ಬೆಂಗಳೂರು,ಜು.24:
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳದ ಪ್ರಸ್ತಾಪ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು,ಸದ್ಯದಲ್ಲೇ ಹೆಚ್ಚಳದ ನಿರ್ಧಾರ ಪ್ರಕಟಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯೆ ಭಾಗೀರಥಿ ಮುರಳ್ಯ ಅವರ ಪ್ರಶ್ನೆಗೆ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ; ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದೆ.ಆದಷ್ಟು ಶೀಘ್ರ ಇವುಗಳ ನೇಮಕಾತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದರು.
2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡಿದ್ದರು. ಆದಾದ ಮೇಲೇ ಗೌರವ ಧನ ಹೆಚ್ಚಳವನ್ನೇ ಮಾಡಿಲ್ಲ; ಈಗ ಗೌರವ ಧನ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
Previous Articleನೀತಿಯೇ ಇಲ್ಲದ ನೀತಿ ಆಯೋಗ.
Next Article ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.

