಇಲ್ಲವಾದರೆ62 ಕೋಟಿ ಪರಿಹಾರ ನೀಡಬೇಕು ಎಂದಿದ್ದಾರೆ ಈ ಮಾನದಂಡವನ್ನು ಎಲ್ಲ ರೈತರಿಗೂ ಅನ್ವಯಿಸಬೇಕು ಎಂದು ಹೇಳಿದರು.
ಹಲವು ಅಭಿವೃದ್ಧಿ ಹೆಸರಿನಲ್ಲಿ ಭೂ ಸ್ವಾಧೀನವಾಗಿದೆ, ಆ ರೈತರು ತಮಗೆ ಬರಬೇಕಾದ ಪರಿಹಾರಕ್ಕಾಗಿ ಇನ್ನು ಕೂಡ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ. ಅವರಿಗೆ ರೇಟ್ ಫಿಕ್ಸ್ ಮಾಡುವಾಗ ಹೇಗೆ ಮಾಡುತ್ತೀರಾ? ರೈತರನ್ನ ಬೀದಿಗೆ ನಿಲ್ಲಿಸಿದ್ದೀರಲ್ಲಾ ಇದು ಸರಿಯೇ? ಎಂದು ಪ್ರಶ್ನಿಸಿದರು.
ನಿಮ್ಮ ಪತ್ನಿಯ ಹಣ ಕೇಳುತ್ತಾ ಇದ್ದೀರಲ್ಲಾ ಆ ದೇವರು ಮೆಚ್ಚುತ್ತಾನೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೇಳಿದ ಅವರು, ಮುಡಾ ಹಗರಣದ ವಿರುದ್ಧ ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೇ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ ಎಂದರು.
ಸಿಎಂ ಪತ್ನಿಗೆ ಆ ಜಾಗ ಹೇಗೆ ಬಂತು ಎಂಬುದೂ ನನಗೆ ಗೊತ್ತಿದೆ. 62 ಕೋಟಿ ಪರಿಹಾರ ಕೇಳುವ ಮುಖ್ಯಮಂತ್ರಿ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಸವಾಲು ಹಾಕಿದರು.
ಸಿಎಂ ಹುದ್ದೆ ಮೇಲೆ ಕಣ್ಣಿಟ್ಟವರಿಂದ ಮುಡಾ ಅಕ್ರಮ ದಾಖಲೆ ಬಹಿರಂಗ.
Previous Articleಮುಡಾ ಅಕ್ರಮ ಆರೋಪಕ್ಕೆ ದಿನಕ್ಕೊಂದು ತಿರುವು.
Next Article ರಾಜ್ಯ ಸರ್ಕಾರದ ವಿರುದ್ಧ ಬಂಡಾಯಕ್ಕೆ ಸಜ್ಜಾದ ನೌಕರರು.