ನವದೆಹಲಿ, ಜು.26:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಬಿಜೆಪಿ –ಜೆಡಿಎಸ್ನ ಸಂಸದರು ಸಂಸತ್ ಭವನದ ಮುಂದೆ ಪ್ರತಿಭಟನೆ ನಡೆಸಿದರು.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಸವರಾಜ ಬೊಮಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಬಿ.ವೈ.ರಾಘವೇಂದ್ರ, ಮಲ್ಲೇಶ್ ಬಾಬು, ಜಗದೀಶ್ ಶೆಟ್ಟರ್, ಜಗ್ಗೇಶ್ ಸೇರಿದಂತೆ ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರು ಪಾಲ್ಗೊಂಡಿದ್ದರು.
ವಾಲ್ಮೀಕಿ ಮತ್ತು ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬ ನೇರವಾಗಿ ಶಾಮೀಲಾಗಿದ್ದು, ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇದು ನಾಲ್ಕು ಸಾವಿರ ಕೋಟಿ ಹಗರಣವಾಗಿದೆ. ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಶಾಮೀಲಾಗಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಾಲೀಕಿ ಸೇರಿದಂತೆ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಸ್ವತಃ ಮುಖ್ಯಮಂತ್ರಿಗಳ ಮೇಲೆ ಆರೋಪ ಇರುವುದರಿಂದ ನೈತಿಕವಾಗಿ ಮತ್ತು ರಾಜಕೀಯವಾಗಿ ಅಧಿಕಾರದಲ್ಲಿ ಮುಂದುವರೆಯಬಾರದು ಎಂದು ಆಗ್ರಹಿಸಿದರು.
ಕರ್ನಾಟಕದ ದಲಿತರ ಹಣವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ’ ಎಂದು ಹಿಂದಿಯಲ್ಲಿ ಘೋಷಣೆ ಕೂಗಿದರು. ‘ಕರ್ನಾಟಕದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ’ ಎಂದು ಕೇಳಿದರು. ‘ಹಠಾವೋ, ಹಠಾವೋ ಭ್ರಷ್ಟ ಮುಖ್ಯಮಂತ್ರಿ ಕೋ ಹಠಾವೋ’ ಎಂಬ ಘೋಷಣೆಯನ್ನೂ ಕೂಗಿದರು.
ಈ ವೇಳೆ ಮಾತನಾಡಿದ ಜಗದೀಶ ಶೆಟ್ಟರ್ ಮುಖ್ಯಮಂತ್ರಿಗಳು ಮುಡಾ ಹಗರಣ ಕುರಿತು ಸದನದಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಇದು ಹಗರಣ ಮುಚ್ಚಿ ಹಾಕುವ ಕೆಲಸ. ನಮ್ಮ ಶಾಸಕರು ಅಹೋರಾತ್ರಿ ಧರಣಿ ಮಾಡಿದ್ದಾರೆ. ನಾವೂ ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.
ಗೋವಿಂದ ಕಾರಜೋಳ ಮಾತನಾಡಿ, “ವಾಲ್ಮೀಕಿ ನಿಗಮದಲ್ಲಿ 187 ಕೋಟಿಯ ಹಗರಣ ನಡೆದಿದೆ. ನಕಲಿ ಖಾತೆಗಳಿಗೆ ಹಣ ಹೋಗಿದೆ. ಹಣಕಾಸು ಇಲಾಖೆ ನಿರ್ವಹಿಸುವ ಮುಖ್ಯಮಂತ್ರಿಗಳೇ ಇದಕ್ಕೆ ಜವಾಬ್ದಾರರು. ಅವರು ಕೂಡಲೇ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.
Previous Articleವಿದೇಶಿ ಡ್ರಗ್ಸ್ ಪೆಡ್ಲರ್ ಸೆರೆ.
Next Article ಹಿಂದುಳಿದ ವರ್ಗಗಳ ವಿರೋಧಿ ಬಿಜೆಪಿ ನಾಯಕರು