Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಪೊಲೀಸ್ ಸರ್ಪಗಾವಲು.
    ಅಂತಾರಾಷ್ಟ್ರೀಯ

    ರಾಜ್ಯದಲ್ಲಿ ಪೊಲೀಸ್ ಸರ್ಪಗಾವಲು.

    vartha chakraBy vartha chakraಅಕ್ಟೋಬರ್ 9, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.9 :
    ರಾಜ್ಯದಲ್ಲಿ ವಿಚ್ಛಿದ್ರಕಾರಿ ಶಕ್ತಿಗಳು ದುಷ್ಕೃತ್ಯದ ಮೂಲಕ ಶಾಂತಿ ಭಂಗಕ್ಕೆ ಯತ್ನ ನಡೆಸಿದ್ದು ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತದಳ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
    ಬೆಂಗಳೂರು ಹೊರ ವಲಯದ ಜಿಗಣಿ ಮತ್ತು ನೆಲಮಂಗಲದಲ್ಲಿ ಅಡಗಿದ್ದ ಪಾಕಿಸ್ತಾನಿ ಪ್ರಜೆಗಳ‌ ಬಂಧನದ ಬೆನ್ನಲ್ಲೇ ವ್ಯಾಪಕ ಮುಂಜಾಗ್ರತೆ ವಹಿಸುವಂತೆ ಎಚ್ಚರಿಕೆ ಸಂದೇಶ ರವಾನೆಯಾಗಿದೆ. ಆಯುಧ ಪೂಜೆ ವಿಜಯದಶಮಿ ಸೇರಿದಂತೆ ಹಲವಾರು ಹಬ್ಬ ಆಚರಣೆಗಳು ಮುಂದಿನ ಒಂದೂವರೆ ತಿಂಗಳು ಕಾಲ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಕೆಲವು ಸಂಘಟನೆಗಳು ಸಂಚು ಮಾಡಿವೆ ಎಂದು ಗುಪ್ತದಳ ತನ್ನ ಸಂದೇಶದಲ್ಲಿ ತಿಳಿಸಿದೆ.
    ಮೈಸೂರಿನ ಐತಿಹಾಸಿಕ ಜಂಬೂಸವಾರಿ ಮಡಿಕೇರಿಯ ದಸರಾ ಚಿತ್ರದುರ್ಗದ ದಸರಾ ಸರಿ ಮತ್ತೆ ರಾಜ್ಯದ ವಿವಿಧ ಕಡೆ ನಡೆಯುತ್ತಿರುವ ಧಾರ್ಮಿಕ ಆಚರಣೆಗಳ ಸಮಯದಲ್ಲಿ ದುಷ್ಕೃತ್ಯದ ಮೂಲಕ ಶಾಂತಿ ಭಂಗಕ್ಕೆ ಸಂಚು ನಡೆದಿದೆ. ಕೆಲವು ವಿಚ್ಛಿದ್ರಕಾರಕ ಶಕ್ತಿಗಳ ಜೊತೆ ನಂಟು ಹೊಂದಿರುವ ವ್ಯಕ್ತಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ತಲೆಮರೆಸಿಕೊಂಡಿದ್ದಾರೆ ಈ ಹಿನ್ನೆಲೆಯಲ್ಲಿ ಅಪರಿಚಿತರ ಚಲನವಲನಗಳ ಮೇಲೆ ತೀವ್ರ ನಿಗಾ ವಹಿಸುವಂತೆ ಗುಪ್ತದಳ ಸಂದೇಶದಲ್ಲಿ ತಿಳಿಸಿರುವುದಾಗಿ ಗೊತ್ತಾಗಿದೆ.
    ಕೇಂದ್ರ ಗುಪ್ತದಳದ ಎಚ್ಚರಿಕೆ ಸಂದೇಶದ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವ್ಯಾಪಕ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಿದ್ದಾರೆ.
    ಈ ಹಿನ್ನೆಲೆಯಲ್ಲಿ ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳ ಮೇಲೆ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿದೆ.
    ರಾಜ್ಯ ಎಲ್ಲಾ ಹೋಟೆಲ್ ಗಳಲ್ಲಿ ಕಳೆದ 15 ದಿನಗಳಿಂದ ಇಲ್ಲಿಯವರೆಗೆ ಕೊಠಡಿ ಪಡೆದಿರುವವರ ವಿವರಗಳನ್ನು ನೀಡುವಂತೆ ಸೂಚಿಸಿದ್ದು ಇಂದಿನಿಂದ ಮುಂದಿನ ಹದಿನೈದು ದಿನಗಳ ಕಾಲ ಹೋಟೆಲ್ ಗಳಲ್ಲಿ ಕೊಠಡಿ ಪಡೆಯುವವರ ವಿವರಗಳನ್ನು ಕಡ್ಡಾಯವಾಗಿ ಸಮೀಪದ ಪೊಲೀಸ್ ಠಾಣೆಗೆ ನೀಡಬೇಕು ಎಂದು ತಾಕೀತು ಮಾಡಲಾಗಿದೆ.
    ವಿಮಾನ ನಿಲ್ದಾಣ ಬಸ್ಸು ಮತ್ತು ರೈಲು ನಿಲ್ದಾಣಗಳಲ್ಲಿ ಭದ್ರತೆಯ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ ಐತಿಹಾಸಿಕ ಕಟ್ಟಡಗಳು ಅಣೆಕಟ್ಟು ಮತ್ತು ಜನ ನಿಬಿಡ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

    Bangalore crime Government Karnataka ಅಪರಾಧ ಸುದ್ದಿ ಉಗ್ರ ಕಾನೂನು ಚಿತ್ರದುರ್ಗ ಧಾರ್ಮಿಕ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleನೌಕಾನೆಲೆ ಬಳಿ ಹಾರಾಡಿದ ದ್ರೋನ್.
    Next Article ಇಹಲೋಕ ತ್ಯಜಿಸಿದ ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_ctSn ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • rylonnie shtori na plastikovie okna s elektroprivodom_zvSn ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    • elektrokarniz kypit_snsl ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe