Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 2024 ರ ನೊಬೆಲ್ ಪ್ರಶಸ್ತಿ ವಿಜೇತರು ಇವರೇ ನೋಡಿ
    ಅಂತಾರಾಷ್ಟ್ರೀಯ

    2024 ರ ನೊಬೆಲ್ ಪ್ರಶಸ್ತಿ ವಿಜೇತರು ಇವರೇ ನೋಡಿ

    vartha chakraBy vartha chakraಅಕ್ಟೋಬರ್ 15, 20241 ಟಿಪ್ಪಣಿ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನೊಬೆಲ್ ಪ್ರಶಸ್ತಿ ಜಗತ್ತಿನ ಅತ್ಯುನ್ನತ ಪ್ರಶಸ್ತಿ ಎಂದೇ ಖ್ಯಾತಿ ಪಡೆದಿದ್ದು, ಆಲ್ಫ್ರೆಡ್ ನೊಬೆಲ್ ಎಂಬ ಸ್ವೀಡಿಶ್ ವಿಜ್ಞಾನಿ ಮತ್ತು ಉದ್ಯಮಿಯ ಸಾವಿನ ನಂತರ ಅವರ ಅಭಿಲಾಷೆಯಂತೆ ಭೌತ ವಿಜ್ಞಾನ, ರಾಸಾಯನಿಕ ವಿಜ್ಞಾನ, ಔಷಧ ವಿಜ್ಞಾನ, ಸಾಹಿತ್ಯ ಮತ್ತು ಶಾಂತಿ ಈ ಐದು ವಿಭಾಗಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೊಬೆಲ್ ಬಹುಮಾನ ನೀಡುತ್ತಾ ಬರಲಾಗಿದೆ.

    1969ರಿಂದ ಸ್ವೀಡನ್ ನ ಸ್ವೆರಿಗೆಸ್ ರಿಕ್ಸ್ ಬ್ಯಾಂಕ್ ಆರ್ಥಿಕ ವಿಜ್ಞಾನ ವಿಭಾಗದಲ್ಲೂ ನೊಬೆಲ್ ಫೌಂಡೇಶನ್ ನ ಅನುಮೋದನೆ ಇರುವ ಸ್ವೆರಿಗೆಸ್ ರಿಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ನೀಡುತ್ತಿದ್ದು ಇದು ಅಧಿಕೃತ ನೊಬೆಲ್ ಪುರಸ್ಕಾರ ಎನಿಸುವುದಿಲ್ಲ. ಪರೋಕ್ಷ ನೊಬೆಲ್ ಪ್ರಶಸ್ತಿಯಾಗಿದೆ.

    ಈ ಪ್ರಶಸ್ತಿಗಳನ್ನು 1900 ರಿಂದ ನೀಡಲಾಗಿದ್ದು  ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಸಾಧಕರ ನಾಮ ನಿರ್ದೇಶನ ಮಾಡಲು ಅವಕಾಶವಿದೆ. ಸ್ವೀಡನ್ ಮತ್ತು ನಾರ್ವೆಯಲ್ಲಿ ಈ ಬಹುಮಾನಗಳನ್ನು ನೀಡಲಾಗುತ್ತದೆ. ಈ ಪ್ರಶಸ್ತಿಗೆ ಆಯ್ಕೆಯಾದವರಿಗೆ ನೊಬೆಲ್ ಪರಿದೋಷಕ ಮತ್ತು (11 SEK, ಸ್ವೀಡನ್ ಹಣ) ಭಾರತದಲ್ಲಿ 8.1 ಕೋಟಿ ಯನ್ನು ಬಹುಮಾನವಾಗಿ ನೀಡಲಾಗುತ್ತದೆ.

    ಅದರಂತೆ ಈ ವರ್ಷವೂ ಪ್ರಶಸ್ತಿ ಸಾಧಕರನ್ನು ಘೋಷಣೆ ಮಾಡಿದ್ದೂ ಅಕ್ಟೋಬರ್,7 ರಂದು ಶರೀರಶಾಸ್ತ್ರ ಅಥವಾ ವೈದ್ಯಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು, ಅ,8 ರಂದು ಭೌತ ಶಾಸ್ತ್ರ ಅ,9 ರಂದು ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿ, ಸಾಹಿತ್ಯ ಶಾಸ್ತ್ರ ಪ್ರಶಸ್ತಿಯನ್ನು ಅ,10 ರಂದು ಶಾಂತಿ ಪ್ರಶಸ್ತಿಯನ್ನು 11,ರಂದು ಘೋಷಣೆ ಮಾಡಿದ್ದೂ ಆರ್ಥಿಕ ವಿಜ್ಞಾನ ಶಾಸ್ತ್ರ ಪ್ರಶಸ್ತಿಯನ್ನು ಅ,14 ರಂದು ಘೋಷಣೆ ಮಾಡಲಾಗಿದೆ.

