Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರದ ಜೊತೆ ಮತ್ತೊಂದು ಸಂಘರ್ಷಕ್ಕೆ ಸಜ್ಜಾದ ರಾಜ್ಯ
    ರಾಜಕೀಯ

    ಕೇಂದ್ರದ ಜೊತೆ ಮತ್ತೊಂದು ಸಂಘರ್ಷಕ್ಕೆ ಸಜ್ಜಾದ ರಾಜ್ಯ

    vartha chakraBy vartha chakraಜನವರಿ 2, 202523 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.2
    ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಸಮರಕ್ಕೆ ರಾಜ್ಯ ಸರ್ಕಾರ ಸಜ್ಜಾಗುತ್ತಿದೆ. ಈ ಬಾರಿ ದಕ್ಷಿಣದ ರಾಜ್ಯಗಳ ನೇತೃತ್ವದೊಂದಿಗೆ ಕೇಂದ್ರದ ವಿರುದ್ಧ ಸಂಘರ್ಷಕ್ಕೆ ಮುನ್ನುಡಿ ಇಡಲು ಚಿಂತನೆ ನಡೆದಿದೆ.
    ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ರಾಜ್ಯಗಳಿಂದ ಸಂಗ್ರಹವಾದ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ರಾಜ್ಯ ಅರಣ್ಯ ಮಂತ್ರಿ ಈಶ್ವರ ಖಂಡ್ರೆ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಯುತವಾಗಿ ರಾಜ್ಯಗಳಿಗೆ ಬಿಡುಗಡೆಯಾಗಬೇಕಾಗಿರುವ ಈ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಒತ್ತಾಯಿಸಲು
    ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದಾಗಿ ಹೇಳಿದ್ದಾರೆ.
    ವನ್ಯಜೀವಿಗಳು ಕಾಡಿನಿಂದ ಹೊರಬರುತ್ತಿದ್ದು, ಅವು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗುತ್ತಿವೆ, ಮಾನವ -ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟುವ ದೃಷ್ಟಿಯಿಂದ ರೈಲ್ವೆ ಬ್ಯಾರಿಕೇಡ್ ಅಳವಡಿಸಲು, ಕಾರಿಡಾರ್ ನಿರ್ಮಿಸಲು ಕ್ಯಾಂಪಾದಲ್ಲಿರುವ ರಾಜ್ಯದ 1400 ಕೋಟಿ ರೂ. ಹಣವನ್ನೇ ಬಿಡುಗಡೆ ಮಾಡುತ್ತಿಲ್ಲ ಎಂದು ದೂರಿದರು
    ಈ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆಗ್ರಹಿಸಲು ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರ ಬಳಿಗೆ ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗ ತೆಗೆದುಕೊಂಡು ಹೋಗುವ ಬಗ್ಗೆ ಚರ್ಚಿಸಿದ್ದು, ಶೀಘ್ರವೇ ಎಲ್ಲ ಸಚಿವರಿಗೂ ಪತ್ರ ಬರೆಯಲಾಗುವುದು ಎಂದರು.
    ಆಗಸ್ಟ್ 12ರಂದು ಬೆಂಗಳೂರಿನಲ್ಲಿ ನಡೆದ ಮಾನವ-ಆನೆ ಸಂಘರ್ಷ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಜಾರ್ಖಂಡ್ ರಾಜ್ಯದ ಸಚಿವರು ಕೂಡ ಕೇಂದ್ರಕ್ಕೆ ನಿಯೋಗದಲ್ಲಿ ಆಗಮಿಸಲು ಸಮ್ಮಿತಿಸಿದ್ದರು ಎಂದು ತಿಳಿಸಿದರು.
    ಆನೆಗಳಿಂದ ಬೆಳೆಹಾನಿ ಮತ್ತು ಜೀವಹಾನಿ ಆಗುತ್ತಿದ್ದು, ಇದನ್ನು ತಪ್ಪಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ನಿರ್ಮಿಸಲು ಯೋಜನೆ ರೂಪಿಸಲಾಗತ್ತಿದೆ. ಇದಕ್ಕೆ 100 ಕೋಟಿ ರೂ. ಅಗತ್ಯವಿದ್ದು, ಬಜೆಟ್ ನಲ್ಲಿ ಅನುದಾನ ನೀಡುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
    ರಾಜ್ಯದ ರಾಷ್ಟ್ರೀಯ ಉದ್ಯಾನ, ವನ್ಯಜೀವಿ ಅಭಯಾರಣ್ಯ, ಮೀಸಲು ಅರಣ್ಯ, ಹುಲಿ ಸಂರಕ್ಷಿತ ಅರಣ್ಯ ಸೇರಿದಂತೆ ವಿವಿಧ ಅರಣ್ಯಗಳಲ್ಲಿ ಹಲವಾರು ವರ್ಷಗಳಿಂದ ಅರಣ್ಯವಾಸಿಗಳು ಜೀವಿಸುತ್ತಿದ್ದು, ಗಂಡ, ಹೆಂಡತಿ ಒಳಗೊಂಡು ಪ್ರತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿ ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು ಎಂದರು.

    Verbattle
    Verbattle
    Verbattle
    ತಮಿಳುನಾಡು ತೆಲಂಗಾಣ ನ್ಯಾಯ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಐಶ್ವರ್ಯಾ ಗೌಡ ವಂಚನೆಯ ಮತ್ತೊಂದು ಪುರಾಣ
    Next Article ಮೆಟ್ರೋದಲ್ಲಿ ಹೀಗೆಲ್ಲಾ ಮಾಡುತ್ತಾರೆ ಹುಷಾರ್..
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • LinwoodGah ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Glennhof ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.