ಬೆಂಗಳೂರು,ಸೆ. 20-
ಕಲಿಯುಗದ ಆರಾಧ್ಯ ದೈವ ತಿರುಪತಿ ತಿಮ್ಮಪ್ಪನ ಪ್ರಸಾದ ಭಕ್ತರ ಪ್ರೀತಿಯ ಲಡ್ಡುವಿನಲ್ಲಿ ಪ್ರಾಣಿಜನ್ಯ ಕೊಬ್ಬಿನ ಅಂಶ ಪತ್ತೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಾಲಯಗಳಿಗೆ ತುಪ್ಪ ಬಳಕೆ ಕುರಿತು ಸುತ್ತೋಲೆ ಹೊರಡಿಸಿದೆ.
ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ ರೂಪದಲ್ಲಿ ನೀಡಲಾಗುವ ಲಡ್ಡು ಸೇರಿದಂತೆ ಇತರೆ ಉತ್ಪನ್ನಗಳ ತಯಾರಿಕೆಗೆ ಕೆಎಂಎಫ್ ನ ನಂದಿನಿ ತುಪ್ಪ ಮಾತ್ರ ಬಳಸುವಂತೆ ಸೂಚಿಸಿದೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ.
ಹಾಗೆಯೇ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ತಿಳಿಸಿದೆ.
Previous Articleತಿರುಪತಿ ಲಡ್ಡು ಗೆ ಕೊಬ್ಬು ಸೇರಿದ್ದು ಹೇಗೆ ಗೊತ್ತಾ.
Next Article ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.