Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಗೆ ರಾಹುಲ್ ಗಾಂಧಿ ಕೊಟ್ಟ ಸೂಚನೆ ‌
    Trending

    ಸಿಎಂ ಗೆ ರಾಹುಲ್ ಗಾಂಧಿ ಕೊಟ್ಟ ಸೂಚನೆ ‌

    vartha chakraBy vartha chakraಸೆಪ್ಟೆಂಬರ್ 26, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.26-
    ನಿವೇಶನ ಹಂಚಿಕೆ ಅಕ್ರಮ ಆರೋಪದ ಸುಳಿಗೆ ಸಿಲುಕಿ ತತ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮಗೆ ಎದುರಾಗಿರುವ ಕಂಟಕ ನಿವಾರಣೆಗೆ ಕಾನೂನು ಹೋರಾಟ ನಡೆಸಲು ಸಿದ್ಧತೆ ನಡೆಸಿರುವ ಬೆನ್ನೆಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ ಕಿವಿಮಾತು ಸಿಎಂ ಅವರ ಆತ್ಮಬಲವನ್ನು ಹೆಚ್ಚುವಂತೆ ಮಾಡಿದೆ.
    ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿದಾಗ ರಾಹುಲ್ ಗಾಂಧಿ ಕಳೆದೊಂದು ವಾರದಿಂದ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ರಾಜಕೀಯ ಬೆಳವಣಿಗೆಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯ ಅಕ್ರಮ ಆರೋಪದ ಹೆಸರಲ್ಲಿ ನಡೆದಿರುವ ವಿದ್ಯಮಾನಗಳು ಕೋರ್ಟ್ ನೀಡಿರುವ ತೀರ್ಪು ಹಾಗೂ ಕಾಂಗ್ರೆಸ್ ನಾಯಕರ ನಡವಳಿಕೆ ಕುರಿತಾಗಿ ಮಾಹಿತಿ ಪಡೆದುಕೊಂಡ ರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ಎದೆಗುಂದದೆ ಮುನ್ನಡೆಯುವಂತೆ ಸಲಹೆ ಮಾಡಿದ್ದಾರೆ ಎಂದು ಗೊತ್ತಾಗಿದೆ.
    ನಿವೇಶನ ಹಂಚಿಕೆ ಆಕ್ರಮ ಎನ್ನುವುದು ಸಂಪೂರ್ಣ ರಾಜಕೀಯ ಪ್ರೇರಿತ ಬೆಳವಣಿಗೆಯಾಗಿದೆ ರಾಜಭವನ ಮತ್ತು ನ್ಯಾಯಾಂಗವನ್ನು ಬಳಸಿಕೊಂಡು ನಿಮ್ಮ ವರ್ಚಸ್ಸಿಗೆ ಧಕ್ಕೆ ತರಲು ಬಿಜೆಪಿ ಮತ್ತು ಜೆಡಿಎಸ್ ವ್ಯವಸ್ಥಿತ ಪಿತೂರಿ ಮಾಡಿದ್ದು ಇದರ ಬಗ್ಗೆ ತಲೆಕೆಡಿಸಿಕೊಳ್ಳಬಾರದು ಎಂದು ಸಲಹೆ ಮಾಡಿರುವುದಾಗಿ ಮೂಲಗಳು ತಿಳಿಸಿವೆ.
    ಈ ವಿದ್ಯಮಾನಗಳ ನಂತರ ನೀವು ಇನ್ನೂ ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ತಕ್ಷಣವೇ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಆಡಳಿತ ಯಂತ್ರಕ್ಕೆ ಚುರುಕು ನೀಡುವ ಜೊತೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಮೂಡಿಸಬೇಕು ಪಕ್ಷ ಸಂಘಟನೆ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳುವಂತೆ ಸೂಚಿಸಿದರು ಎಂದು ಗೊತ್ತಾಗಿದೆ.
