Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಸೂಚನೆ
    Trending

    ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಸೂಚನೆ

    vartha chakraBy vartha chakraಆಗಷ್ಟ್ 2, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.2:
    ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ಪ್ರವಾಸೋದ್ಯಮ ಹೆಸರಲ್ಲಿ ತಲೆ ಎತ್ತಿರುವ ಅನಧಿಕೃತ ಹೋಂ ಸ್ಟೇ ಹಾಗೂ ರೆಸಾರ್ಟ್ ಗಳನ್ನು ತೆರವುಗೊಳಿಸಲು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
    ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಸಚಿವರು, ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು, ಮತ್ತು ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು 1 ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
    ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ನಿರ್ದೇಶಿಸಿದ್ದಾರೆ
    ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೂ ಎಚ್ಚರಿಕೆಯ ಗಂಟೆಯಾಗಿದ್ದು, ಪಶ್ಚಿಮ ಘಟ್ಟದ ಉಳಿವು ಹಿಂದೆಂಗಿಂತಲೂ ಇಂದು ಹೆಚ್ಚಾಗಿದೆ ಎಂದು ಹೇಳಿದ್ದಾರೆ.
    ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದೂ ತಮ್ಮ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.
    ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ ಎಂದು ಉಲ್ಲೇಖಿಸಿದ್ದು, ಚಾರಣಕ್ಕೂ ಕಡಿವಾಣ ಬೀಳುವ ಸಾಧ್ಯತೆ ಇದೆ.

    Verbattle
    Verbattle
    Verbattle
    Bangalore Congress Government Karnataka News Politics Trending ಉಡುಪಿ ಕಾಂಗ್ರೆಸ್ ಕಾನೂನು ಚುನಾವಣೆ ಮೈಸೂರು ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರದ ಸಂಘರ್ಷ.
    Next Article ಬೆಂಗಳೂರು ಪೊಲೀಸರಿಗೆ ಟೋಪಿ ಹಾಕುವ ಯತ್ನ.
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • Tbjxgr ರಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ಕೈ ನಲ್ಲಿದೆ ಸರ್ಕಾರ.
    • Tracymix ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.