ಥಾಮಸ್ ಕಪ್ ಗೆದ್ದ ತಂಡದ ಕನ್ನಡಿಗ ಆಟಗಾರ ಲಕ್ಷ್ಯ ಸೇನ್ ಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ ನೀಡಿ ಸನ್ಮಾನಿಸಿದ್ದಾರೆ.
ಈ ಸಂದರ್ಭದಲ್ಲಿ ಕ್ರೀಡಾ ಸಚಿವ ಡಾ. ನಾರಾಯಣಗೌಡ ಹಾಗೂ ಇತರರು ಉಪಸ್ಥಿತರಿದ್ದರು.
ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿರುವ ಕನ್ನಡದ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಅವರಿಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ.ಗಳನ್ನು ಬಹುಮಾನವನ್ನಾಗಿ ಘೋಷಿಸಿತ್ತು. ಕಂಠೀರವ ಸ್ಟೇಡಿಯಂನಲ್ಲಿ ಮಿನಿ ಒಲಿಂಪಿಕ್ಸ್ ಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನ್ನಡಿಗ ಲಕ್ಷ್ಯ ಸೇನ್ ಅವರಿಗೆ ಬಹುಮಾನ ಘೋಷಿಸಿದ್ದರು