    ಸರ್ಕಾರದ ಮತ್ತು ಖಾಸಗಿ ಸಭೆ ಸಮಾರಂಭಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಯಾವುದೇ ಕಾರಣಕ್ಕೂ ಇಂತಹ ಸಭೆಗಳನ್ನು ಆಯೋಜಿಸಿ ಅವುಗಳನ್ನು ಮುಂದೂಡಬಾರದು ಪ್ರತಿನಿತ್ಯ ಕನಿಷ್ಠ ಮೂರು ಸಭೆಗಳಲ್ಲಾದರೂ ತೊಡಗಬೇಕು ಈ ಮೂಲಕ ಇಂತಹ ಆರೋಪಗಳಿಂದ ತಾವು ವಿಚಲಿತರಾಗಿಲ್ಲ ಎಂಬ ಸಂದೇಶ ರವಾನಿಸುವಂತೆ ಕಿವಿ ಮಾತು ಹೇಳಿದರೆಂದು ಉನ್ನತ ಮೂಲಗಳು ತಿಳಿಸಿವೆ.
    ರಾಜ್ಯದಲ್ಲಿ ಭರಾಟೆ ಪ್ರವಾಸ ಕೈಗೊಳ್ಳುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಅಭಿವೃದ್ಧಿ ವಿರೋಧಿಗಳಾಗಿದ್ದಾರೆ ಹಿಂದುಳಿದ ವರ್ಗಗಳ ವಿರೋಧಿ ಎಂಬುದನ್ನು ಮನದಟ್ಟು ಮಾಡಬೇಕು ತಮ್ಮ ವಿರುದ್ಧ ಎಣೆದಿರುವ ರಾಜಕೀಯ ಪಿತೂರಿಯ ಬಗ್ಗೆ ಎಳೆ ಎಳೆಯಾಗಿ ವಿವರಿಸುವ ಮೂಲಕ ಜನತೆ ಈ ಪಕ್ಷಗಳ ವಿರುದ್ಧ ತಿರುಗಿ ಬೀಳುವಂತೆ ಮಾಡಬೇಕು ಎಂದು ಸೂಚಿಸಿದ್ದಾರೆ.
    ಆಡಳಿತ ಯಂತ್ರಕ್ಕೆ ಚುರುಕು ನೋಡುವ ದೃಷ್ಟಿಯಿಂದ ಜಿಲ್ಲಾವಾರು ಪ್ರಗತಿ ಪರಿಶೀಲನೆ, ಜನಸ್ಪಂದನ ಸಭೆಯ ಜೊತೆಗೆ ಕಾರ್ಯಕರ್ತರ ಸಮಾವೇಶಗಳನ್ನು ನಡೆಸುವ ಮೂಲಕ ಇನ್ನಷ್ಟು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಕಿವಿ ಮಾತು ಹೇಳಿರುವುದಾಗಿ ಮುಖ್ಯಮಂತ್ರಿಗಳ ಆಪ್ತ ವಲಯಗಳು ತಿಳಿಸಿವೆ.
    ತಮ್ಮ ವಿರುದ್ಧ ನಡೆದಿರುವ ರಾಜಕೀಯ ಪಿತೂರಿಯ ಬಗ್ಗೆ ಹೈಕಮಾಂಡ್ ಗೆ ಸ್ಪಷ್ಟ ಅರಿವಿದೆ ಹೀಗಾಗಿ ಯಾವುದೇ ಕಾರಣಕ್ಕೂ ಹೈಕಮಾಂಡ್ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಬಾರದು ಎಂದು ಹೇಳಿದ್ದಾರೆನ್ನಲಾಗಿದೆ

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು ಜೆಡಿಎಸ್ ನ್ಯಾಯ ಮೈಸೂರು ರಾಜಕೀಯ ರಾಹುಲ್ ಗಾಂಧಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleತನಿಖಾಧಿಕಾರಿಯೇ‌ ಸಸ್ಪೆಂಡ್.
    Next Article CM ವಿರುದ್ಧ ತನಿಖೆ ಹೇಗೆ..?
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    1 ಟಿಪ್ಪಣಿ

    1. Yvqsqc on ಫೆಬ್ರವರಿ 12, 2026 1:49 ಅಪರಾಹ್ನ

      betmgm North Dakota betmgm promo mgm sports app

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • acourtofmistandfurCow ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Tiiibg ರಲ್ಲಿ ತಾರತಮ್ಯ ಮಾಡಿದರೆ ಜೋಕೆ- ರಾಮಲಿಂಗಾರೆಡ್ಡಿ ಎಚ್ಚರಿಕೆ | Ramalinga Reddy
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.