    2024 ರ ನೊಬೆಲ್ ಪ್ರಶಸ್ತಿ ಸಾಧಕರು ಈ ಕೆಳಗಿನಂತಿದ್ದು

    1. ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ – ಜಾನ್ ಹಾಪ್‌ಫೀಲ್ಡ್ ಮತ್ತು ಜೆಫ್ರಿ E. ಹಿಂಟನ್ ಅವರ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್​​ ನಡೆಸಿದ ಅಧ್ಯಯನಕ್ಕಾಗಿ 2024ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಸಿಕ್ಕಿದೆ. ನರಗಳ ಜಾಲದಲ್ಲಿ ಕೃತಕ ಯಂತ್ರಗಳನ್ನು ಸಕ್ರಿಯಗೊಳಿಸುವ ಬಗ್ಗೆ ನಡೆಸಿದ ಸಂಶೋಧನೆಗಳು ಮತ್ತು ಆವಿಷ್ಕಾರಕ್ಕಾಗಿ ಇವರಿಬ್ಬರಿಗೆ ನೊಬೆಲ್​​ ಪ್ರಶಸ್ತಿಯನ್ನು ನೀಡಲಾಗಿದೆ.
    2. ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿ – ಡೇವಿಡ್ ಬೇಕರ್ , ಡೆಮಿಸ್ ಹಸ್ಸಾಬಿಸ್ ಮತ್ತು ಜಾನ್ ಎಂ. ಜಂಪರ್ ಅವರಿಗೆ 2024ರ ರಸಾಯನಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ಲಭಿಸಿದೆ. ಡೇವಿಡ್ ಬೇಕರ್ ಅವರಿಗೆ ಕಂಪ್ಯೂಟೇಶನಲ್ ಪ್ರೊಟೀನ್ ವಿನ್ಯಾಸಕ್ಕೆ ಹಾಗೂ ಡೆಮಿಸ್ ಹಸ್ಸಾಬಿಸ್ ಮತ್ತು ಜಾನ್ ಎಂ. ಜಂಪರ್ ಅವರಿಗೆ ಭವಿಷ್ಯದಲ್ಲಿ ಪ್ರೋಟೀನ್ ರಚನೆಯ ಅಧ್ಯಯನಕ್ಕಾಗಿ ಈ ನೊಬೆಲ್​​ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕಂಪ್ಯೂಟಿಂಗ್ ಮತ್ತು ಕೃತಕ ಬುದ್ಧಿಮತ್ತೆಯ ಮೂಲಕ ಪ್ರೋಟೀನ್‌ ರಹಸ್ಯಗಳನ್ನು ತಿಳಿಸುವ ಬಗ್ಗೆ ಈ ಅಧ್ಯಯನ ಹೇಳುತ್ತದೆ.
    3. ಶರೀರಶಾಸ್ತ್ರ ಅಥವಾ ವೈದ್ಯಶಾಸ್ತ್ರ ನೊಬೆಲ್ ಪ್ರಶಸ್ತಿ – ಮೈಕ್ರೊ ಆರ್‌ ಎನ್‌ ಎ ಮತ್ತು ಅದರ ನಂತರದ ಪ್ರತಿಲೇಖನ ಜೀನ್ ನಿಯಂತ್ರಣದಲ್ಲಿ ಮೈಕ್ರೊ ಆರ್‌ ಎನ್‌ ಎ ಪಾತ್ರದ ಅಧ್ಯಯನಕ್ಕಾಗಿ ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್ ಅವರಿಗೆ ಶರೀರಶಾಸ್ತ್ರ ಅಥವಾ ವೈದ್ಯಶಾಸ್ತ್ರಕ್ಕೆ 2024ರ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ
    4. ಸಾಹಿತ್ಯ ಕ್ಷೇತ್ರ ನೊಬೆಲ್ ಪ್ರಶಸ್ತಿ – ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಾಂಗ್ ಅವರಿಗೆ ಇಂದು (ಅಕ್ಟೋಬರ್ 10) ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಯಿತು. ಕವಯಿತ್ರಿಯಾಗಿದ್ದ ಹಾನ್ ಕಾಂಗ್ ಬಳಿಕ ಕಾದಂಬರಿಗಾರ್ತಿಯಾದರು. ಹಲವು ಕಥಾ ಸಂಕಲಗಳನ್ನು ಹೊರತಂದಿರುವ ಇವರು ಸಾಹಿತ್ಯ ಕ್ಷೇತ್ರದಲ್ಲಿ ಇತ್ತೀಚೆಗೆ ಬಹಳ ಹೆಸರು ಮಾಡುತ್ತಿದ್ದಾರೆ.
