ಬೆಂಗಳೂರು,ಅ.19:
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬದ ವಿರುದ್ಧ ಸಮರಸಾರಿ ಬಿಜೆಪಿಗೆ ಗುಡ್ ಬೈ ಹೇಳಿರುವ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಇದೀಗ ದಲಿತ ಮತ್ತು ಹಿಂದುಳಿದ ವರ್ಗಗಳ ಸಂಘಟನೆಗೆ ಮುಂದಾಗಿದ್ದಾರೆ.
ಈ ಹಿಂದೆ ರಾಯಣ್ಣ ಬ್ರಿಗೇಡ್ ಮಾಡಿ ಯಡಿಯೂರಪ್ಪ ಕುಟುಂಬಕ್ಕೆ ಸೆಡ್ಡು ಹೊಡೆದಿದ್ದ ಅವರು ಇದೀಗ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟಿಸಲು ಮುಂದಾಗಿದ್ದಾರೆ ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿರುವ ಅವರು ನಾಳೆ ಬಾಗಲಕೋಟೆಯಲ್ಲಿ ಪ್ರಮುಖ ನಾಯಕರ ಸಭೆ ಕರೆದಿದ್ದಾರೆ.
ದಲಿತ ಮತ್ತು ಹಿಂದುಳಿದ ವರ್ಗಗಳ ಮಠಾಧೀಶರ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದ್ದು ಬಿಜೆಪಿಯ ಎಲ್ಲಾ ಅಸಮಾಧಾನ ಗೊಂಡ ನಾಯಕರನ್ನು ಸಮಾವೇಶಕ್ಕೆ ಆಹ್ವಾನಿಸಿದ್ದಾರೆ.
ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದ ವಿರುಪಾಕ್ಷಪ್ಪ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಮಾಜಿ ಶಾಸಕ ರಘುಪತಿ ಭಟ್ ಸೇರಿದಂತೆ ಹಲವು ಪ್ರಮುಖ ನಾಯಕರ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದ್ದು ಸದ್ಯದಲ್ಲೇ ಬೆಂಗಳೂರಿನಲ್ಲಿ ದೊಡ್ಡ ಸಮಾವೇಶ ನಡೆಸಲು ತೀರ್ಮಾನಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ನಿರ್ಗಮಿಸುವವರಿಗೆ ತಾವು ಬಿಜೆಪಿ ಸೇರುವುದಿಲ್ಲ ಎಂದು ಘೋಷಿಸಿರುವ ಅವರು ರಾಷ್ಟ್ರಭಕ್ತರ ಹೆಸರಿನಲ್ಲಿ ತಮ್ಮ ನೂತನ ಬ್ರಿಗೇಡ್ ಸಂಘಟಿಸುವುದಾಗಿ ಪ್ರಕಟಿಸಿದ್ದಾರೆ.
Previous Articleಬೆಂಗಳೂರಲ್ಲಿ Traffic jam ಕಡಿಮೆ ಮಾಡಲು ಏನೆಲ್ಲಾ ಕಸರತ್ತು.
Next Article ವಾಮಾಚಾರಕ್ಕೆ ವ್ಯಕ್ತಿ ಬಲಿ ಕೊಟ್ಟ ಪಾಪಿಗಳು.