ಹಾಸನ:
ಭೀಕರ ರಸ್ತೆ ಅಪಘಾತ ಪ್ರತಿಭಾವಂತ ಐಪಿಎಸ್ ಅಧಿಕಾರಿಯನ್ನು ಬಲಿ ತೆಗೆದುಕೊಂಡಿದೆ. ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಪೊಲೀಸ್ ತರಬೇತಿ ಮುಗಿಸಿ ಮೊದಲ ಕೆಲಸಕ್ಕೆ ನಿಯೋಜನೆಯ ಸಂಭ್ರಮದಲ್ಲಿ ತೆರಳುತ್ತಿದ್ದ ಯುವ ಅಧಿಕಾರಿ ಹರ್ಷವರ್ದನ್ ಕೆಲಸಕ್ಕೆ ಸೇರುವ ಮುನ್ನವೇ ಮರಳಿ ಬಾರದ ಲೋಕಕ್ಕೆ ಪಯಣಿಸಿದ್ದಾರೆ
ಹರ್ಷವರ್ದನ್ ಅವರು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದರು. ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಯಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.
ಹರ್ಷವರ್ದನ್ ಅವರು ಮೈಸೂರಿನಿಂದ ಹೊಳೆನರಸೀಪುರ ಮಾರ್ಗವಾಗಿ ಜೀಪ್‌ನಲ್ಲಿ ಹಾಸನ ನಗರಕ್ಕೆ ಬರುತ್ತಿದ್ದರು. ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಎನ್ನುವಷ್ಟರಲ್ಲಿ ಕಿತ್ತಾನೆಗಡಿ ಬಳಿ ಜೀಪ್‌ನ ಟಯರ್ ಸ್ಫೋಟಗೊಂಡಿದೆ.
ಈ ವೇಳೆ ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದ್ದು, ಐಪಿಎಸ್ ಅಧಿಕಾರಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು. ಅಪಘಾತದಲ್ಲಿ ಚಾಲಕ ಮಂಜೇಗೌಡ ಎಂಬವರಿಗೂ ಗಾಯಗಳಾಗಿವೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಧಿಕಾರಿ ಮತ್ತು ಚಾಲಕನನ್ನು 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.
ಬಿಹಾರ ಮೂಲದ ಹರ್ಷವರ್ಧನ್ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಎಂಜಿನಿಯರಿಂಗ್ ಪದವಿ ಮಾಡಿದ್ದರು. 2022-23 ರ ಐಪಿಎಸ್ ಬ್ಯಾಚ್‌ನಲ್ಲಿ ತೇರ್ಗಡೆ ಹೊಂದಿ ಕರ್ನಾಟಕ ಕೇಡರ್‌ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು. ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ತರಭೇತಿ ಪೂರ್ಣಗೊಳಿಸಿದ ಅವರು ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಕೆಲಸದ ವರದಿ ಮಾಡಿಕೊಳ್ಳಲು ಬರುತ್ತಿದ್ದರು.ಈ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.
Previous Articleಹೊಸ ದಾಖಲೆ ಬರೆದ BBMP.
Next Article ಯತ್ನಾಳ್ ಅವರದ್ದು ಕುಟುಂಬದ ವಿರುದ್ಧ ಹೋರಾಟವಂತೆ.
1 ಟಿಪ್ಪಣಿ
Yuqori tezlik va qulaylikni taqdim etuvchi 888starz apk ni yuklab oling va kazino o‘yinlarida qatnashing yoki sportga stavkalar qiling. Ushbu ilova foydalanuvchilarga xavfsizlikni kafolatlaydi va barcha kerakli vositalar bilan ta’minlaydi. Yuklab olish jarayoni oson va tezkor.