    5. ಶಾಂತಿ ನೊಬೆಲ್​​ ಪ್ರಶಸ್ತಿ – ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್​​ ಪ್ರಶಸ್ತಿ, ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಈ ಬಾರಿ 2024ನೇ ಶಾಂತಿ ನೊಬೆಲ್​​ ಪ್ರಶಸ್ತಿ ಬಂದಿದೆ. ಪರಮಾಣು ಶಸ್ತ್ರಾಸ್ತ್ರಗಳ ಮುಕ್ತ ಜಗತ್ತನ್ನು ಸಾಧಿಸುವ ಪ್ರಯತ್ನ ಹಾಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಮತ್ತೆ ಎಂದಿಗೂ ಬಳಸಬಾರದು ಎಂದು ಸಾಕ್ಷಿ ಸಾಕ್ಷ್ಯದ ಮೂಲಕ ಪ್ರದರ್ಶಿಸುತ್ತಿರುವುದಕ್ಕೆ ಪ್ರಶಸ್ತಿ ನೀಡಿಲಾಗಿದೆ.
    6. ಆರ್ಥಿಕ ವಿಜ್ಞಾನ ನೊಬೆಲ್​​ ಪ್ರಶಸ್ತಿ – ಡೆರೋನ್ ಅಸಿಮೊಗ್ಲು, ಸೈಮನ್ ಜಾನ್ಸನ್, ಜೇಮ್ಸ್ ರಾಬಿನ್ಸನ್ ಎಂಬ ಅಮೆರಿಕನ್ ಆರ್ಥಿಕ ವಿಜ್ಞಾನಿಗಳು 2024ರ ಸಾಲಿನ ಸ್ವೆರಿಜೆಸ್ ರಿಕ್ಸ್ಬ್ಯಾಂಕ್ ಪ್ರಶಸ್ತಿ ಮತ್ತು ಬಹುಮಾನವನ್ನು ಪಡೆದಿದ್ದಾರೆ. ಈ ಮೂವರು ಆರ್ಥಿಕ ತಜ್ಞರು, ಸಾಮಾಜಿಕ ಸಂಸ್ಥೆಗಳು ಹೇಗೆ ರಚನೆ ಆಗುತ್ತವೆ, ಹಾಗೂ ಅವುಗಳಿಂದ ಪ್ರಗತಿ ಮೇಲೆ ಏನು ಪರಿಣಾಮ ಎಂಬುದನ್ನು ತಮ್ಮ ಅಧ್ಯಯನಗಳಿಂದ ವಿವರಿಸಿದ್ದಾರೆ. ಇವರ ಈ ಸಾಧನೆಗಾಗಿ ಪರೋಕ್ಷ ನೊಬೆಲ್ ಪುರಸ್ಕಾರ ಲಭಿಸಿದೆ.

    Verbattle
    Verbattle
    Verbattle
    chemistry economic sciences. literature narve nobel price peace physics physiology or medicine sweden ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರೈಲ್ವೆ ಕಾಮಗಾರಿಯಿಂದ ಒಂದು ವಾರಗಳ ಕಾಲ ರಾಜ್ಯದ ಕೆಲ ರೈಲು ಸಂಚಾರದಲ್ಲಿ ಬದಲಾವಣೆ
    Next Article ಉಂಡ ಮನೆಗೆ ಕನ್ನ ಹಾಕಲಾಗುತ್ತಿದ್ದ ಖದೀಮರು.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    1 ಟಿಪ್ಪಣಿ

    1. Cdpawp on ಫೆಬ್ರವರಿ 13, 2026 10:15 ಫೂರ್ವಾಹ್ನ

      mgm betting app promo betmgm-play betmgm New Mexico

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Lozcry ರಲ್ಲಿ ಧಾರ್ಮಿಕ ಸಂಸ್ಥೆಯ ಆಡಳಿತ ಮಂಡಳಿಯಾದ ಕೇಂದ್ರ ಸರ್ಕಾರ | HC Mahadevappa
    • Ramiroacity ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.