ಬೆಂಗಳೂರು, ಸೆ.4:
ಇತ್ತೀಚೆಗೆ ಕೆಲವು ಕಡೆ ದೇವಾಲಯಗಳಲ್ಲಿ ನೀಡಿದ ಪ್ರಸಾದ ಸೇವಿಸಿ ಕೆಲವರು ಅಸ್ವಸ್ಥರಾದ ಘಟನೆ ನಡೆದಿರುವ ಬೆನ್ನಲ್ಲೇ ಇದೀಗ ಈ ವಾರಾಂತ್ಯದಿಂದ ಆರಂಭವಾಗಲಿರುವ ಗಣೇಶೋತ್ಸವದ ವೇಳೆ ಆಹಾರ ಪದಾರ್ಥ ಹಾಗೂ ಪ್ರಸಾದ ಸೇವೆಯ ಮೇಲೆ ಕಟ್ಟೆಚ್ಚರ ವಹಿಸಲಾಗಿದೆ.
ಸಾರ್ವಜನಿಕ ಗಣೇಶೋತ್ಸವದ ಸಮಯದಲ್ಲಿ ನೀಡಲಾಗುವ ಪ್ರಸಾದದ ಗುಣಮಟ್ಟದ ಕುರಿತಂತೆ
ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಸಾರ್ವಜನಿಕ ಗಣೇಶೋತ್ಸವದ ವೇಳೆ ನೀಡಲಾಗುವ ಪ್ರಸಾದದ ಗುಣಮಟ್ಟದ ಬಗ್ಗೆ FSSAI ನಿಂದ ಅನುಮತಿ ಪಡೆಯಬೇಕು . ಈ ರೀತಿಯ ಅನುಮತಿ ಪಡೆಯದೆ ಆಹಾರ ನೀಡಿದರೆ ಸಂಘಟಕರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಗಣೇಶೋತ್ಸವದ ವೇಳೆ ಪೆಂಡಾಲ್ ನ ಸುತ್ತಮುತ್ತಲಿನ ಪ್ರದೇಶ ಮತ್ತು ಕುಡಿಯುವ ನೀರಿನ ವಿಷಯದಲ್ಲಿ ಶುಚಿತ್ವ ಕಾಪಾಡಬೇಕು. FSSAIನಿಂದ ಅನುಮತಿ ಪಡೆಯದೇ ಪ್ರಸಾದ ವಿತರಣೆ ಮಾಡಬೇಕು ಎಂದು ಸೂಚಿಸಲಾಗಿದೆ.
Previous Articleಸಾರ್ವಜನಿಕ ಗಣೇಶೋತ್ಸವಕ್ಕೆ ಮಾರ್ಗಸೂಚಿ
Next Article ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ.?