ಬೆಂಗಳೂರು,ಜು.29-ತಾಂತ್ರಿಕ ಕಾರಣಗಳಿಂದ ಕಳೆದ ಎರಡು ವರ್ಷಗಳಿಂದ ಸಂಚಾರ ಸ್ಥಗಿತಗೊಂಡಿದ್ದ ಭಾರೀ ವಾಹನಗಳ ಸಂಚಾರವು ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆ ರಸ್ತೆಯಲ್ಲಿ ಇಂದಿನಿಂದ ಆರಂಭಗೊಂಡಿದೆ
ರಾಜ್ಯದ ಸುಮಾರು 25 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಮೇಲ್ಸೇತುವೆಯ ತಾಂತ್ರಿಕ ಸಮಸ್ಯೆಗಳು ನಿವಾರಿಸಿ ಲೋಪದೋಷಗಳನ್ನು ಸರಿಪಡಿಸಿರುವ ರಾಜ್ಯ ಹೆದ್ದಾರಿ ಪ್ರಾಧಿಕಾರ ಎಲ್ಲಾ ಬಗೆಯ ವಾಹನಗಳ ಸಂಚಾರಕ್ಕೆ ಹಸಿರುನಿಶಾನೆ ತೋರಿದ ಬೆನ್ನಲ್ಲೇ ಭಾರೀ ವಾಹನಗಳ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ.,
ಕಳೆದ ಎರಡು ವರ್ಷಗಳಿಂದ ಈ ಮಾರ್ಗದಲ್ಲಿ ಚಲಿಸುವ ವಾಹನ ಚಾಲಕರು ಹಾಗೂ ಪ್ರಯಾಣಿಕರು ಸರ್ವೀಸ್ ರಸ್ತೆಗೆ ಹೋಗಬೇಕಾಗಿತ್ತು. ಅದರಿಂದ ಸಂಚಾರ ದಟ್ಟಣೆಯಲ್ಲಿ ಸಿಲುಕಿ ಭಾರೀ ತೊಂದರೆ ಅನುಭವಿಸಿದ್ದು ನಿವಾರಣೆಯಾಗಿದೆ ಜಂಟಿ ಪೊಲೀಸ್ ಆಯುಕ್ತ(ಸಂಚಾರ) ಎಂ.ಎನ್ .ಅನುಚೇತ್ ತಿಳಿಸಿದ್ದಾರೆ
4.2 ಕಿ.ಮೀ ಉದ್ದದ ಮೇಲ್ಸೇತುವೆಯಲ್ಲಿ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದರಿಂದ ತುಮಕೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗುತ್ತಿತ್ತು. ಫ್ಲೇಓವರ್‌ನಲ್ಲಿ ಪ್ರಿಸ್ಟೈಡ್ ಕೇಬಲ್‌ಗಳ ಹಾಳಾದ ಹಿನ್ನಲೆಯಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಇದೀಗ ಹೊಸದಾಗಿ ಕೇಬಲ್‌ಗಳನ್ನು ಅಳವಡಿಸಿದ್ದು, ಎಲ್ಲಾ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.
ಮೇಲ್ಸೇತುವೆಯ ವಿಶೇಷ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಕಳೆದ ಜು.25 ರಿಂದ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ಭಾರೀ ವಾಹನಗಳ ಓಡಾಟವನ್ನು ನಿಷೇಧಿಸಲಾಗಿತ್ತು. ಜೊತೆಗೆ ಮೇಲ್ಸೇತುವೆ ಎಡ ಪಕ್ಕದಲ್ಲಿ ಗರಿಷ್ಠ 40 ಕಿ.ಮೀ ವೇಗದಲ್ಲಿ ಚಲಿಸುವಂತೆ ಹೆದ್ದಾರಿ ಅಧಿಕಾರಿಗಳು ಸೂಚಿಸಿದ್ದು, ಒಂದು ವೇಳೆ ನಿಯಮ ಮೀರಿದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಟ್ರಾಫಿಕ್ ಸಮಸ್ಯೆಯಲ್ಲಿ ಸಿಲುಕಿ ಹೈರಾಣರಾಗಿದ್ದ ದಿನನಿತ್ಯ ಸಂಚರಿಸುವ ಪ್ರಯಾಣಿಕರು ಹಾಗೂ ವಾಹನಗಳ ಚಾಲಕರು ನಿರಾಳವಾಗಿ ಫ್ಲೈಓವರ್ ಮೇಲೆ ವಾಹನಗಳನ್ನು ಚಲಾಯಿಸುತ್ತಿದ್ದ ದೃಶ್ಯಗಳು ಕಂಡುಬಂದವು.
Previous ArticleI.T.ಅಧಿಕಾರಿಗಳಂತೆ ಕಳ್ಳತನಕ್ಕೆ ಬಂದರು
Next Article ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ.ಸುರೇಶ್ ಕೆಂಡ.